Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 8:6 - ಕನ್ನಡ ಸತ್ಯವೇದವು C.L. Bible (BSI)

6 ಎಜ್ರನು ಪರಾತ್ಪರ ದೇವರಾದ ಸರ್ವೇಶ್ವರನನ್ನು ಸ್ತುತಿಸಿದಾಗ ಸರ್ವಜನರೂ ತಮ್ಮ ಕೈಗಳನ್ನೆತ್ತಿ ‘ಆಮೆನ್, ಆಮೆನ್’ ಎಂದು ಹೇಳಿ ನೆಲದಮಟ್ಟಿಗೂ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಜ್ರನು ಪರಾತ್ಪರನಾದ ದೇವರಾದ ಯೆಹೋವನನ್ನು ಸ್ತುತಿಸಿದಾಗ, ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್, ಎಂದು ಹೇಳಿ ನೆಲದವರೆಗೂ ತಲೆಬಾಗಿ ಸ್ತೋತ್ರ ಆರ್ಪಿಸಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಜ್ರನು ಮಹೋನ್ನತ ದೇವರಾದ ಯೆಹೋವನನ್ನು ಸ್ತುತಿಸಿದನು. ಆಗ ಜನರೆಲ್ಲರೂ ಕೈಗಳನ್ನೆತ್ತಿ, “ಆಮೆನ್! ಆಮೆನ್!” ಎಂದು ಹೇಳಿದರು; ತಲೆಬಾಗಿ ಯೆಹೋವನನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಎಜ್ರನು ಮಹಾ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿದನು. ಅದಕ್ಕೆ ಜನರೆಲ್ಲರು ತಮ್ಮ ಕೈಗಳನ್ನೆತ್ತಿ ಉತ್ತರವಾಗಿ, “ಆಮೆನ್, ಆಮೆನ್,” ಎಂದು ಹೇಳಿ ನೆಲದವರೆಗೂ ತಮ್ಮ ತಲೆಗಳನ್ನು ಬಗ್ಗಿಸಿ ಯೆಹೋವ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 8:6
30 ತಿಳಿವುಗಳ ಹೋಲಿಕೆ  

ಪ್ರಾರ್ಥನೆ ಮಾಡುವ ಸ್ಥಳಗಳಲ್ಲೆಲ್ಲಾ ಪುರುಷರು ಕೋಪತಾಪವಿಲ್ಲದೆ, ಕೋಲಾಹಲವಿಲ್ಲದೆ ಕರಗಳನ್ನೆತ್ತಿ ಭಕ್ತಿಪೂರ್ವಕವಾಗಿ ಪ್ರಾರ್ಥಿಸಬೇಕು ಎಂಬುದೇ ನನ್ನ ಅಪೇಕ್ಷೆ.


ಪರಲೋಕದಲ್ಲಿರುವ ದೇವರ ಕಡೆಗೆ ನಮ್ಮ ಕರಗಳನ್ನೂ ಹೃನ್ಮನಗಳನ್ನೂ ಎತ್ತೋಣ;


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಆಗ ಯೆಹೋಷಾಫಾಟನು ನೆಲದ ಮಟ್ಟಿಗೂ ತಲೆಬಾಗಿದನು. ಎಲ್ಲಾ ಯೆಹೂದ್ಯರೂ ಜೆರುಸಲೇಮಿನವರೂ ಸರ್ವೇಶ್ವರನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.


ಇದನ್ನು ಕೇಳಿದ ಆ ಮನುಷ್ಯ ತಲೆಬಾಗಿ ಸರ್ವೇಶ್ವರನನ್ನು ಆರಾಧಿಸಿದನು.


ತರುವಾಯ ದಾವೀದನು ನೆರೆದ ಸಭೆಯವರಿಗೆ, “ನಿಮ್ಮ ದೇವರಾದ ಸರ್ವೇಶ್ವರನನ್ನು ಸ್ತುತಿಸಿರಿ,” ಎಂದು ಹೇಳಿದನು. ಸಭೆಯವರೆಲ್ಲರೂ ತಮ್ಮ ಪಿತೃಗಳ ದೇವರಾದ ಸರ್ವೇಶ್ವರನನ್ನು ಸ್ತುತಿಸುತ್ತಾ ತಲೆಬಾಗಿ ಅವರನ್ನೂ ಅರಸನನ್ನೂ ನಮಸ್ಕರಿಸಿದರು.


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


‘ಸರ್ವೇಶ್ವರ ಸ್ವಾಮಿ ಈಜಿಪ್ಟಿನವರನ್ನು ಸಂಹರಿಸಿದಾಗ ಆ ದೇಶದಲ್ಲೇ ಇದ್ದ ಇಸ್ರಯೇಲರ ಮನೆಗಳನ್ನು ಪ್ರವೇಶಿಸದೆ ಮುಂದಕ್ಕೆ ದಾಟಿ ನಮ್ಮವರನ್ನು ಉಳಿಸಿದರು. ಆದ್ದರಿಂದ ಸರ್ವೇಶ್ವರ ಸ್ವಾಮಿಯ ಗೌರವಾರ್ಥ ಈ ಪಾಸ್ಕ ಬಲಿಯ ಆಚರಣೆಯನ್ನು ನಡೆಸುತ್ತಿದ್ದೇವೆ’ ಎಂದು ಉತ್ತರಕೊಡಿ,” ಎಂದು ಹೇಳಿದನು. ...


ನಮ್ಮ ಪ್ರಭು ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ! ಯೇಸುಕ್ರಿಸ್ತರನ್ನು ಮರಣದಿಂದ ಪುನರುತ್ಥಾನಗೊಳಿಸುವುದರ ಮೂಲಕ ದೇವರು ತಮ್ಮ ಅಪಾರ ಕರುಣೆಯಿಂದ ನಮಗೆ ಹೊಸ ಜನ್ಮವನ್ನು ಮತ್ತು ಜೀವಂತ ನಿರೀಕ್ಷೆಯನ್ನು ನೀಡಿದ್ದಾರೆ.


ನಮ್ಮ ಪ್ರಭು ಯೇಸುಕ್ರಿಸ್ತರ ಪಿತನಾದ ದೇವರಿಗೆ ಸ್ತುತಿ ಸಲ್ಲಲಿ! ಪಿತದೇವರು ಸ್ವರ್ಗಲೋಕದಿಂದ ಎಲ್ಲಾ ಬಗೆಯ ಆಧ್ಯಾತ್ಮಿಕ ಆಶೀರ್ವಾದಗಳನ್ನು ಕ್ರಿಸ್ತಯೇಸುವಿನಲ್ಲಿ ನಮಗೆ ಅನುಗ್ರಹಿಸಿದ್ದಾರೆ.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ಅನಂತರ ಅವರು ಅಲ್ಲಿಂದ ಇನ್ನೂ ಸ್ವಲ್ಪ ಮುಂದಕ್ಕೆ ಹೋಗಿ, ನೆಲದ ಮೇಲೆ ಅಧೋಮುಖವಾಗಿ ಬಿದ್ದು ಪ್ರಾರ್ಥನೆಮಾಡಿದರು. “ನನ್ನ ಪಿತನೇ, ಸಾಧ್ಯವಾದರೆ ಈ ಕಷ್ಟದ ಕೊಡವು ನನ್ನಿಂದ ದೂರವಾಗಲಿ, ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.


ನಮ್ಮನ್ನು ಶೋಧನೆಗೆ ಒಳಪಡಿಸಬೇಡಿ; ಕೇಡಿನಿಂದ ನಮ್ಮನ್ನು ರಕ್ಷಿಸಿರಿ.’


“ಆಮೆನ್! ಸರ್ವೇಶ್ವರ ಹಾಗೆಯೇ ಮಾಡಲಿ! ಸರ್ವೇಶ್ವರ ತಮ್ಮ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬಿಲೋನಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಲಿ. ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಸಮರ್ಪಕವಾಗಲಿ ನನ್ನ ಪ್ರಾರ್ಥನೆ ಧೂಪಾರತಿಯಂತೆ I ಕೈಮುಗಿದು ಮಾಡುವ ವಂದನೆ ಸಂಧ್ಯಾಬಲಿಯರ್ಪಣೆಯಂತೆ II


ನಿನ್ನ ಸ್ತುತಿಸುವೆ ಜೀವಮಾನ ಪರಿಯಂತ I ಕೈ ಮುಗಿವೆ ನಿನ್ನ ನಾಮದ ಸ್ಮರಣಾರ್ಥ II


ಇಸ್ರಯೇಲರ ದೇವರಾದ ಪ್ರಭುವಿಗೆ ಜಯ I ಯುಗಯುಗಾಂತರಕು ಆಮೆನ್ ಆಮೆನ್, ಜಯಜಯ II


ನಿನ್ನ ಪರಿಶುದ್ಧಾಲಯದತ್ತ ಕೈಯೆತ್ತಿ ಮುಗಿವೆನು I ಕರುಣೆಯಿಂದಾಲಿಸು ಪ್ರಭು, ನನ್ನಾರ್ತ ಮನವಿಯನು II


ಅರಸ ಹಿಜ್ಕೀಯನೂ ಪದಾಧಿಕಾರಿಗಳೂ ದಾವೀದನ ಮತ್ತು ದರ್ಶಿಯಾದ ಆಸಾಫನ ಕೀರ್ತನೆಗಳಿಂದ ಸರ್ವೇಶ್ವರನನ್ನು ಸ್ತುತಿಸಬೇಕೆಂದು ಲೇವಿಯರಿಗೆ ಆಜ್ಞಾಪಿಸಿದರು. ಅವರು ಉತ್ಸಾಹದಿಂದ ಸ್ತುತಿಸುತ್ತಾ ತಲೆಬಾಗಿ ನಮಸ್ಕರಿಸಿದರು.


“ಇಸ್ರಯೇಲಿನ ದೇವರಾದ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ನನ್ನ ತಂದೆ ದಾವೀದನಿಗೆ ಅವರು ಬಾಯಿಂದ ನುಡಿದದ್ದನ್ನು ಈಗ ಕೈಯಿಂದ ನೆರವೇರಿಸಿದ್ದಾರೆ.


ಅದಕ್ಕೆ ಅಬ್ರಾಮನು, “ಭೂಮ್ಯಾಕಾಶಗಳನ್ನು ಉಂಟುಮಾಡಿದ ಪರಾತ್ಪರ ದೇವರ ಕಡೆಗೆ ಕೈಯೆತ್ತಿ ಪ್ರಮಾಣ ಮಾಡುತ್ತೇನೆ:


ಇಸ್ರಯೇಲಿನ ದೇವನಾದ ಸರ್ವೇಶಗೆ ಸ್ತೋತ್ರ I ಅನಾದಿಯಿಂದ ಯುಗಯುಗಾಂತರಕು ಸ್ತೋತ್ರ I ಜನರೆಲ್ಲರು ಹೇಳಲಿ ‘ಆಮೆನ್,’ ಸರ್ವೇಶ್ವರನಿಗೆ ಸ್ತೋತ್ರ II


ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಈಗ ನಮ್ಮ ಮೇಲಿರುವ ದೈವಕೋಪಾಗ್ನಿ ತೊಲಗಿಹೋಗುವಂತೆ ಇಸ್ರಯೇಲ್ ದೇವರಾದ ಸರ್ವೇಶ್ವರನೊಡನೆ ಒಡಂಬಡಿಕೆ ಮಾಡಿಕೊಳ್ಳುವುದಕ್ಕೆ ತೀರ್ಮಾನಿಸಿದ್ದೇನೆ.


ಏಕೆಂದರೆ ಪ್ರಭು ದೇವಾಧಿದೇವನು I ದೇವರುಗಳಲೆಲ್ಲ ರಾಜಾಧಿರಾಜನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು