Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:4 - ಕನ್ನಡ ಸತ್ಯವೇದವು C.L. Bible (BSI)

4 “ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ದೇವರೇ ಕೇಳು, ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಿದ್ದಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಮ್ಮ ದೇವರೇ ಕೇಳು; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡು. ಅವರು ದೇಶಭ್ರಷ್ಟರಾಗಿ ಸೂರೆ ಹೋಗುವಂತೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೆಹೆಮೀಯನು ಯೆಹೋವನಿಗೆ ಪ್ರಾರ್ಥಿಸುತ್ತಾ, “ನಮ್ಮ ದೇವರೇ, ನಮ್ಮ ಪ್ರಾರ್ಥನೆಗೆ ಕಿವಿಗೊಡು. ಆ ಮನಷ್ಯರು ನಮ್ಮನ್ನು ದ್ವೇಷಿಸುತ್ತಾರೆ. ಸನ್ಬಲ್ಲಟನು ಮತ್ತು ಟೋಬೀಯನು ನಮ್ಮನ್ನು ಅವಮಾನ ಮಾಡುತ್ತಿದ್ದಾರೆ. ಆ ಕೇಡುಗಳು ಅವರಿಗೇ ಸಂಭವಿಸಲಿ. ಅವರು ನಾಚಿಕೆಯಿಂದ ತಲೆತಗ್ಗಿಸಲಿ; ಸೆರೆಹಿಡಿಯಲ್ಪಟ್ಟವರಂತೆ ಅವಮಾನ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಮ್ಮ ದೇವರೇ, ಆಲಿಸಿರಿ; ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ. ನೀವು ಅವರ ನಿಂದೆಯನ್ನು ಅವರ ತಲೆಗಳ ಮೇಲೆ ಬರಮಾಡಿ, ಸೆರೆಯ ದೇಶದಲ್ಲಿ ಅವರನ್ನು ಸೂರೆಯಾಗಿ ಒಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:4
7 ತಿಳಿವುಗಳ ಹೋಲಿಕೆ  

ಪ್ರಭು, ನಿನ್ನನು ನಿಂದಿಸಿದ ಅನ್ಯಜನರ ಮೇಲೆ I ಎರಗಲಿ ಏಳ್ಮಡಿ ದಂಡನೆ ಅವರೆದೆಯ ಮೇಲೆ II


ಅಪಹಾಸ್ಯಮಾಡುವವರನ್ನು ಆತ ಅಪಹಾಸ್ಯ ಮಾಡುವನು; ನಮ್ರರಿಗಾದರೋ ಕೃಪಾಶೀರ್ವಾದವನ್ನು ಅನುಗ್ರಹಿಸುವನು.


ಎಫ್ರಯಿಮ್ ದೇವರನ್ನು ಉಗ್ರವಾಗಿ ರೇಗಿಸಿದೆ; ರಕ್ತಾಪರಾಧವನ್ನು ಅದರ ಮೇಲೆ ಹೊರಿಸಲಾಗುವುದು. ಅದು ಮಾಡಿದ ಅವಮಾನಕ್ಕೆ ಪ್ರತಿಯಾಗಿ ದೇವರು ಅದನ್ನು ಅವಮಾನಕ್ಕೆ ಗುರಿಪಡಿಸುವರು.


ಆಗ ದಾವೀದನು ತನ್ನ ಬಳಿಯಲ್ಲೆ ನಿಂತಿದ್ದವರನ್ನು ನೋಡಿ, “ಜೀವಸ್ವರೂಪರಾದ ದೇವರ ಸೈನ್ಯವನ್ನು ಹೀಗೆ ಹಿಯ್ಯಾಳಿಸುವ, ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಯೇಲರಿಗೆ ಬಂದಿರುವ ನಿಂದೆ ಅವಮಾನವನ್ನು ನೀಗಿಸುವವನಿಗೆ ಏನು ಸಿಕ್ಕುವುದೆಂದು ಹೇಳಿದಿರಿ?” ಎಂದು ಕೇಳಿದನು.


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು