Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:3 - ಕನ್ನಡ ಸತ್ಯವೇದವು C.L. Bible (BSI)

3 ಆ ನೀರುಬಾಗಿಲಿನ ಮುಂದಣ ಬಯಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಲು ಶಕ್ತರಾದವರೆಲ್ಲರೂ ಧರ್ಮಶಾಸ್ತ್ರ ಪಾರಾಯಣವನ್ನು ಆಲಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ನೆರೆದು ಬಂದಿದ್ದ ಗ್ರಹಿಸಲು ಶಕ್ತರಾದ ಸ್ತ್ರೀಪುರುಷರ ಮುಂದೆ ಧರ್ಮಶಾಸ್ತ್ರವನ್ನು ಮುಂಜಾನೆಯಿಂದ ಮಧ್ಯಾಹ್ನದವರೆಗೂ ಓದಿದನು. ಜನರು ಆಲಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆ ಧರ್ಮಶಾಸ್ತ್ರವನ್ನು ತಂದು ಪ್ರಾತಃಕಾಲದಿಂದ ಮಧ್ಯಾಹ್ನದವರೆಗೂ ಓದಿದನು. ನೀರುಬಾಗಲಿನ ಮುಂದಣ ಬೈಲಿನಲ್ಲಿ ಕೂಡಿಬಂದಿದ್ದ ಸ್ತ್ರೀಪುರುಷರಲ್ಲಿ ಗ್ರಹಿಸಶಕ್ತರಾದವರೆಲ್ಲರೂ ಧರ್ಮಶಾಸ್ತ್ರಪಾರಾಯಣವನ್ನು ಲಾಲಿಸುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಎಜ್ರನು ಮುಂಜಾನೆಯಿಂದ ಹಿಡಿದು ಮಧ್ಯಾಹ್ನದವರೆಗೆ ಬುಗ್ಗೆಬಾಗಿಲಿನ ಮುಂದೆ ಇರುವ ಮೈದಾನದಲ್ಲಿ ಸೇರಿ ಬಂದಿದ್ದ ಜನರೆದುರಾಗಿ ನಿಂತು ಗಟ್ಟಿಯಾಗಿ ಧರ್ಮಶಾಸ್ತ್ರವನ್ನು ಓದಿದನು. ಎಲ್ಲಾ ಜನರು ಎಚ್ಚರಿಕೆಯಿಂದ ಕೇಳಿ ಧರ್ಮಶಾಸ್ತ್ರವನ್ನು ಗ್ರಹಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅನಂತರ ಎಜ್ರನು ನೀರಿನ ಬಾಗಿಲ ಮುಂಭಾಗದಲ್ಲಿರುವ ಬೀದಿಯಲ್ಲಿ ಸ್ತ್ರೀಪುರುಷರ ಮುಂದೆಯೂ ಗ್ರಹಿಕೆಯುಳ್ಳ ಎಲ್ಲರ ಮುಂದೆಯೂ ಬೆಳಗಿನಿಂದ ಮಧ್ಯಾಹ್ನದವರೆಗೆ ಓದಿದನು. ಜನರೆಲ್ಲರು ನಿಯಮದ ಗ್ರಂಥಕ್ಕೆ ಕಿವಿಗೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:3
25 ತಿಳಿವುಗಳ ಹೋಲಿಕೆ  

“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ!”


“ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”


ಇನ್ನೊಂದು ಕಾರಣಕ್ಕಾಗಿಯೂ ನಾವು ಸತತವೂ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ನೀವು ದೇವರ ಸಂದೇಶವನ್ನು ನಮ್ಮಿಂದ ಕೇಳಿದಾಗ, ಅದನ್ನು ಮನುಷ್ಯರ ಮಾತುಗಳೆಂದು ಪರಿಗಣಿಸದೆ, ದೇವರ ವಾಕ್ಯವೆಂದೇ ಅರಿತು ಅಂಗೀಕರಿಸಿದಿರಿ. ವಿಶ್ವಾಸಿಗಳಾದ ನಿಮ್ಮಲ್ಲಿ ಚೈತನ್ಯಪೂರ್ಣವಾಗಿರುವ ಈ ವಾಕ್ಯವು, ನಿಜವಾಗಿಯೂ ದೇವರ ಸಂದೇಶವೇ ಸರಿ.


ಅದಕ್ಕಾಗಿ ಒಂದು ದಿನವನ್ನು ಗೊತ್ತುಮಾಡಿದರು. ಅಂದು ಅವರೆಲ್ಲರು ಪೌಲನು ವಾಸಮಾಡುತ್ತಿದ್ದ ಬಿಡಾರಕ್ಕೆ ಅಧಿಕ ಸಂಖ್ಯೆಯಲ್ಲಿ ಬಂದರು. ಪೌಲನು ಬೆಳಿಗ್ಗೆಯಿಂದ ಸಂಜೆಯವರೆಗೆ ದೇವರ ಸಾಮ್ರಾಜ್ಯವನ್ನು ಕುರಿತ ಶುಭಸಂದೇಶವನ್ನು ವಿವರಿಸಿದನು; ಮೋಶೆಯ ಧರ್ಮಶಾಸ್ತ್ರದ ಹಾಗೂ ಪ್ರವಾದಿಗಳ ಗ್ರಂಥಗಳ ಆಧಾರದ ಮೇಲೆ ಯೇಸುಸ್ವಾಮಿಯ ವಿಷಯವಾಗಿ ಅವರನ್ನು ಮನವೊಲಿಸಲು ಪ್ರಯತ್ನಿಸಿದನು.


ಅಲ್ಲಿನ ಯೆಹೂದ್ಯರು ಥೆಸಲೋನಿಕದ ಜನರಿಗಿಂತ ವಿಶಾಲ ಮನೋಭಾವವುಳ್ಳವರು; ಶುಭಸಂದೇಶವನ್ನು ಅತ್ಯಾಸಕ್ತಿಯಿಂದ ಸ್ವಾಗತಿಸಿದರು. ಅದು ಪವಿತ್ರಗ್ರಂಥಕ್ಕೆ ಅನುಗುಣವಾಗಿದೆಯೇ ಎಂದು ತಿಳಿದುಕೊಳ್ಳಲು ಪ್ರತಿದಿನವೂ ಅಧ್ಯಯನ ಮಾಡತೊಡಗಿದರು.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಏಕೆಂದರೆ ಪುರಾತನ ಕಾಲದಿಂದಲೂ ಪ್ರತಿಯೊಂದು ಸಬ್ಬತ್‍ದಿನ ಮೋಶೆಯ ಧರ್ಮಶಾಸ್ತ್ರವನ್ನು ಪ್ರಾರ್ಥನಾಮಂದಿರಗಳಲ್ಲಿ ಓದಲಾಗುತ್ತಿದೆ ಮತ್ತು ಆತನ ಬೋಧನೆಯನ್ನು ಪ್ರತಿ ನಗರದಲ್ಲೂ ಸಾರಲಾಗುತ್ತಿದೆ,” ಎಂದನು.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥಗಳಿಂದ ವಾಚನವಾದ ನಂತರ ಪ್ರಾರ್ಥನಾಮಂದಿರದ ಅಧಿಕಾರಿಗಳು ಅವರಿಗೆ, “ಸಹೋದರರೇ, ಜನರಿಗೆ ಉಪಯುಕ್ತವಾದ ಹಿತೋಕ್ತಿ ಏನಾದರೂ ಇದ್ದರೆ ಉಪದೇಶಮಾಡಿ,” ಎಂದು ಕೇಳಿಕೊಂಡರು.


ಆದರೆ ಅವರಿಂದ ಏನೂ ಮಾಡಲಾಗಲಿಲ್ಲ. ಏಕೆಂದರೆ, ಜನರೆಲ್ಲರೂ ಯೇಸುವಿನ ಬೋಧನೆಗೆ ಮಾರುಹೋಗಿದ್ದರು. ಅವರ ಬಾಯಿಂದ ಬಂದ ಒಂದೊಂದು ಮಾತನ್ನು ಕೇಳಲು ಆತುರರಾಗಿದ್ದರು.


“ಆದ್ದರಿಂದ ನೀವು ಕಿವಿಕೊಡುವಾಗ ಎಚ್ಚರಿಕೆಯಿಂದಿರಿ; ಏಕೆಂದರೆ, ಉಳ್ಳವನಿಗೆ ಇನ್ನೂ ಹೆಚ್ಚಾಗಿ ಕೊಡಲಾಗುತ್ತದೆ, ಇಲ್ಲದವನಿಂದ ತನಗಿದೆ ಎಂದುಕೊಳ್ಳುವ ಕಿಂಚಿತ್ತನ್ನೂ ಕಸಿದುಕೊಳ್ಳಲಾಗುತ್ತದೆ,” ಎಂದರು.


ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.


ಅನಂತರ ಪೌಲನು ಮೇಲಂತಸ್ತಿಗೆ ಹಿಂದಿರುಗಿ, ರೊಟ್ಟಿಯನ್ನು ಮುರಿದು ಸಹಭೋಜನ ಮಾಡಿದನು. ಮುಂಜಾವದವರೆಗೂ ಅವರೊಡನೆ ಮಾತನಾಡಿ ಅಲ್ಲಿಂದ ಹೊರಟುಹೋದನು.


ವಾರದ ಮೊದಲನೆಯ ದಿನ ‘ರೊಟ್ಟಿ ಮುರಿಯುವ’ ಸಹಭೋಜನಕ್ಕೆ ನಾವು ಜೊತೆಕೂಡಿದ್ದೆವು. ಪೌಲನು ಮಾರನೆಯ ದಿನ ಅವರನ್ನು ಬಿಟ್ಟುಹೊರಡಬೇಕಾದ್ದರಿಂದ ಉಪನ್ಯಾಸ ಮಾಡಲಾರಂಭಿಸಿ, ಮಧ್ಯರಾತ್ರಿಯವರೆಗೂ ಮುಂದುವರೆಸಿದನು.


ತಮ್ಮ ತಮ್ಮ ಪಟ್ಟಣಗಲ್ಲಿ ವಾಸಿಸುತ್ತಿದ್ದ ಇಸ್ರಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದಿನ ಬಯಲಿನಲ್ಲಿ ಒಟ್ಟಿಗೆ ಸೇರಿದರು. ಸರ್ವೇಶ್ವರಸ್ವಾಮಿ ಮೋಶೆಯ ಮುಖಾಂತರ ಇಸ್ರಯೇಲರಿಗೆ ಕೊಟ್ಟ ಧರ್ಮಶಾಸ್ತ್ರದ ಗ್ರಂಥವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡರು.


ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.


ಜನಸಮೂಹಕ್ಕಿಂತಲೂ ಎತ್ತರವಾದ ಸ್ಥಳದಲ್ಲಿ ನಿಂತಿದ್ದ ಎಜ್ರನು ಜನರ ಸಮಕ್ಷಮದಲ್ಲಿ ಗ್ರಂಥವನ್ನು ತೆರೆದ ಕೂಡಲೆ, ಎಲ್ಲರು ಎದ್ದುನಿಂತರು.


ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಸರ್ವೇಶ್ವರನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಹಿರಿಯರ ವಶಕ್ಕೆ ಕೊಟ್ಟನು.


ಮೋಶೆ ಆಜ್ಞಾಪಿಸಿದ್ದರಲ್ಲಿ ಒಂದನ್ನೂ ಬಿಡದೆ ಮಹಿಳೆಯರಿಗೂ ಮಕ್ಕಳಿಗೂ ಅನ್ಯದೇಶೀಯರಿಗೂ ಕೇಳಿಸುವಂತೆ ಸರ್ವಸಮೂಹದ ಮುಂದೆ ಓದಿದನು.


ಎಜ್ರನು, ಮೊದಲನೆಯ ದಿನದಿಂದ ಕಡೆಯ ದಿನದವರೆಗೂ ಪ್ರತಿದಿನವೂ ದೇವರ ಧರ್ಮಶಾಸ್ತ್ರವನ್ನು ಜನರಿಗೆ ಪಾರಾಯಣ ಮಾಡುತ್ತಿದ್ದನು. ಏಳು ದಿನಗಳವರೆಗೂ ಜಾತ್ರೆ ನಡೆಯಿತು. ನೇಮದ ಪ್ರಕಾರ ಎಂಟನೆಯ ದಿನ ಮುಕ್ತಾಯ ಸಮಾರಂಭಕ್ಕಾಗಿ ಸಭೆಕೂಡಿದರು.


ಮುಖಂಡರಾದ ತಮ್ಮ ಸಹೋದರರನ್ನು ಸೇರಿಕೊಂಡು, ದೇವರ ದಾಸ ಮೋಶೆಯ ಮುಖಾಂತರ ಕೊಡಲಾದ ದೇವರ ಧರ್ಮೋಪದೇಶವನ್ನು ತಾವು ಅನುಸರಿಸಿ, ತಮ್ಮ ಸರ್ವೇಶ್ವರನಾದ ದೇವರ ಎಲ್ಲ ಆಜ್ಞಾನಿಯಮವಿಧಿಗಳನ್ನು ಕೈಗೊಂಡು ನಡೆಯುವುದಾಗಿ, ಆಣೆ ಇಟ್ಟು ಹೀಗೆ ಪ್ರಮಾಣ ಮಾಡಿದರು:


ಆ ಕಾಲದಲ್ಲಿ ಜನರ ಮುಂದೆ ಮೋಶೆಯ ಧರ್ಮಶಾಸ್ತ್ರ ಪಾರಾಯಣವು ನಡೆಯುತ್ತಿತ್ತು. ಅದರಲ್ಲಿ - ಅಮ್ಮೋನಿಯರಾಗಲಿ ಮೋವಾಬ್ಯರಾಗಲಿ ದೇವರ ಸಭೆಯಲ್ಲಿ ಎಂದಿಗೂ ಸೇರಬಾರದಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು