ನೆಹೆಮೀಯ 8:9 - ಕನ್ನಡ ಸತ್ಯವೇದವು C.L. Bible (BSI)9 ಜನರೆಲ್ಲರು ಧರ್ಮೋಪದೇಶದ ವಾಕ್ಯಗಳನ್ನು ಕೇಳುತ್ತಾ ಕಣ್ಣೀರಿಡುತ್ತಿದ್ದರು. ರಾಜ್ಯಪಾಲ ನೆಹೆಮೀಯನು, ಧರ್ಮೋಪದೇಶ ಮಾಡುವ ಯಾಜಕ ಎಜ್ರನು ಹಾಗು ಜನರನ್ನು ಸಂಬೋಧಿಸುತ್ತಿದ್ದ ಲೇವಿಯರು ಜನರಿಗೆ, “ಈ ದಿನ ನಿಮ್ಮ ದೇವರಾದ ಸರ್ವೇಶ್ವರನಿಗೆ ಪರಿಶುದ್ಧ ದಿನ! ಆದುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಜನರೆಲ್ಲರೂ ಧರ್ಮೋಪದೇಶವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದದರಿಂದ ದೇಶಾಧಿಪತಿಯಾದ ನೆಹೆಮೀಯನೂ ಧರ್ಮೋಪದೇಶಮಾಡುವ ಯಾಜಕನಾದ ಎಜ್ರನೂ ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಅವರಿಗೆ - ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ಪರಿಶುದ್ಧದಿನವಾಗಿರುವದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆಗ ಜನರೆಲ್ಲಾ ಅಳಲು ಪ್ರಾರಂಭಿಸಿದರು. ಆಗ ರಾಜ್ಯಪಾಲನಾದ ನೆಹೆಮೀಯನೂ ಯಾಜಕನೂ ಮತ್ತು ಉಪದೇಶಕನೂ ಆಗಿದ್ದ ಎಜ್ರನೂ ಲೇವಿಯರೂ ಎದ್ದುನಿಂತು ಜನರಿಗೆ, “ಈ ದಿನವು ನಿಮ್ಮ ದೇವರಾದ ಯೆಹೋವನಿಗೆ ವಿಶೇಷ ದಿನವಾಗಿದೆ. ಆದ್ದರಿಂದ ದುಃಖಿಸಬೇಡಿ ಮತ್ತು ಅಳಬೇಡಿರಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ರಾಜಪಾಲನಾದ ನೆಹೆಮೀಯನೂ, ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನೂ, ಜನರನ್ನು ಬೋಧಿಸುತ್ತಿದ್ದ ಲೇವಿಯರೂ ಜನರೆಲ್ಲರಿಗೆ: “ಈ ದಿನವು ನಿಮ್ಮ ದೇವರಾಗಿರುವ ಯೆಹೋವ ದೇವರಿಗೆ ಪರಿಶುದ್ಧವಾದುದರಿಂದ ದುಃಖಿಸದೆ, ಅಳದೆ ಇರಿ,” ಎಂದರು. ಏಕೆಂದರೆ ಜನರೆಲ್ಲರು ದೇವರ ನಿಯಮದ ಮಾತುಗಳನ್ನು ಕೇಳಿದಾಗ ಅತ್ತರು. ಅಧ್ಯಾಯವನ್ನು ನೋಡಿ |
“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.