Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:6 - ಕನ್ನಡ ಸತ್ಯವೇದವು C.L. Bible (BSI)

6 ಅವರ ಬೊಬ್ಬೆಯನ್ನೂ ಟೀಕೆಗಳನ್ನೂ ಕೇಳಿ ನನಗೆ ಬಹಳ ಸಿಟ್ಟು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರ ಬೊಬ್ಬೆಯನ್ನೂ, ಮಾತುಗಳನ್ನೂ ಕೇಳಿದಾಗ ನಾನು ಬಹಳ ಸಿಟ್ಟುಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರ ಬೊಬ್ಬೆಯನ್ನೂ ಮಾತುಗಳನ್ನೂ ಕೇಳಿದಾಗ ನನಗೆ ಬಲು ಸಿಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಅವರ ದೂರುಗಳನ್ನು ಕೇಳಿಸಿಕೊಂಡಾಗ ಬಹಳವಾಗಿ ಸಿಟ್ಟುಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರ ಕೂಗನ್ನೂ, ಈ ಆರೋಪಗಳನ್ನೂ ನಾನು ಕೇಳಿ ಬಹಳವಾಗಿ ಕೋಪಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:6
8 ತಿಳಿವುಗಳ ಹೋಲಿಕೆ  

ಕೋಪಗೊಂಡು ಅವರನ್ನು ಶಪಿಸಿದೆ; ಅವರಲ್ಲಿ ಕೆಲವರನ್ನು ಹೊಡೆದು ಅವರ ಕೂದಲುಗಳನ್ನು ಕೀಳಿಸಿದೆ.


ಕೋಪಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ; ಸೂರ್ಯನು ಮುಳುಗುವ ಮುನ್ನ ನಿಮ್ಮ ಕೋಪವು ಇಳಿಯಲಿ.


ಅದಕ್ಕೆ ಮೋಶೆ ಬಹುಕೋಪಗೊಂಡನು. ಸರ್ವೇಶ್ವರನಿಗೆ, “ತಾವು ಇವರ ನೈವೇದ್ಯವನ್ನು ಲಕ್ಷ್ಯಕ್ಕೆ ತೆಗೆದುಕೊಳ್ಳಬೇಡಿ. ನಾನು ಇವರಿಂದ ಒಂದು ಕತ್ತೆಯನ್ನೂ ಕೂಡ ತೆಗೆದುಕೊಂಡವನಲ್ಲ. ಅವರಲ್ಲಿ ಒಬ್ಬನಿಗಾದರೂ ಹಾನಿಮಾಡಿದವನಲ್ಲ,” ಎಂದು ಮನವಿಮಾಡಿದನು.


ಆಗ ನಿನ್ನ ಪರಿವಾರದವರಾದ ಇವರೆಲ್ಲರು ನನ್ನ ಬಳಿಗೆ ಬಂದು ಅಡ್ಡಬಿದ್ದು - ನೀವೂ ನಿಮ್ಮ ಅಧೀನದಲ್ಲಿರುವ ಜನರೆಲ್ಲರು ನಮ್ಮನ್ನು ಬಿಟ್ಟು ಹೋಗಿಬಿಡಿ - ಎಂದು ಬೇಡುವರು. ಇದಾದ ಮೇಲೆ ನಾನು ಹೊರಟುಹೋಗುವೆನು.’ ಈ ಮಾತುಗಳನ್ನು ಹೇಳಿ ಮೋಶೆ ಕೋಪದಿಂದ ಕಿಡಿಕಿಡಿಯಾಗಿ ಫರೋಹನನ್ನು ಬಿಟ್ಟು ಹೊರಟುಹೋದನು.


ಯೇಸು ಸುತ್ತಲೂ ಇದ್ದವರನ್ನು ಕೋಪದಿಂದ ದಿಟ್ಟಿಸಿ, ಅವರ ಹೃದಯ ಕಲ್ಲಾಗಿರುವುದನ್ನು ಕಂಡು, ಮನನೊಂದು, ಬತ್ತಿದ ಕೈಯುಳ್ಳವನಿಗೆ, “ನಿನ್ನ ಕೈಯನ್ನು ಚಾಚು,” ಎಂದರು. ಅವನು ಚಾಚಿದನು, ಅದು ಸಂಪೂರ್ಣವಾಗಿ ಸ್ವಸ್ಥವಾಯಿತು.


ಈ ದುಷ್ಕೃತ್ಯದ ನಿಮಿತ್ತ ಬಹಳವಾಗಿ ವ್ಯಸನಗೊಂಡು ಟೋಬೀಯನ ಮನೆಯ ಸಾಮಾನುಗಳನ್ನು


ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.


ನಿನ್ನ ಶಾಸ್ತ್ರದ ಭ್ರಷ್ಠರನು ಕಂಡಾಗ I ನನಗೆ ಬರುತ್ತದೆ ಕೋಪೋದ್ರೇಕ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು