Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 4:9 - ಕನ್ನಡ ಸತ್ಯವೇದವು C.L. Bible (BSI)

9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಆ ಜನರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲುಗಾರರನ್ನಿರಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾವಾದರೋ ನಮ್ಮ ದೇವರಿಗೆ ಮೊರೆಯಿಟ್ಟು ಅವರಿಗೆ ವಿರುದ್ಧವಾಗಿ ಅವರು ಬರುವ ದಾರಿಯಲ್ಲಿ ಹಗಲಿರುಳು ಕಾವಲಿಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನಾವು ದೇವರಿಗೆ ಪ್ರಾರ್ಥಿಸಿದೆವು ಮತ್ತು ನಮ್ಮ ಮೇಲೆ ಬೀಳಲು ಬರುವ ಶತ್ರುಗಳಿಗೆ ನಾವು ತಯಾರಿರುವಂತೆ ಹಗಲು ರಾತ್ರಿ ಪಹರೆ ಮಾಡಲು ಗೋಡೆಯ ಮೇಲೆ ಕಾವಲುಗಾರರನ್ನು ನೇಮಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೆ ನಾವು ನಮ್ಮ ದೇವರಿಗೆ ಪ್ರಾರ್ಥನೆಮಾಡಿ, ಅವರಿಗೆ ಎದುರಾಗಿ ರಾತ್ರಿ ಹಗಲು ಕಾವಲು ಇಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 4:9
15 ತಿಳಿವುಗಳ ಹೋಲಿಕೆ  

ಸ್ವಸ್ಥಚಿತ್ತರಾಗಿರಿ, ಜಾಗರೂಕರಾಗಿರಿ. ಏಕೆಂದರೆ, ನಿಮ್ಮ ಶತ್ರುವಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ, ಯಾರನ್ನು ಕಬಳಿಸುವುದೆಂದು ಅತ್ತಿತ್ತ ಹುಡುಕಾಡುತ್ತಿರುವನು.


ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಪ್ರಲೋಭನೆಗೆ ಒಳಗಾಗದಂತೆ ಎಚ್ಚರವಾಗಿದ್ದು ಪ್ರಾರ್ಥನೆಮಾಡಿರಿ. ಆತ್ಮಕ್ಕೇನೊ ಆಸಕ್ತಿ ಇದೆ, ಆದರೆ ದೇಹಕ್ಕೆ ಶಕ್ತಿಸಾಲದು,” ಎಂದರು.


ಅವನು ಯಕೋಬನಿಗೆ, “ಇನ್ನು ಮೇಲೆ ನೀನು ಯಕೋಬ ಎನಿಸಿಕೊಳ್ಳುವುದಿಲ್ಲ; ದೇವರ ಸಂಗಡ ಹಾಗು ಮನುಷ್ಯರ ಸಂಗಡ ಹೋರಾಡಿ ಗೆದ್ದವನಾದ್ದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರುಂಟಾಗುವುದು,” ಎಂದು ಹೇಳಿದನು.


ಅತ್ತ ನಮ್ಮ ವಿರೋಧಿಗಳು, “ಅವರಿಗೆ ತಿಳಿಯದೆ, ಗೋಚರವಾಗದೆ, ಫಕ್ಕನೆ ಅವರೊಳಗೆ ನುಗ್ಗಿ ಅವರನ್ನು ಕೊಂದು ಕೆಲಸವನ್ನು ನಿಲ್ಲಿಸಿಬಿಡೋಣ,” ಎಂದುಕೊಳ್ಳುತ್ತಿದ್ದರು.


ಇತ್ತ ಯೆಹೂದ್ಯರೇ, “ಹೊರೆಹೊರುವವರ ಬಲ ಕುಂದಿಹೋಯಿತು. ಧೂಳಿನ ರಾಶಿ ವಿಪರೀತ ಆಗಿದೆ; ಈ ಗೋಡೆಯನ್ನು ಕಟ್ಟುವುದು ನಮ್ಮಿಂದಾಗದು,” ಎಂದರು.


ಭಂಗಪಡಿಸುತ್ತಾನೆ ವಂಚಕರ ಉಪಾಯಗಳನು ಕೈಗೂಡಗೊಳಿಸನು ಅವರ ಪ್ರಯತ್ನಗಳನು.


ವ್ಯರ್ಥವಾಗಿಪನು ಪ್ರಭು ರಾಷ್ಟ್ರಯೋಜನೆಗಳನು I ನಿರರ್ಥಕವಾಗಿಪನು ಜನರ ದುಷ್ಟಸಂಕಲ್ಪಗಳನು II


ಸರ್ವೇಶ್ವರನ ದೃಷ್ಟಿ ಸಜ್ಜನರನ್ನು ಕಾಯುವುದು; ವಂಚಕರ ಮಾತನ್ನು ನಿರರ್ಥಕಗೊಳಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು