Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:8 - ಕನ್ನಡ ಸತ್ಯವೇದವು C.L. Bible (BSI)

8 ಅದಕ್ಕೆ ನಾನು, “ನೀನು ಬರೆದಂಥದ್ದು ಏನೂ ನಡೆದಿಲ್ಲ; ಅದನ್ನು ನೀನೆ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿಕಳುಹಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅದಕ್ಕೆ ನಾನು, “ನೀನು ಬರೆದಿರುವಂಥ ವಿಚಾರಗಳು ಯಾವುದು ಇಲ್ಲಿ ನಡೆದಿರುವುದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿರುವೆ” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಕ್ಕೆ - ನೀನು ಬರೆದಂಥದು ಏನೂ ನಡೆದಿಲ್ಲ; ಅದನ್ನು ನೀನೇ ನಿನ್ನ ಮನಸ್ಸಿನಲ್ಲಿ ಕಲ್ಪಿಸಿಕೊಂಡಿದ್ದಿ ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಆ ಕಾಗದವನ್ನು ಹಾಗೆಯೇ ಹಿಂದಕ್ಕೆ ಕಳುಹಿಸಿದೆನು. ಅಲ್ಲದೆ, “ನೀನು ಹೇಳುವಂಥದ್ದೇನೂ ಆಗಲಿಲ್ಲ. ಇದು ಕೇವಲ ನಿನ್ನ ಊಹೆಯಷ್ಟೇ!” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ನಾನು, “ನೀನು ಹೇಳಿದ ಕಾರ್ಯಗಳಲ್ಲಿ ಯಾವುದೂ ಮಾಡಿದ್ದಿಲ್ಲ. ನೀವು ಅವುಗಳನ್ನು ನಿನ್ನ ಸ್ವಂತ ಹೃದಯದಲ್ಲಿ ಕಲ್ಪಿಸಿಕೊಂಡಿರುವೆ,” ಎಂದು ಹೇಳಿ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:8
12 ತಿಳಿವುಗಳ ಹೋಲಿಕೆ  

ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಅದಕ್ಕೆ ಪೌಲನು, “ನಾನು ಚಕ್ರವರ್ತಿಯ ನ್ಯಾಯಸ್ಥಾನದ ಮುಂದೆ ನಿಂತಿದ್ದೇನೆ. ಇಲ್ಲಿಯೇ ನನ್ನ ವಿಚಾರಣೆಯಾಗತಕ್ಕದ್ದು. ತಮಗೆ ಚೆನ್ನಾಗಿ ತಿಳಿದಿರುವಂತೆ ನಾನು ಯೆಹೂದ್ಯರಿಗೆ ಯಾವ ಅನ್ಯಾಯವನ್ನೂ ಮಾಡಿಲ್ಲ.


ಪೌಲನು ಅಲ್ಲಿಗೆ ಬಂದಾಗ, ಜೆರುಸಲೇಮಿನಿಂದ ಆಗಮಿಸಿದ್ದ ಯೆಹೂದ್ಯರು ಅವನ ಸುತ್ತಲೂ ನಿಂತು ಅವನ ವಿರುದ್ಧ ಹಲವಾರು ತೀವ್ರ ಆಪಾದನೆಗಳನ್ನು ಹೊರಿಸಿದರು. ಆದರೆ ಅವುಗಳನ್ನು ರುಜುವಾತುಪಡಿಸಲು ಅವರಿಂದಾಗಲಿಲ್ಲ.


ಸೈತಾನನೇ ನಿಮಗೆ ತಂದೆ; ಆ ನಿಮ್ಮ ತಂದೆ ಮಾಡಬಯಸುವುದನ್ನು ನೀವು ಮಾಡಬಯಸುತ್ತೀರಿ; ಮೊತ್ತ ಮೊದಲಿನಿಂದಲೂ ಅವನು ಕೊಲೆಪಾತಕ. ಸತ್ಯವೆಂಬುದೇ ಅವನಲ್ಲಿ ಇಲ್ಲದ ಕಾರಣ ಅವನು ಸತ್ಯಪರನಲ್ಲ. ಸುಳ್ಳಾಡುವಾಗ ಅವನು ತನಗೆ ಸಹಜವಾದುದನ್ನೇ ಆಡುತ್ತಾನೆ. ಅವನು ಸುಳ್ಳುಗಾರ. ಸುಳ್ಳಿನ ಮೂಲಪುರುಷನೇ ಅವನು.


ಎಲೈ ವಿಷಸರ್ಪಗಳ ಪೀಳಿಗೆಯೇ, ಕೆಟ್ಟವರಾಗಿರುವ ನಿಮ್ಮ ಬಾಯಿಂದ ಒಳ್ಳೆಯ ಮಾತು ಬರಲು ಸಾಧ್ಯವೇ? ಹೃದಯದಲ್ಲಿ ತುಂಬಿತುಳುಕುವುದನ್ನೇ ನಾಲಿಗೆ ನುಡಿಯುತ್ತದೆ.


ಆ ಇಬ್ಬರು ರಾಜರು ಪರಸ್ಪರ ಕೇಡಿನ ಮನಸ್ಸು ಉಳ್ಳವರಾಗಿ ಸಹಪಂಕ್ತಿಯಲ್ಲಿ ಕುಳಿತಿದ್ದರೂ ಸುಳ್ಳುಪೊಳ್ಳು ಮಾತಾಡಿಕೊಳ್ಳುವರು. ಆದರೆ ನಿಶ್ಚಿತಕಾಲ ಬರುವ ತನಕ ಅವರಿಂದ ಏನೂ ಸಾಧಿಸಲಾಗದು.


ನ್ಯಾಯಸ್ಥಾನದಲ್ಲಿ ನ್ಯಾಯಾನುಸಾರ ವಾದಿಸುವವನು ಯಾರೂ ಇಲ್ಲ; ಸತ್ಯಾನುಸಾರ ತೀರ್ಪುಕೊಡುವವನು ಯಾರೂ ಇಲ್ಲ; ನೀವು ಶೂನ್ಯವಾದುದ್ದನ್ನೇ ನಂಬುತ್ತೀರಿ, ಅಬದ್ಧವಾದುದನ್ನೇ ಆಡುತ್ತೀರಿ, ಕೇಡನ್ನು ಬಸಿರಿಸಿ ಅಕ್ರಮವನ್ನು ಹೆರುತ್ತೀರಿ.


ಉರಲನೊಡ್ಡಿಹರು ನನ್ನ ಪ್ರಾಣಹಂತಕರು I ನಿರ್ಧರಿಸಿಹರು ವಿನಾಶವನ್ನು ಕೇಡು ಬಗೆವವರು I ಕುತಂತ್ರವ ಮಾಡುವರು ಸತತ ಮೋಸಗಾರರು II


ಅವನ ಕೀಳು ಬಾಯಿಯ ತುಂಬ ಕೇಡು ಕಪಟ I ಸನ್ಮತಿ ಸತ್ಕಾರ್ಯಗಳನ್ನು ಬಿಟ್ಟೇಬಿಟ್ಟ II


ಇದಲ್ಲದೆ, ಜುದೇಯದಲ್ಲಿ ಒಬ್ಬ ಅರಸನಿದ್ದಾನೆಂದು ನಿನ್ನನ್ನು ಕುರಿತು ಜೆರುಸಲೇಮಿನಲ್ಲಿ ಪ್ರಕಟಿಸುವುದಕ್ಕಾಗಿ ಪ್ರವಾದಿಗಳನ್ನು ನೇಮಿಸಿರುವೆ ಎಂಬುದಾಗಿ ಹೇಳುತ್ತಾರೆ. ಈ ಸುದ್ದಿ ರಾಜನಿಗೂ ಮುಟ್ಟಲಿದೆ; ಆದುದರಿಂದ ಕೂಡಿ ಮಾತಾಡೋಣ ಬಾ,” ಎಂದು ಬರೆದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು