Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:73 - ಕನ್ನಡ ಸತ್ಯವೇದವು C.L. Bible (BSI)

73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಜನಸಾಮಾನ್ಯರು, ದೇವಸ್ಥಾನದ ಪರಿಚಾರಕರು ಅಂತೂ ಇಸ್ರಯೇಲರೆಲ್ಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

73 ಹೀಗೆ ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣ ಜನರು ಸೇರಿದವರು, ದೇವಾಲಯದ ಸೇವಕರು ಅಂತೂ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸ ಮಾಡತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು, ಸಾಧಾರಣಜನರಿಗೆ ಸೇರಿದವರು, ದೇವಸ್ಥಾನದಾಸರು ಅಂತೂ ಇಸ್ರಾಯೇಲ್ಯರೆಲ್ಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

73 ಯಾಜಕರು, ಲೇವಿಯರು, ದ್ವಾರಪಾಲಕರು, ಗಾಯಕರು ಮತ್ತು ದೇವಾಲಯದ ಸೇವಕರು ತಮ್ಮ ತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಇತರ ಎಲ್ಲಾ ಇಸ್ರೇಲರು ತಮ್ಮ ಪಟ್ಟಣಗಳಲ್ಲಿ ನೆಲೆಸಿದರು. ಆ ವರ್ಷದ ಏಳನೆಯ ತಿಂಗಳಲ್ಲಿ ಎಲ್ಲಾ ಇಸ್ರೇಲರು ತಮ್ಮತಮ್ಮ ಪಟ್ಟಣಗಳಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

73 ಹೀಗೆಯೇ ಯಾಜಕರೂ, ಲೇವಿಯರೂ, ದ್ವಾರಪಾಲಕರೂ, ಹಾಡುಗಾರರೂ, ಸಾಮಾನ್ಯ ಜನರೂ, ದೇವಾಲಯದ ಸೇವಕರೂ, ಸಮಸ್ತ ಇಸ್ರಾಯೇಲರೂ ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು. ಏಳನೆಯ ತಿಂಗಳು ಬಂದಾಗ ಇಸ್ರಾಯೇಲರು ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:73
7 ತಿಳಿವುಗಳ ಹೋಲಿಕೆ  

ಹೀಗೆ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದೇವಸ್ಥಾನದ ಪರಿಚಾರಕರು, ಜನಸಾಮಾನ್ಯರಲ್ಲಿ ಕೆಲವರು, ತಮತಮಗೆ ನೇಮಕವಾದ ಪಟ್ಟಣಗಳಲ್ಲಿ ವಾಸಿಸಿದರು. ಉಳಿದ ಎಲ್ಲ ಇಸ್ರಯೇಲರು ತಮ್ಮ ತಮ್ಮ ಪಟ್ಟಣಗಳಲ್ಲೇ ವಾಸಿಸಿದರು.


ಅಲ್ಲಿಂದ ಹೊರಟು ಊರಬಾಗಿಲಿಗೆ ಬಂದು, ಕಾವಲುಗಾರರಿಗೆ, “ನಾವು ಸಿರಿಯಾದವರ ಪಾಳೆಯಕ್ಕೆ ಹೋಗಿದ್ದೆವು; ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳನ್ನು ಅಲ್ಲಲ್ಲಿ ಕಟ್ಟಲಾಗಿದೆ. ಡೇರೆಗಳು ಇದ್ದ ಹಾಗೆಯೇ ಇರುತ್ತವೆ,” ಎಂದು ಕೂಗಿ ತಿಳಿಸಿದರು.


ಪಟ್ಟಣಗಳಲ್ಲಿದ್ದ ತಮ್ಮ ಸೊತ್ತುಗಳಿಗೆ ಹಿಂದಿರುಗಿ ಬಂದವರಲ್ಲಿ ಇಸ್ರಯೇಲಿನ ಜನಸಾಮಾನ್ಯರೂ ಯಾಜಕರೂ ಲೇವಿಯರೂ ದೇವಾಲಯದ ಕೆಲಸದವರೂ ಸೇರಿದ್ದರು.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಯೇಲರು, ಏಳನೆಯ ತಿಂಗಳಿನಲ್ಲಿ ಏಕ ಮನಸ್ಸಿನಿಂದ ಜೆರುಸಲೇಮಿಗೆ ಕೂಡಿಬಂದರು.


ಉಳಿದ ಜನರು ಕೊಟ್ಟದ್ದು - ನೂರ ಅರವತ್ತೆಂಟು ಕಿಲೋಗ್ರಾಂ ಬಂಗಾರ; ನೂರ ನಲವತ್ತು ಕಿಲೋಗ್ರಾಂ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳು.


ಯೆಹೂದ ಕುಲದವರಲ್ಲಿ - ಒಬ್ಬನು ಅತಾಯ; ಇವನು ಉಜ್ಜೀಯನ ಮಗ; ಇವನು ಜೆಕರ್ಯನ ಮಗ; ಇವನು ಅಮರ್ಯನ ಮಗ; ಇವನು ಶೆಫಟ್ಯನ ಮಗ; ಇವನು ಮಹಲಲೇಲನ ಮಗ; ಇವನು ಪೆರೆಚ್ ಸಂತಾನದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು