Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:16 - ಕನ್ನಡ ಸತ್ಯವೇದವು C.L. Bible (BSI)

16 ಈ ಸುದ್ದಿ ಸುತ್ತ-ಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗದವರಿಗೆ ತಲುಪಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿ ತಗ್ಗಿ ಹೋದರು. ಈ ಕಾರ್ಯವು ದೇವರ ಸಹಾಯದಿಂದಲೇ ಪೂರ್ಣಗೊಂಡಿತು ಎಂಬುದು ಅವರಿಗೆ ತಿಳಿದುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಸುದ್ದಿಯು ನಮ್ಮ ವಿರೋಧಿಗಳಾದ ಸುತ್ತಣ ಎಲ್ಲಾ ಜನಾಂಗಗಳವರಿಗೆ ಮುಟ್ಟಿದಾಗ ಅವರು ಭಯವುಳ್ಳವರಾಗಿ ಸೊಕ್ಕನ್ನು ಬಿಟ್ಟು ಬಹಳ ಮನಗುಂದಿದವರಾದರು. ಈ ಕಾರ್ಯವು ನಮ್ಮ ದೇವರಿಂದಲೇ ಪೂರೈಸಿತು ಎಂದು ಅವರಿಗೆ ಮಂದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಮ್ಮ ವೈರಿಗಳೆಲ್ಲಾ ಕೆಲಸ ಸಂಪೂರ್ಣವಾದದ್ದನ್ನು ಕೇಳಿದರು. ನಮ್ಮ ಸುತ್ತಮುತ್ತಲಿನ ಪ್ರಾಂತ್ಯಗಳವರಿಗೂ ದೇಶಗಳವರಿಗೂ ಈ ಸುದ್ದಿಮುಟ್ಟಿತು. ಆಗ ಅವರ ಧೈರ್ಯವು ಕುಗ್ಗಿತು. ಯಾಕೆಂದರೆ ಈ ಮಹಾಕಾರ್ಯವನ್ನು ನಮ್ಮ ದೇವರ ಸಹಾಯದಿಂದಲೇ ನಾವು ಮಾಡಿದ್ದೇವೆಂದು ಅವರಿಗೆ ಅರ್ಥವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಈ ಸುದ್ದಿ ಸುತ್ತಮುತ್ತಲಿನ ನಮ್ಮ ವಿರೋಧಿಗಳಾದ ಜನಾಂಗಗಳಿಗೆ ಮುಟ್ಟಿತು. ಅವರು ಭಯಭೀತರಾದರು. ಸೊಕ್ಕು ಮುರಿದವರಾಗಿ ಹಾಗೇ ಕುಗ್ಗಿಹೋದರು. ಈ ಕಾರ್ಯ ನಮ್ಮ ದೇವರಿಂದಲೇ ಪೂರ್ಣಗೊಂಡಿತು ಎಂದು ಅವರಿಗೆ ಮನದಟ್ಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:16
16 ತಿಳಿವುಗಳ ಹೋಲಿಕೆ  

ಜೋರ್ಡನಿನ ಪಶ್ಚಿಮದಲ್ಲಿದ್ದ ಅಮೋರಿಯರ ಎಲ್ಲ ಅರಸರು ಮತ್ತು ಸಮುದ್ರದ ಬಳಿಯಿದ್ದ ಸರ್ವ ಕಾನಾನ್ ರಾಜರು ಸರ್ವೇಶ್ವರ ಸ್ವಾಮಿ ಇಸ್ರಯೇಲರ ಕಣ್ಮುಂದೆಯೇ ಜೋರ್ಡನನ್ನು ಬತ್ತಿಸಿ ಆ ನದಿ ದಾಟಿಸಿದರೆಂದು ಕೇಳಿದರು. ಆಗ ಅವರ ಎದೆ ಒಡೆದುಕೋಯಿತು. ಇಸ್ರಯೇಲರ ಮುಂದೆ ಅವರಿಗೆ ಧೈರ್ಯವಿಲ್ಲದೆ ಹೋಯಿತು.


ಉಕ್ಕಿತಾಗ ಮುಖತುಂಬ ನಗು, ಬಾಯ್ತುಂಬ ಹರ್ಷಗೀತೆ I “ಎಂಥ ಮಹತ್ಕಾರ್ಯವೆಸಗಿದನಾ ಪ್ರಭು ಇವರ ಪರತೆ” I ಇಂತೆಂದು ಆಡಿಕೊಂಡರು ತಂತಮ್ಮೊಳಗೆ ಅನ್ಯಜನತೆ II


ಸನ್ಬಲ್ಲಟನು, ಟೋಬೀಯನು, ಅರೇಬಿಯರು, ಅಮ್ಮೋನಿಯರು ಹಾಗು ಅಷ್ಡೋದಿನವರು ಜೆರುಸಲೇಮಿನ ಗೋಡೆಯ ದುರಸ್ತಿಕಾರ್ಯ ಮುಂದುವರಿದಿದೆ ಹಾಗು ಅದರ ಸಂದುಗಳು ಮತ್ತೆ ಮುಚ್ಚಿಕೊಳ್ಳುತ್ತಿವೆ ಎಂಬುದನ್ನು ಕೇಳಿದರು.


ನಾವು ಪೌಳಿಗೋಡೆಯನ್ನು ಕಟ್ಟುತ್ತಿದ್ದ ಸುದ್ದಿ ಸನ್ಬಲ್ಲಟನಿಗೆ ಮುಟ್ಟಿತು. ಅವನು ಬಹಳ ಹೊಟ್ಟೆಕಿಚ್ಚಿನ ಹಾಗು ಸಿಡುಕಿನ ವ್ಯಕ್ತಿ.


ಇಸ್ರಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ ಅಮ್ಮೋನ್ ದೇಶದವನಾದ ತೊಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬ ಹೊಟ್ಟೆಕಿಚ್ಚುಪಟ್ಟರು.


ಆದುದರಿಂದ ನಾನು ನಿಮಗೆ ಹೇಳುವುದೇನೆಂದರೆ: ಈ ವ್ಯಕ್ತಿಗಳ ಗೊಡವೆಗೆ ಹೋಗಬೇಡಿ; ಇವರನ್ನು ಸುಮ್ಮನೆ ಬಿಟ್ಟುಬಿಡಿ. ಇವರ ಯೋಜನೆ ಅಥವಾ ಕಾರ್ಯ ಮಾನವ ಕಲ್ಪಿತವಾಗಿದ್ದರೆ ಅದರಷ್ಟಕ್ಕೆ ಅದೇ ನಾಶವಾಗುವುದು.


ಯಕೋಬ್ಯರಿಗೆ ವಿರುದ್ಧವಾದ ಶಕುನವಿಲ್ಲ ಇಸ್ರಯೇಲರಿಗೆ ವಿರುದ್ಧವಾದ ತಂತ್ರಮಂತ್ರವಿಲ್ಲ. ತಾನು ಮಾಡುವುದನ್ನು ತತ್ಕಾಲದಲ್ಲೇ ದೇವ ತಿಳಿಸುತ್ತಾನೆ ಯಕೋಬ್ಯರಿಗೆ ಅದನ್ನು ಸೂಚಿಸುತ್ತಾನೆ ಸಮಯೋಚಿತವಾಗಿ ಆ ಇಸ್ರಯೇಲರಿಗೆ.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಅದೇ ಸಮಯದಲ್ಲಿ, ಯೆಹೂದ್ಯ ಶ್ರೀಮಂತರಿಗೂ ಟೋಬೀಯನಿಗೂ ಬಹಳ ಪತ್ರ ವ್ಯವಹಾರ ನಡೆಯುತ್ತಿತ್ತು.


ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲ ಸೌಭಾಗ್ಯಗಳ ಸುದ್ದಿಯನ್ನು ಸಕಲ ಭೂರಾಜ್ಯಗಳು ಕೇಳುವರು. ಈ ನಗರಕ್ಕೆ ನಾನು ನೀಡುವ ಸುಖಸಮಾಧಾನಗಳನ್ನು ಅವರು ನೋಡುವರು ಹಾಗೂ ಹೆದರಿ ನಡುಗುವರು. ಇದರಿಂದಾಗಿ ಆ ಎಲ್ಲ ರಾಜ್ಯಗಳ ಮುಂದೆ ನನಗೆ ಅದು ಕೀರ್ತಿಯನ್ನು, ಮಹಿಮೆಯನ್ನು ಹಾಗೂ ಆನಂದವನ್ನು ತರುವುದು.”


“ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟಿದ್ದಾರೆಂದು ನಾನು ಬಲ್ಲೆ; ನಿಮ್ಮ ವಿಷಯದಲ್ಲಿ ನಮಗೆ ಮಹಾಭೀತಿ ಉಂಟಾಗಿದೆ. ನಾಡಿನ ನಿವಾಸಿಗಳೆಲ್ಲರೂ ಕಂಗೆಟ್ಟು ಹೋಗಿದ್ದಾರೆ.


ಇದನ್ನೆಲ್ಲಾ ಕೇಳಿ ನಮ್ಮ ಎದೆ ಒಡೆದುಹೋಗಿದೆ. ನಿಮ್ಮನ್ನು ಎದುರಿಸುವ ಧೈರ್ಯ ಯಾರಿಗೂ ಇಲ್ಲ. ನಿಮ್ಮ ದೇವರಾದ ಸರ್ವೇಶ್ವರರೊಬ್ಬರೇ ಪರಲೋಕದಲ್ಲೂ ಭೂಲೋಕದಲ್ಲೂ ದೇವರು.


ನನ್ನ ರಕ್ಷಣೆ ನಿನ್ನ ಕೈಯಿಂದಾದುದೆಂದು ಅವರರಿಯಲಿ I ಅದು ನಿನ್ನಿಂದಲೇ ಹೇ ಪ್ರಭು, ಆದುದೆಂದು ಖಚಿತವಾಗಲಿ II


ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II


ನಿರ್ಮಿಸುತಿಹನು ಪ್ರಭು ಮರಳಿ ಜೆರುಸಲೇಮನು I ಬಂದು ಸೇರಿಸುತಿಹನು ಚದರಿದ ಇಸ್ರಯೇಲರನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು