Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:19 - ಕನ್ನಡ ಸತ್ಯವೇದವು C.L. Bible (BSI)

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕಾಗಿ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವುದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅವರು ಅವನ ಒಳ್ಳೆತನವನ್ನೇ ನನ್ನ ಮುಂದೆ ವರ್ಣಿಸುತ್ತಾ ನನ್ನ ಮಾತುಗಳನ್ನು ಅವನಿಗೆ ತಿಳಿಸುತ್ತಾ ಇದ್ದರು. ಟೋಬೀಯನೂ ನನ್ನಲ್ಲಿ ಭಯಹುಟ್ಟಿಸುವದಕ್ಕೋಸ್ಕರ ನನಗೆ ಪತ್ರಗಳನ್ನು ಕಳುಹಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಹಿಂದಿನ ಕಾಲದಲ್ಲಿ ಆ ಜನರು ಟೋಬೀಯನಿಗೆ ಒಂದು ವಿಶೇಷ ವಾಗ್ದಾನ ಮಾಡಿದ್ದರು. ಆದ್ದರಿಂದ ಟೋಬೀಯನು ಎಷ್ಟು ಒಳ್ಳೆಯವನೆಂದು ನನ್ನೊಂದಿಗೆ ಹೇಳುತ್ತಿದ್ದರು; ನಾನು ಮಾಡುತ್ತಿರುವ ಕಾರ್ಯಗಳ ಬಗ್ಗೆಯೂ ಅವರು ಟೋಬೀಯನಿಗೆ ವರದಿ ಮಾಡುತ್ತಿದ್ದರು. ಟೋಬೀಯನು ನನ್ನನ್ನು ಬೆದರಿಸುವುದಕ್ಕೋಸ್ಕರ ನನಗೆ ಪದೇಪದೇ ಪತ್ರ ಬರೆಯುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ, ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀಯನೂ ನನ್ನನ್ನು ಭಯಪಡಿಸುವುದಕ್ಕೆ ಪತ್ರಗಳನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:19
10 ತಿಳಿವುಗಳ ಹೋಲಿಕೆ  

ಅವರು ಲೋಕಕ್ಕೆ ಸೇರಿದವರು. ಆದ್ದರಿಂದ ಅವರು ಲೌಕಿಕವಾದುದನ್ನೇ ಮಾತನಾಡುತ್ತಾರೆ. ಎಂದೇ, ಲೋಕವು ಅವರಿಗೆ ಕಿವಿಗೊಡುತ್ತದೆ.


ನೀವು ಲೋಕದ ಕಡೆಯವರಾಗಿದ್ದರೆ ಲೋಕವು ನಿಮ್ಮನ್ನು ತನ್ನವರೆಂದು ಮಮತೆಯಿಂದ ಕಾಣುತ್ತಿತ್ತು. ನೀವಾದರೋ ಲೋಕದ ಕಡೆಗೆ ಸೇರಿದವರಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿರುವುದರಿಂದ ನೀವು ಲೋಕದಿಂದ ಬೇರ್ಪಟ್ಟಿದ್ದೀರಿ ಎಂದೇ ಲೋಕಕ್ಕೆ ನಿಮ್ಮ ಮೇಲೆ ದ್ವೇಷವಿದೆ.


ಲೋಕಕ್ಕೆ ನಿಮ್ಮ ಮೇಲೆ ಹಗೆಯಿಲ್ಲ. ಅದಕ್ಕೆ ಹಗೆಯಿರುವುದು ನನ್ನ ಮೇಲೆ. ಏಕೆಂದರೆ, ಅದರ ವರ್ತನೆ ಕೆಟ್ಟದೆಂದು ನಾನು ಯಥಾರ್ಥವಾಗಿ ಹೇಳುತ್ತಾ ಇದ್ದೇನೆ.


ಧರ್ಮಶಾಸ್ತ್ರವನ್ನು ಕೈಗೊಳ್ಳದವರು ದುಷ್ಟರನ್ನು ಹೊಗಳುವರು; ಕೈಗೊಳ್ಳುವವರು ಅವರ ವಿರುದ್ಧ ಹೋರಾಡುವರು.


ನಾನು ಅಂಜಿಕೊಂಡು, ಇವನ ಮಾತಿನಂತೆ ನಡೆದು ದೋಷಿಯಾಗಿ, ತಮ್ಮ ನಿಂದೆಗೂ ಕೆಟ್ಟ ಹೆಸರಿಗೂ ಗುರಿಯಾಗಲಿ ಎಂದು ಅವರು ಈ ಶೆಮಾಯನಿಗೆ ಲಂಚಕೊಟ್ಟಿದ್ದರು.


ಹೀಗೆ ಎಲ್ಲರೂ, ನಮ್ಮ ಕೈಗಳು ಜೋಲುಬಿದ್ದು ಕೆಲಸ ಮುಗಿಯದೆ ನಿಂತುಹೋಗಲಿ ಎಂದುಕೊಂಡು ನಮ್ಮನ್ನು ಹೆದರಿಸುವುದಕ್ಕೆ ಪ್ರಯತ್ನಿಸಿದರು. ನಾನೋ, “ನನ್ನ ದೇವರೇ, ನನ್ನ ಕೈಗಳನ್ನು ಬಲಪಡಿಸಿ,” ಎಂದು ಪ್ರಾರ್ಥಿಸಿದೆ.


ಏಕೆಂದರೆ ಅವನು ಆರಹನ ಮಗ ಶೆಕನ್ಯನ ಅಳಿಯನಾಗಿದ್ದ ಹಾಗು ಯೆಹೋಹಾನಾನನೆಂಬ ಅವನ ಮಗ ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ಮದುವೆಮಾಡಿಕೊಂಡಿದ್ದ. ಆದ್ದರಿಂದ ಯೆಹೂದ್ಯರಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿ ಅವನ ಪಕ್ಷದವರಾಗಿದ್ದರು.


ಗೋಡೆಯನ್ನು ಕಟ್ಟಿ ಮುಗಿಸಿದನಂತರ ನಾನು ಕದಗಳನ್ನು ಹಚ್ಚಿಸಿದೆ; ದ್ವಾರಪಾಲಕರನ್ನೂ ಗಾಯಕರನ್ನೂ ಲೇವಿಯರನ್ನೂ ನೇಮಿಸಲಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು