Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:2 - ಕನ್ನಡ ಸತ್ಯವೇದವು C.L. Bible (BSI)

2 ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯಾಜಕನಾದ ಎಜ್ರನು ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಮೊದಲ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯಾಜಕನಾದ ಎಜ್ರನು ಗ್ರಹಿಸಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹೀಗೆ ಆ ವರ್ಷದ ಏಳನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಎಜ್ರನು ಧರ್ಮಶಾಸ್ತ್ರವನ್ನು ಆ ಜನರ ಮುಂದೆ ತಂದನು. ಆ ಜನಸಮೂಹದಲ್ಲಿ ಧರ್ಮಶಾಸ್ತ್ರಕ್ಕೆ ಕಿವಿಗೊಟ್ಟು ಗ್ರಹಿಸಿಕೊಳ್ಳಬಲ್ಲ ಸ್ತ್ರೀಪುರುಷರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹೀಗೆಯೇ ಏಳನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯಿಂದ ಕೇಳುವವರೆಲ್ಲರ ಮುಂದೆಯೂ ಯಾಜಕನಾದ ಎಜ್ರನು ದೇವರ ನಿಯಮವನ್ನು ತೆಗೆದುಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:2
14 ತಿಳಿವುಗಳ ಹೋಲಿಕೆ  

ನೀನು ಏಳನೆಯ ತಿಂಗಳಿನ ಮೊದಲನೆಯ ದಿನ ನಿಮಗೆ ಸಂಪೂರ್ಣ ವಿರಾಮವಿರಬೇಕು. ಅದನ್ನು ತುತೂರಿಗಳ ಧ್ವನಿಯಿಂದ ಪ್ರಕಟಪಡಿಸಬೇಕು. ದೇವಾರಾಧನೆಗಾಗಿ ಸಭೆಕೂಡಬೇಕು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


‘ಏಳನೆಯ ತಿಂಗಳಿನ ಮೊದಲನೆಯ ದಿನ ನೀವು ಯಾವ ದುಡಿಮೆಯನ್ನೂ ಮಾಡದೆ ದೇವಾರಾಧನೆಗಾಗಿ ಸಭೆ ಸೇರಬೇಕು. ಅದು ನಿಮಗೆ ಕೊಂಬೂದುವ ದಿನ.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಇವರು ನನ್ನನ್ನು ಕುರಿತು : “ಇವನ ಜ್ಞಾನೋಪದೇಶ ಯಾರಿಗೆ? ಇವನು ಸಾರುವ ಸಂದೇಶ ಯಾರಿಗೆ? ಮೊಲೆಬಿಟ್ಟ ಕೂಸುಗಳಿಗೋ? ಎದೆಬಿಟ್ಟ ಮಕ್ಕಳಿಗೋ?


“ಅವನು ರಾಜ್ಯಾಧಿಕಾರಕ್ಕೆ ಬಂದಾಗ ಯಾಜಕ ಸೇವೆಮಾಡುವ ಲೇವಿಯರ ವಶದಲ್ಲಿ ಇರುವ ಈ ಧರ್ಮಶಾಸ್ತ್ರಗ್ರಂಥದ ಒಂದು ಪ್ರತಿಯನ್ನು ತನಗಾಗಿ ಪುಸ್ತಕರೂಪವಾಗಿ ಬರೆಯಿಸಿಕೊಳ್ಳಬೇಕು.


ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು.


ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು