Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:7 - ಕನ್ನಡ ಸತ್ಯವೇದವು C.L. Bible (BSI)

7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೀಮಂತರನ್ನೂ ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೆ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಮನಸ್ಸಿನಲ್ಲಿ ಸ್ವಲ್ಪ ಆಲೋಚಿಸಿಕೊಂಡು ಶ್ರೀಮಂತರಿಗೂ, ಅಧಿಕಾರಿಗಳಿಗೂ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದೆಂದರೇನು” ಎಂದು ಹೇಳಿ ಮಹಾಸಭೆಯನ್ನು ಕೂಡಿಸಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾನು ತುಸು ಆಲೋಚಿಸಿಕೊಂಡು ಶ್ರೀಮಂತರಿಗೂ ಅಧಿಕಾರಿಗಳಿಗೂ - ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವದೆಂದರೇನು ಎಂದು ಹೇಳಿ ಅವರೊಡನೆ ಬಹಳವಾಗಿ ಹೆಣಗಾಡಿ ಅವರಿಗೆ ವಿರೋಧವಾಗಿ ಮಹಾಸಭೆಯನ್ನು ಕೂಡಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನನ್ನ ಕೋಪವು ಶಾಂತವಾದ ಬಳಿಕ ಧನಿಕರ ಮತ್ತು ಅಧಿಕಾರಿಗಳ ಬಳಿಗೆ ಹೋಗಿ, “ನೀವು ನಿಮ್ಮ ಸ್ವಂತ ಜನರಿಗೆ ಕೊಟ್ಟಿರುವ ಸಾಲಕ್ಕೆ ಬಡ್ಡಿಯನ್ನು ಕೊಡಲು ಬಲವಂತ ಮಾಡುತ್ತಿದ್ದೀರಿ. ನೀವು ಕೂಡಲೇ ಅದನ್ನು ನಿಲ್ಲಿಸಬೇಕು” ಎಂದೆನು. ಅನಂತರ ನಾನು ಎಲ್ಲಾ ಜನರನ್ನು ಒಟ್ಟುಗೂಡಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಾನು ತುಸು ಆಲೋಚಿಸಿ ನೋಡಿದೆ. ಬಳಿಕ ಶ್ರೇಷ್ಠರನ್ನೂ, ಅಧಿಕಾರಿಗಳನ್ನೂ ಖಂಡಿಸಿ, “ನೀವು ನಿಮ್ಮ ಸಹೋದರರಿಂದ ಬಡ್ಡಿ ತೆಗೆದುಕೊಳ್ಳುವುದು ಸರಿಯೇ?” ಎಂದು ಹೇಳಿ ಅವರೊಡನೆ ಬಹಳವಾಗಿ ವಾಗ್ವಾದಿಸಿ, ಅವರಿಗೆ ವಿರೋಧವಾಗಿ ಮಹಾ ಸಭೆಯನ್ನು ಕೂಡಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:7
25 ತಿಳಿವುಗಳ ಹೋಲಿಕೆ  

ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.


“ನನ್ನ ಜನರಲ್ಲಿ ಒಬ್ಬ ಬಡವನಿಗೆ ನೀನು ಸಾಲಕೊಟ್ಟರೆ ಅವನನ್ನು ಸಾಲಗಾರನಂತೆ ಕಾಣಬಾರದು. ಅವನಿಂದ ಬಡ್ಡಿಯನ್ನು ಕೇಳಬಾರದು.


“ನಿನ್ನವರು ರಕ್ತ ಸುರಿಸುವುದಕ್ಕೆ ಲಂಚಪಡೆದಿದ್ದಾರೆ; ನಿನ್ನವರು ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭಕ್ಕೆ ಹಣಕೊಟ್ಟು ತಮ್ಮ ನೆರೆಯವರನ್ನು ಬಾಧಿಸಿ, ಸುಲಿಗೆಮಾಡಿ, ನನ್ನನ್ನು ಮರೆತೇಬಿಟ್ಟಿದ್ದಾರೆ; ಇದು ಸರ್ವೇಶ್ವರನಾದ ದೇವರ ನುಡಿ.


ಕೊಡುವನು ಕಡವನು, ಬಯಸನು ಬಡ್ಡಿಯನು I ಎಡವರ ಕೇಡಿಗೆ ಪಡೆಯನು ಲಂಚವನು I ಕದಲನೆಂದಿಗೂ ಈಪರಿ ನಡೆವವನು II


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಈ ವಿಷಯಗಳನ್ನು ಅಧಿಕಾರವಾಣಿಯಿಂದ ಬೋಧಿಸು; ಎಚ್ಚರಿಸು. ಅವುಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸು; ಯಾರೂ ನಿನ್ನನ್ನು ತಿರಸ್ಕರಿಸದಂತೆ ಎಚ್ಚರವಹಿಸು.


ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.


ಆದರೆ ಕೇಫನು ಅಂತಿಯೋಕ್ಯಕ್ಕೆ ಬಂದಾಗ ಆತನು ತಪ್ಪಿತಸ್ಥನೆಂಬುದು ಸಿದ್ಧವಾಗಿದ್ದುದರಿಂದ ನಾನು ಆತನನ್ನು ಮುಖಾಮುಖಿಯಾಗಿ ಖಂಡಿಸಿದೆ.


ಇನ್ನು ಮುಂದೆ ನಾವು ಯಾರನ್ನೂ ಕೇವಲ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಂದು ಕಾಲದಲ್ಲಿ, ಕ್ರಿಸ್ತಯೇಸುವನ್ನು ನಾವು ಹಾಗೆ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಹಾಗೆ ಮಾಡುವುದಿಲ್ಲ.


ಅವರಿಗೂ ಅವನು ಕಿವಿಗೊಡದೆಹೋದಲ್ಲಿ ಧರ್ಮಸಭೆಗೆ ತಿಳಿಸು. ಧರ್ಮಸಭೆಗೂ ಅವನು ಕಿವಿಗೊಡದೆಹೋದರೆ ಅವನನ್ನು ಧರ್ಮಭ್ರಷ್ಟನೆಂದು ಹಾಗೂ ಬಹಿಷ್ಕೃತನೆಂದು ಪರಿಗಣಿಸು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: :ಇಸ್ರಯೇಲಿನ ರಾಜರುಗಳೇ, ಇನ್ನು ಸಾಕು, ಸಾಕು; ಕೊಳ್ಳೆಯನ್ನೂ ಹಿಂಸಾಚಾರವನ್ನೂ ತ್ಯಜಿಸಿ ನೀತಿನ್ಯಾಯಗಳನ್ನು ನಡೆಸಿರಿ; ನನ್ನ ಜನರ ಬಾಧ್ಯತೆಗಳನ್ನು ತಪ್ಪಿಸುವ ಅನ್ಯಾಯವನ್ನು ಬಿಟ್ಟುಬಿಡಿ; ಇದು ಸರ್ವೇಶ್ವರನಾದ ದೇವರ ನುಡಿ.


ಮರೆಯಾದ ಪ್ರೀತಿಗಿಂತ ಬಹಿರಂಗವಾದ ಗದರಿಕೆ ಲೇಸು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ಯೋಗ್ಯನಾರು ಪ್ರಭು ನಿನ್ನ ಗುಡಾರದಲಿ ಬಿಡಾರಮಾಡಲು? I ಅರ್ಹನಾರು ನಿನ್ನ ಪವಿತ್ರ ಶಿಖರದಲಿ ವಾಸವಾಗಿರಲು? II


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಕಸಿದುಕೊಳ್ಳಲಿ ಅವನದೆಲ್ಲವನು ಸಾಲಿಗನು I ಸುಲಿದುಕೊಳ್ಳಲಿ ಪರರು ಅವನ ಕಷ್ಟಾರ್ಜಿತವನು II


ನಾನು ಕೋಪಗೊಂಡು ನಿಮ್ಮನ್ನು ಶತ್ರುಗಳ ಕೈಯಿಂದ ಸಂಹಾರ ಮಾಡಿಸುವೆನು. ನಿಮ್ಮ ಹೆಂಡತಿಯರು ವಿಧವೆಗಳಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ದುರುಳರಿಗೆದುರಾಗಿ ನನ್ನ ಪಕ್ಷ ವಹಿಸುವರಾರು? I ಕೆಡುಕರಿಗೆ ವಿರುದ್ಧ ನನ್ನ ಪರ ನಿಲ್ಲುವವರಾರು? II


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು