Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:12 - ಕನ್ನಡ ಸತ್ಯವೇದವು C.L. Bible (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ, ನನ್ನ ಬಗ್ಗೆ ಆ ಕಾಲಜ್ಞಾನ ವಚನವನ್ನು ಉಚ್ಚರಿಸುವುದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ; ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರೆಂದು ನನಗೆ ಗೊತ್ತು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಾನು ಸೂಕ್ಷ್ಮವಾಗಿ ವಿಚಾರ ಮಾಡಿದಾಗ ನನ್ನ ವಿಷಯವಾಗಿ ಆ ಕಾಲ, ಜ್ಞಾನ, ವಚನವನ್ನು ಉಚ್ಚರಿಸುವುದಕ್ಕೂ ಪ್ರವಾದನೆ ನುಡಿಯುವುದಕ್ಕೂ ಇವನನ್ನು ಪ್ರೇರೇಪಿಸಿದವನು ದೇವರಲ್ಲ, ಟೋಬೀಯನೂ, ಸನ್ಬಲ್ಲಟನೂ ಇವನಿಗೆ ಲಂಚ ಕೊಟ್ಟು ಹಾಗೆ ಹೇಳಿದ್ದಾರೆ ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಾನು ಸೂಕ್ಷ್ಮವಾಗಿ ವಿಚಾರಮಾಡಿದಾಗ ನನ್ನ ವಿಷಯವಾಗಿ ಆ ಕಾಲಜ್ಞಾನವಚನವನ್ನು ಉಚ್ಚರಿಸುವದಕ್ಕೆ ಇವನನ್ನು ಪ್ರೇರಿಸಿದವನು ದೇವರಲ್ಲ, ಟೋಬೀಯನೂ ಸನ್ಬಲ್ಲಟನೂ ಇವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದರು ಎಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಶೆಮಾಯನನ್ನು ದೇವರು ಕಳುಹಿಸಿಲ್ಲವೆಂದು ನನಗೆ ಚೆನ್ನಾಗಿ ಗೊತ್ತಿತ್ತು. ಟೋಬೀಯ ಮತ್ತು ಸನ್ಬಲ್ಲಟ್ ಅವನಿಗೆ ಲಂಚಕೊಟ್ಟು ಹಾಗೆ ಹೇಳಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ದೇವರು ಅವನನ್ನು ಕಳುಹಿಸಲಿಲ್ಲ. ಟೋಬೀಯನೂ, ಸನ್ಬಲ್ಲಟನೂ ಶೆಮಾಯನಿಗೆ ಲಂಚಕೊಟ್ಟು, ನನಗೆ ವಿರೋಧವಾಗಿ ಈ ಪ್ರವಾದನೆ ಹೇಳಿಸಿದರೆಂದು ನನಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:12
20 ತಿಳಿವುಗಳ ಹೋಲಿಕೆ  

“ನಾನು ಎದೆಗುಂದಿಸದ ಶಿಷ್ಯನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನನ್ನು ಪ್ರೋತ್ಸಾಹಿಸಿದ್ದೀರಿ.


ಇದಲ್ಲದೆ ಚಕ್ಕೆ, ಲವಂಗ, ರಕ್ತಬೋಳ, ಧೂಪ, ಸುಗಂಧತೈಲ ಮತ್ತು ಸಾಂಬ್ರಾಣಿಗಳನ್ನೂ ಮದ್ಯ, ಎಣ್ಣೆ, ಹದವಾದ ಹಿಟ್ಟು, ಗೋದಿ ಇವುಗಳನ್ನೂ ದನ, ಕುರಿ, ಕುದುರೆ, ರಥ, ಗುಲಾಮ ಮತ್ತು ಜೀತದಾಳು ಇವೆಲ್ಲವನ್ನೂ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನನ್ನ ಜೊತೆಹಿರಿಯರೇ, ದೇವರು ನಿಮಗೆ ವಹಿಸಿಕೊಟ್ಟಿರುವ ಮಂದೆಯನ್ನು ಕಾಯಿರಿ. ಕಡ್ಡಾಯದಿಂದಲ್ಲ, ದೇವರ ಚಿತ್ತಾನುಸಾರ ಅಕ್ಕರೆಯಿಂದ ಕಾಯಿರಿ. ದ್ರವ್ಯದ ದುರಾಶೆಯಿಂದಲ್ಲ, ಸೇವಾಸಕ್ತಿಯಿಂದ ಕಾಯಿರಿ.


ಏಕೆಂದರೆ, ಸಭಾಧ್ಯಕ್ಷನು ದೇವರ ಸೇವೆಯಲ್ಲಿ ಮೇಲ್ವಿಚಾರಕನಾಗಿರುವುದರಿಂದ ನಿಂದಾರಹಿತನಾಗಿರಬೇಕು. ಆತನು ಗರ್ವಿ ಅಥವಾ ಮುಂಗೋಪಿಯಾಗಿರಬಾರದು. ಕುಡಿತವಾಗಲಿ, ಹಿಂಸಾಚಾರವಾಗಲಿ, ಹಿಂಸಾಪ್ರವೃತ್ತಿಯಾಗಲಿ ಅವನಲ್ಲಿರಬಾರದು. ಅವನು ಲಾಭಕೋರನಾಗಿರಬಾರದು.


ಅವನು ಕುಡುಕನು, ಕಲಹಪ್ರಿಯನು ಮತ್ತು ಹೊಡೆದಾಡುವವನು ಆಗಿರಬಾರದು. ಶಾಂತನೂ ದಯಾವಂತನೂ ಹಣದ ವ್ಯಾಮೋಹ ಇಲ್ಲದವನೂ ಆಗಿರಬೇಕು.


ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.


ದೇವರ ಆತ್ಮವನ್ನು ಹೊಂದಿದವನು ಎಲ್ಲವನ್ನೂ ವಿಚಾರಣೆಮಾಡಿ ತಿಳಿದುಕೊಳ್ಳುತ್ತಾನೆ. ಅವನನ್ನು ಯಾರೂ ವಿಚಾರಣೆಗೆ ಗುರಿಮಾಡಲಾಗದು.


ನಾನು ಯಾರ ಬೆಳ್ಳಿಬಂಗಾರಕ್ಕೂ ಬಟ್ಟೆಬರೆಗೂ ಆಶೆಪಟ್ಟವನಲ್ಲ.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ನಾನು ಮಾತಾಡದೆ ಇದ್ದರೂ ‘ಸರ್ವೇಶ್ವರ ಇಂತೆನ್ನುತ್ತಾರೆ’ ಎಂದು ನುಡಿಯುತ್ತಿರುವ ನಿಮಗೆ ಆದ ದರ್ಶನ ಮಿಥ್ಯ, ನೀವು ಹೇಳಿದ ಭವಿಷ್ಯ ಸುಳ್ಳು.’


ಆಗ ಪ್ರವಾದಿ ಯೆರೆಮೀಯನು ಪ್ರವಾದಿ ಹನನ್ಯನಿಗೆ, “ಹನನ್ಯನೇ ಕೇಳು, ಸರ್ವೇಶ್ವರ ನಿನ್ನನ್ನು ಕಳಿಸಲಿಲ್ಲ. ಆದರೂ ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತಿರುವೆ.


‘ನನಗೆ ಕನಸು ಬಿತ್ತು, ಕನಸುಬಿತ್ತು’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದನೆ ಮಾಡುವವರ ನುಡಿಯನ್ನು ಕೇಳಿದ್ದೇನೆ.


ಸರ್ವಶಕ್ತ ಸರ್ವೇಶ್ವರನ ನುಡಿಯಿದು: “ಪ್ರವಾದಿಗಳು ನಿಮಗೆ ಹೇಳುವ ಮಾತುಗಳನ್ನು ಕೇಳಬೇಡಿ. ಅವರು ನಿಮ್ಮಲ್ಲಿ ವ್ಯರ್ಥವಾದ ನಂಬಿಕೆ ನಿರೀಕ್ಷೆಯನ್ನು ಹುಟ್ಟಿಸುತ್ತಾರಷ್ಟೆ. ಸರ್ವೇಶ್ವರನ ಬಾಯಿಂದ ಹೊರಟದ್ದನ್ನು ನುಡಿಯದೆ ತಮ್ಮ ಸ್ವಂತ ಮನಸ್ಸಿಗೆ ತೋಚಿದ್ದನ್ನೇ ಹೇಳುತ್ತಾರೆ.


ಅದಕ್ಕೆ ಸರ್ವೇಶ್ವರ ನನಗೆ : “ಪ್ರವಾದಿಗಳು ನನ್ನ ಹೆಸರೆತ್ತಿ ಸುಳ್ಳು, ಪ್ರವಾದನೆ ಮಾಡುತ್ತಿದ್ದಾರೆ. ನಾನು ಅವರನ್ನು ಕಳಿಸಲಿಲ್ಲ, ಅವರಿಗೆ ಅಪ್ಪಣೆಕೊಟ್ಟಿಲ್ಲ. ಅವರೊಡನೆ ಮಾತಾಡಿದ್ದಿಲ್ಲ. ಅವರು ಕಳ್ಳದರ್ಶನಗಳನ್ನು, ಕಣಿಗಳನ್ನು, ಮಾಯಮಂತ್ರಗಳನ್ನು ಹಾಗು ತಾನೇ ಕಲ್ಪಿಸಿಕೊಂಡ ಕಪಟವನ್ನು ನಿಮಗೆ ಪ್ರಕಟಿಸುತ್ತಿದ್ದಾರೆ.


ಹೊಟ್ಟೆಬಾಕ ಕುನ್ನಿಗಳು; ಎಂದಿಗೂ ತೃಪ್ತಿ ಪಡೆಯದ ಶುನಕಗಳು. ಇಂಥವರು ಕುರಿಗಳನ್ನು ಕಾಯಲು ಯೋಗ್ಯರೋ? ಇವರು ಬುದ್ಧಿಹೀನರು. ಇವರಲ್ಲಿ ಪ್ರತಿಯೊಬ್ಬನು ಕೊಳ್ಳೆಹೊಡೆಯಬೇಕೆಂದು ತನ್ನದೇ ಆದ ಮಾರ್ಗವನ್ನು ಹಿಡಿದಿದ್ದಾನೆ.


ಪ್ರಿಯರೇ, “ನಾವು ಪವಿತ್ರಾತ್ಮ ಪ್ರೇರಿತರು” ಎಂದು ಹೇಳುವ ಎಲ್ಲರನ್ನೂ ನಂಬಬಾರದು. ಆ ಪ್ರೇರಣೆ ದೇವರಿಂದ ಬಂದಿದೆಯೇ ಎಂದು ಪರೀಕ್ಷಿಸಿ ನೋಡಬೇಕು. ಏಕೆಂದರೆ, ಎಷ್ಟೋ ಮಂದಿ ಕಪಟ ಪ್ರವಾದಿಗಳು ಎಲ್ಲೆಡೆಯಲ್ಲೂ ಹರಡಿದ್ದಾರೆ.


ಅದಕ್ಕೆ ನಾನು, “ನನ್ನಂಥ ಗಂಡು ಓಡಿಹೋಗಿ ಅವಿತುಕೊಳ್ಳುವುದು ಸರಿಯೇ? ಇದಲ್ಲದೆ ಪ್ರಾಣರಕ್ಷಣೆಗಾಗಿ ಗರ್ಭಗುಡಿಯನ್ನು ನಾನು ಪ್ರವೇಶಿಸಬಹುದೇ? ಇಲ್ಲ, ನಾನು ಬರುವುದಿಲ್ಲ,” ಎಂದು ಉತ್ತರಕೊಟ್ಟೆ.


ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು