ನೆಹೆಮೀಯ 5:13 - ಕನ್ನಡ ಸತ್ಯವೇದವು C.L. Bible (BSI)13 ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇದಲ್ಲದೆ ನನ್ನ ನಡು ಪಟ್ಟಿಯನ್ನು ಝಾಡಿಸಿ ಅವರಿಗೆ, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಸ್ವತ್ತಿನಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಝಾಡಿಸಲ್ಪಟ್ಟ ನಡುಪಟ್ಟಿಯಂತೆಯೇ ಬರಿದಾಗಲಿ” ಅಂದೆನು. ಕೂಡಲೆ ಸಭೆಯವರೆಲ್ಲಾ, “ಹಾಗೆಯೇ ಆಗಲಿ” ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನಂತರ ನಾನು ನನ್ನ ಉಡುಪಿನ ನೆರಿಗೆಯನ್ನು ಝಾಡಿಸಿ, “ತಾನು ಮಾಡಿದ ಪ್ರತಿಜ್ಞೆಯಂತೆ ನಡೆಯದವನನ್ನು ದೇವರು ಅವನ ಮನೆಯಿಂದ ಝಾಡಿಸಿಬಿಡಲಿ; ಅವನು ತಾನು ಗಳಿಸಿದ್ದೆಲ್ಲವನ್ನು ಕಳೆದುಕೊಳ್ಳಲಿ” ಎಂದು ಹೇಳಿದಾಗ ಜನರೆಲ್ಲರೂ “ಆಮೆನ್” ಅಂದರು; ಯೆಹೋವನನ್ನು ಸ್ತುತಿಸಿದರು. ತಾವು ಮಾಡಿದ ಪ್ರತಿಜ್ಞೆಯಂತೆ ನಡೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಾನು ನನ್ನ ಬಟ್ಟೆಯನ್ನು ಝಾಡಿಸಿ, “ಈ ಮಾತಿನ ಪ್ರಕಾರ ಮಾಡದೆ ಇರುವ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ, ಅವನ ಆಸ್ತಿಪಾಸ್ತಿಯಿಂದಲೂ ಝಾಡಿಸಲಿ. ಅವನು ಇದೇ ಪ್ರಕಾರ ಝಾಡಿಸಿ, ಬರಿದಾಗಲಿ,” ಎಂದೆನು. ಅದಕ್ಕೆ ಸಭೆಯವರೆಲ್ಲರೂ, “ಆಮೆನ್” ಎಂದು ಹೇಳಿ ಯೆಹೋವ ದೇವರನ್ನು ಸ್ತುತಿಸಿದರು. ಜನರು ತಾವು ಕೊಟ್ಟ ಮಾತಿನ ಪ್ರಕಾರ ನಡೆದುಕೊಂಡರು. ಅಧ್ಯಾಯವನ್ನು ನೋಡಿ |