Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:12 - ಕನ್ನಡ ಸತ್ಯವೇದವು C.L. Bible (BSI)

12 ಅವರು, “ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವುದಿಲ್ಲ. ನೀವು ಹೇಳಿದಂತೆಯೇ, ಮಾಡುತ್ತೇವೆ,” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಯಿಸಿದೆ; ಯಾಜಕರ ಮುಂದೆ, ತಾವು ಕೊಟ್ಟ ಮಾತಿನಂತೆ ನಡೆಯುವುದಾಗಿ ಪ್ರಮಾಣ ಮಾಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅದಕ್ಕೆ ಅವರು, “ನಾವು ಅವರಿಂದ ತೆಗೆದುಕೊಂಡದ್ದನ್ನು ಹಿಂದಕ್ಕೆ ಕೊಡುತ್ತೇವೆ, ಅವರಿಂದ ಏನೂ ಕೇಳುವುದಿಲ್ಲ, ನೀನು ಹೇಳಿದಂತೆಯೇ ಮಾಡುತ್ತೇವೆ” ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರೆಸಿ ಈ ಮಾತಿನಂತೆ ನಡೆಯುವುದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರು - ಹಿಂದಕ್ಕೆ ಕೊಡುತ್ತೇವೆ; ಅವರಿಂದ ಏನೂ ಕೇಳುವದಿಲ್ಲ. ನೀನು ಹೇಳಿದಂತೆಯೇ ಮಾಡುತ್ತೇವೆ ಎಂದು ಉತ್ತರಕೊಟ್ಟರು. ಆಗ ನಾನು ಯಾಜಕರನ್ನು ಕರಿಸಿ ಈ ಮಾತಿನಂತೆ ನಡೆಯುವದಾಗಿ ಅವರಿಂದ ಪ್ರಮಾಣ ಮಾಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆಗ ಶ್ರೀಮಂತರೂ ಅಧಿಕಾರಿಗಳೂ, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ನಾವು ಹೆಚ್ಚೇನೂ ಕೇಳುವುದಿಲ್ಲ. ನೆಹೆಮೀಯನೇ, ನೀನು ಹೇಳಿದಂತೆಯೇ ನಾವು ಮಾಡುತ್ತೇವೆ” ಎಂದರು. ಆಗ ನಾನು ದೇವರ ಮುಂದೆ ಅವರಿಂದ ಪ್ರತಿಜ್ಞೆ ಮಾಡಿಸಲು ಯಾಜಕರನ್ನು ಕರೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಅದಕ್ಕವರು, “ನಾವು ಹಿಂದಕ್ಕೆ ಕೊಡುತ್ತೇವೆ. ಅವರಿಂದ ಏನೂ ಕೇಳುವುದಿಲ್ಲ. ನೀನು ಹೇಳಿದ ಹಾಗೆ ಮಾಡುತ್ತೇವೆ,” ಎಂದರು. ಆಗ ನಾನು ಯಾಜಕರನ್ನು ಕರೆದು, ಅವರು ಈ ಮಾತಿನ ಪ್ರಕಾರ ಮಾಡುವ ಹಾಗೆ ಅವರಿಂದ ಪ್ರಮಾಣವನ್ನು ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:12
15 ತಿಳಿವುಗಳ ಹೋಲಿಕೆ  

ಆಗ ಎಜ್ರನು ಎದ್ದು, ಯಾಜಕರ ಮತ್ತು ಲೇವಿಯರ ಮುಖ್ಯಸ್ಥರಿಗೂ ಎಲ್ಲ ಇಸ್ರಯೇಲರಿಗೂ ಈ ಪ್ರಕಾರ ನಡೆಯುವುದಾಗಿ ಪ್ರಮಾಣ ಮಾಡಬೇಕೆಂದು ಹೇಳಿದನು. ಅವರು ಹಾಗೆಯೇ ಪ್ರಮಾಣ ಮಾಡಿದರು.


ಜಕ್ಕಾಯನು ನೆರೆದಿದ್ದ ಜನರ ಮುಂದೆ ಎದ್ದುನಿಂತು ಯೇಸುವಿಗೆ, “ಪ್ರಭುವೇ, ನನ್ನ ಆಸ್ತಿಪಾಸ್ತಿಯಲ್ಲಿ ಅರ್ಧಭಾಗವನ್ನು ಬಡಬಗ್ಗರಿಗೆ ಕೊಟ್ಟುಬಿಡುತ್ತೇನೆ. ಯಾರಿಗಾದರೂ ಮೋಸಮಾಡಿ ಅವರಿಂದೇನಾದರೂ ನಾನು ಕಸಿದುಕೊಂಡಿದ್ದರೆ ಅದಕ್ಕೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ಆದರೆ ಯೇಸು ಮೌನವಾಗಿದ್ದರು. “ಜೀವಂತ ದೇವರ ಮೇಲೆ ಆಣೆಯಿರಿಸಿ ನಾನು ನಿನ್ನನ್ನು ಕೇಳುತ್ತಿದ್ದೇನೆ, ‘ನೀನು ದೇವರ ಪುತ್ರ ಹಾಗೂ ಅಭಿಷಿಕ್ತನಾದ ಲೋಕೋದ್ಧಾರಕನೋ?’ ನಮಗೆ ಹೇಳು,” ಎಂದನು ಆ ಪ್ರಧಾನಯಾಜಕ.


ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ದೇಶನಿವಾಸಿಗಳು ಮಾರುವುದಕ್ಕೆ ತರುವ ಯಾವ ಸರಕುಗಳನ್ನೂ ಧಾನ್ಯವನ್ನೂ ಸಬ್ಬತ್‍ ಮೊದಲಾದ ಪರಿಶುದ್ಧ ದಿನಗಳಲ್ಲಿ ಕೊಂಡುಕೊಳ್ಳುವುದಿಲ್ಲ; ಪ್ರತಿಯೊಂದು ಏಳನೆಯ ವರ್ಷ ಭೂಮಿಯ ಸಾಗುವಳಿಯನ್ನೂ, ಇತರರು ಕೊಡಬೇಕಾದ ಸಾಲವನ್ನೂ ಬಿಟ್ಟುಬಿಡುತ್ತೇವೆ;


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಕೂಡಿಬಂದವರೆಲ್ಲರೂ ಗಟ್ಟಿಯಾಗಿ, “ನೀವು ಹೇಳಿದಂತೆಯೇ ಮಾಡುವುದು ನಮ್ಮ ಕರ್ತವ್ಯ.


ಅವರ ಹೊಲ, ದ್ರಾಕ್ಷೀತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನು ಹಿಂದಕ್ಕೆ ಕೊಟ್ಟುಬಿಡಿ. ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೆ ಶೇಕಡಾ ಇಷ್ಟೆಂದು ವಸೂಲಿಮಾಡುವ ಹಕ್ಕನ್ನೂ ಕೂಡ ದಯವಿಟ್ಟು ಈ ದಿನವೇ ರದ್ದುಗೊಳಿಸಿ,” ಎಂದು ಹೇಳಿದೆ.


‘ದೇಶನಿವಾಸಿಗಳಿಗೆ ನಮ್ಮ ಹೆಣ್ಣುಗಳನ್ನು ಕೊಡುವುದಿಲ್ಲ; ನಮ್ಮ ಮಕ್ಕಳಿಗೆ ಅವರಿಂದ ಹೆಣ್ಣು ತೆಗೆದುಕೊಳ್ಳುವುದಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು