Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:64 - ಕನ್ನಡ ಸತ್ಯವೇದವು C.L. Bible (BSI)

64 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕಾ ಸೇವೆಯಿಂದ ಬಹಿಷ್ಕೃತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅವರನ್ನು ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

64 ಇವರು ತಮ್ಮ ವಂಶಾವಳಿ ಪತ್ರಗಳನ್ನು ಹುಡುಕಿದರೂ ಅವು ಸಿಕ್ಕದ ಕಾರಣ ಅಶುದ್ಧರೆಂದು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಇವರು ತಮ್ಮ ವಂಶಾವಳಿಯ ಪತ್ರಗಳನ್ನು ಹುಡುಕಾಡಿದರೂ ಸಿಗಲಿಲ್ಲ. ತಮ್ಮ ಪೂರ್ವಿಕರು ಯಾಜಕರೆಂದು ರುಜುವಾತು ಮಾಡಲು ಅವರಿಗೆ ಸಾಧ್ಯವಾಗಲಿಲ್ಲ. ಆದ್ದರಿಂದ ಯಾಜಕ ಪಟ್ಟಿಯಲ್ಲಿ ಅವರನ್ನು ಸೇರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಇವರು ತಮ್ಮ ವಂಶಾವಳಿಯ ದಾಖಲಾತಿಗಳಲ್ಲಿ ತಮ್ಮ ಹೆಸರುಗಳನ್ನು ಹುಡುಕಿದರು, ಆದರೆ ಅವು ಸಿಕ್ಕದೆ ಹೋದದ್ದರಿಂದ ಅವರು ಅಶುದ್ಧರೆಂದು ಪರಿಗಣಿಸಿ ಯಾಜಕ ಉದ್ಯೋಗದಿಂದ ಬಹಿಷ್ಕಾರವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:64
8 ತಿಳಿವುಗಳ ಹೋಲಿಕೆ  

ಹೀಗಿರಲು, ನಾನು ನನ್ನ ದೇವರ ಪ್ರೇರಣೆಯಿಂದ ಶ್ರೀಮಂತರನ್ನು, ಅಧಿಕಾರಿಗಳನ್ನು ಹಾಗು ಜನಸಾಮಾನ್ಯರನ್ನು ಜನಗಣತಿಗಾಗಿ ಸಭೆಸೇರಿಸಿದೆ. ಆಗ ಜೆರುಸಲೇಮಿಗೆ ಮೊದಲು ಹಿಂದಿರುಗಿ ಬಂದವರ ಹೆಸರುಗಳ ಪಟ್ಟಿ ನನಗೆ ಸಿಕ್ಕಿತು. ಅದರಲ್ಲಿ ಹೀಗೆ ಬರೆದಿತ್ತು:


ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.


“ನನ್ನ ದೇವರೇ, ಅವರು ಯಾಜಕತ್ವವನ್ನೂ ಯಾಜಕರ ಮತ್ತು ಲೇವಿಯರ ಪ್ರತಿಜ್ಞೆಯನ್ನೂ ಹೊಲೆಮಾಡಿದ್ದಾರೆ; ಇದನ್ನು ನೆನಪುಮಾಡಿಕೊಳ್ಳಿ.”


“ಅಭಿಷಿಕ್ತನಾದ ಯಾಜಕನೇ ಅಂಥ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ ತನ್ನ ದೋಷಪರಿಹಾರಕ್ಕಾಗಿ ಅವನು ಕಳಂಕರಹಿತವಾದ ಪ್ರಾಯದ ಹೋರಿಯೊಂದನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು.


ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.)


ಊರಿಮ್‍ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು