Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 5:8 - ಕನ್ನಡ ಸತ್ಯವೇದವು C.L. Bible (BSI)

8 “ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವರಿಗೆ, “ನಾವು ನಮ್ಮಿಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣ ಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತಿದ್ದೀರಿ; ಈಗ ಅವರನ್ನು ನಾವು ಕೊಂಡುಕೊಳ್ಳಬೇಕೇನು” ಎನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾವು ನವ್ಮಿುಂದಾಗುವಷ್ಟು ಮಟ್ಟಿಗೆ ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲ್ಪಟ್ಟವರನ್ನು ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನು ಮಾರಿಬಿಡುತ್ತೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು ಅನ್ನಲು ಅವರು ಉತ್ತರಕೊಡದೆ ಸುಮ್ಮನಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಮ್ಮ ಯೆಹೂದಿ ಜನರನ್ನು ಪರದೇಶಗಳಲ್ಲಿ ಗುಲಾಮರನ್ನಾಗಿ ಮಾರಿದ್ದರು. ಅಂಥವರನ್ನು ನಾವು ಕ್ರಯಕೊಟ್ಟು ಕೊಂಡುಕೊಂಡು ಅವರನ್ನು ಗುಲಾಮತನದಿಂದ ಬಿಡುಗಡೆ ಮಾಡಿಸಿದೆವು. ಆದರೆ ನೀವು ಈಗ ಮತ್ತೆ ಗುಲಾಮರನ್ನಾಗಿ ಮಾಡುತ್ತಿದ್ದೀರಿ” ಎಂದೆನು. ಸೇರಿಬಂದಿದ್ದ ಶ್ರೀಮಂತರೂ ಅಧಿಕಾರಿಗಳೂ ಸುಮ್ಮನೆ ಬಾಯಿ ಮುಚ್ಚಿಕೊಂಡರು. ಅವರಿಗೆ ಏನೂ ಹೇಳಲಿಕ್ಕೂ ಆಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 5:8
14 ತಿಳಿವುಗಳ ಹೋಲಿಕೆ  

ಒಬ್ಬನು ಕೊಡುವುದಕ್ಕೆ ಮನಸ್ಸುಳ್ಳವನಾಗಿದ್ದರೆ, ಅವನು ತನ್ನಲ್ಲಿ ಇರುವುದಕ್ಕೆ ತಕ್ಕಂತೆ ಕೊಟ್ಟರೆ ಸಾಕು. ನಿಮ್ಮಲ್ಲಿ ಇಲ್ಲದ್ದನ್ನು ದೇವರು ಬಯಸುವುದಿಲ್ಲ.


ಈ ನಿನ್ನ ಅರಿವಿನಿಂದ ದುರ್ಬಲ ಸೋದರನು ನಾಶಕ್ಕೆ ಗುರಿಯಾಗುತ್ತಾನೆ. ಯೇಸುಕ್ರಿಸ್ತರು ಅವನಿಗಾಗಿಯೂ ಪ್ರಾಣತ್ಯಾಗ ಮಾಡಲಿಲ್ಲವೇ?


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಉಳ್ಳ ಪ್ರತಿಯೊಬ್ಬನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ. ಅವನು ಸಮೃದ್ಧನಾಗುತ್ತಾನೆ. ಇಲ್ಲದವನಿಂದ ಇರುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ.


ಒಬ್ಬನಿಗೆ ಐದು ತಲೆಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು - ಹೀಗೆ ಅವರವರ ಸಾಮರ್ಥ್ಯಕ್ಕೆ ತಕ್ಕಂತೆ ವಹಿಸಿಕೊಟ್ಟು ಹೊರಟುಹೋದ.


‘ಏನಯ್ಯ, ಸಮಾರಂಭಕ್ಕೆ ತಕ್ಕ ಉಡುಪಿಲ್ಲದೆ ಒಳಗೆ ಹೇಗೆ ಬಂದೆ?’ ಎಂದು ಅವನನ್ನು ಕೇಳಿದ. ಅದಕ್ಕೆ ಅವನು ಮೌನತಳೆದ.


“ಯೋಬನೇ, ಇವರು ಉತ್ತರಿಸದೆ ನಿಬ್ಬೆರಗಾಗಿರುವರು ಇವರ ಸೊಲ್ಲೇ ಅಡಗಿಹೋಗಿರುವುದು.


ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು.


“ಒಬ್ಬನು ಸ್ವದೇಶದವನಾದ ಇಸ್ರಯೇಲನನ್ನು ಕದ್ದು ಅವನನ್ನು ಗುಲಾಮನಾಗಿ ನಡೆಸಿಕೊಂಡದ್ದು ಅಥವಾ ಮಾರಿಬಿಟ್ಟದ್ದು ತಿಳಿದುಬಂದರೆ ಕದ್ದವನಿಗೆ ಮರಣಶಿಕ್ಷೆಯಾಗಬೇಕು. ಹೀಗೆ ಅಂಥ ದುಷ್ಟತ್ವವನ್ನು ನಿಮ್ಮ ಮಧ್ಯೆಯಿಂದ ತೆಗೆದುಹಾಕಿಬಿಡಬೇಕು.


“ಒಬ್ಬನು ಮತ್ತೊಬ್ಬನನ್ನು ಕದ್ದೊಯ್ದು ಅವನನ್ನು ಮಾರಿದ್ದರೂ ಅಥವಾ ತನ್ನಲ್ಲೇ ಖೈದಿಯಾಗಿಟ್ಟುಕೊಂಡಿದ್ದರೂ ಅಂಥವನಿಗೆ ಮರಣ ದಂಡನೆಯಾಗಬೇಕು.”


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಆಮೇಲೆ ನಾನು ಅವರಿಗೆ, “ನೀವು ಮಾಡಿದ್ದು ಸರಿಯಲ್ಲ; ನಾವು ನಮ್ಮ ವಿರೋಧಿಗಳಾದ ಅನ್ಯಜನರ ನಿಂದೆಗೆ ಗುರಿಯಾಗದಂತೆ ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು