Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:16 - ಕನ್ನಡ ಸತ್ಯವೇದವು C.L. Bible (BSI)

16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ; ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಮತ್ತು ನನ್ನ ಎಲ್ಲಾ ಸೇವಕರೂ ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆನು. ನಾವು ಅಲ್ಲಿ ಭೂಸ್ಥಿತಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಜೆರುಸಲೇಮಿನ ಗೋಡೆ ಕಟ್ಟುವ ಕೆಲಸದಲ್ಲಿ ನಾನು ತುಂಬಾ ಪ್ರಯಾಸಪಟ್ಟೆನು. ಗೋಡೆಯ ನಿರ್ಮಾಣ ಕೆಲಸಕ್ಕಾಗಿ ನನ್ನ ಜನರೆಲ್ಲರೂ ಒಟ್ಟಾಗಿ ಸೇರಿದರು. ನಾವು ಯಾರಿಂದಲೂ ಭೂಮಿಯನ್ನು ಕಿತ್ತುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆ ಗೋಡೆ ಕಟ್ಟುವುದರಲ್ಲೇ ನಿರತನಾಗಿದ್ದೆ ಮತ್ತು ನನ್ನ ಎಲ್ಲಾ ಸೇವಕರು ಪ್ರತಿದಿನ ಆ ಕೆಲಸಕ್ಕೆ ಬರುವಂತೆ ನೋಡುತ್ತಿದ್ದೆ. ನಾವು ಅಲ್ಲಿ ಭೂಮಿಯನ್ನು ಸಂಪಾದಿಸಿಕೊಂಡಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:16
11 ತಿಳಿವುಗಳ ಹೋಲಿಕೆ  

ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಹದವಾದ ಭೂಮಿಯ ಮೇಲೆ ಬಿದ್ದ ಬೀಜಗಳು ಎಂದರೆ ದೇವರ ವಾಕ್ಯವನ್ನು ಕೇಳಿ ಅದನ್ನು ಸದ್ಗುಣಶೀಲ ಹಾಗೂ ಸಾತ್ವಿಕವಾದ ಹೃದಯದಲ್ಲಿಟ್ಟು ಸಹನೆಯಿಂದ ಫಲ ತರುವವರು.”


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ನನಗಿಂತ ಮುಂಚೆಯಿದ್ದ ರಾಜ್ಯಪಾಲರು ಜನರ ಮೇಲೆ ಬಹಳ ತೆರಿಗೆ ಹೊರಿಸಿ, ಅವರಿಂದ ದಿನಕ್ಕೆ ನಾಲ್ವತ್ತು ಬೆಳ್ಳಿ ನಾಣ್ಯದ ಆಹಾರವನ್ನೂ ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು; ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸುತ್ತ ಇದ್ದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಹಾಗೆ ಮಾಡದೆ


ಇದಲ್ಲದೆ, ಯೆಹೂದ್ಯರಲ್ಲಿ ನೂರೈವತ್ತುಮಂದಿ ಅಧಿಕಾರಿಗಳು ಹಾಗು ಸುತ್ತಣ ಜನಾಂಗಗಳ ಮಧ್ಯೆ ಇಂದ ನಮ್ಮ ಬಳಿಗೆ ಬರುತ್ತಿದ್ದವರು ನನ್ನ ಪಂಕ್ತಿಯಲ್ಲೇ ಊಟಮಾಡುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು