Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:1 - ಕನ್ನಡ ಸತ್ಯವೇದವು C.L. Bible (BSI)

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನ, ಇಸ್ರಯೇಲರು ಉಪವಾಸವಾಗಿದ್ದು ಗೋಣೀ ತಟ್ಟನ್ನು ಕಟ್ಟಿಕೊಂಡು, ತಲೆಯ ಮೇಲೆ ಮಣ್ಣುಸುರಿದುಕೊಂಡು, ನೆರೆದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಮ್ಮ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರಾಯೇಲ್ಯರು ಉಪವಾಸವಾಗಿದ್ದು ಗೋಣೀತಟ್ಟನ್ನು ಕಟ್ಟಿಕೊಂಡು ತಲೆಯ ಮೇಲೆ ಮಣ್ಣುಹಾಕಿಕೊಂಡು ನೆರೆದು ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿನದಲ್ಲಿ ಇಸ್ರೇಲರು ತಿರಿಗಿ ಸೇರಿಬಂದು ಒಂದು ದಿನದ ಉಪವಾಸ ಮಾಡಿದರು. ಶೋಕಬಟ್ಟೆಯನ್ನು ಧರಿಸಿ, ತಲೆಗೆ ಬೂದಿಯನ್ನು ಹಾಕಿ ತಮ್ಮತಮ್ಮ ದುಃಖವನ್ನು ವ್ಯಕ್ತಪಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಅದೇ ತಿಂಗಳಿನ ಇಪ್ಪತ್ತನಾಲ್ಕನೆಯ ದಿವಸದಲ್ಲಿ ಇಸ್ರಾಯೇಲರು ಉಪವಾಸ ಮಾಡಿ, ಗೋಣಿತಟ್ಟನ್ನು ಉಟ್ಟುಕೊಂಡು, ತಮ್ಮ ಮೇಲೆ ಧೂಳನ್ನು ಹಾಕಿಕೊಂಡು ನೆರೆದುಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:1
22 ತಿಳಿವುಗಳ ಹೋಲಿಕೆ  

ಯಾಜಕ ಎಜ್ರನು, ಗ್ರಹಿಸಿಕೊಳ್ಳಲು ಶಕ್ತರಾದ ಸ್ತ್ರೀಪುರುಷರು ನೆರೆದಿದ್ದ ಸಮೂಹದವರ ಮುಂದೆ, ಏಳನೆಯ ತಿಂಗಳಿನ ಪ್ರಥಮ ದಿನದಲ್ಲಿ ಆ ಧರ್ಮಶಾಸ್ತ್ರವನ್ನು ತಂದು ಬೆಳಗಿನಿಂದ ಮಧ್ಯಾಹ್ನದವರೆಗೂ ಓದಿದನು.


ನಾವು ಈ ಕಾರಣ ಉಪವಾಸಮಾಡಿ ದೇವರನ್ನು ಪ್ರಾರ್ಥಿಸಿದೆವು; ಅವರು ನಮಗೆ ಪ್ರಸನ್ನರಾದರು.


ಆಗ ಯೆಹೋಶುವನು ಮತ್ತು ಇಸ್ರಯೇಲರ ಹಿರಿಯರು ದುಃಖ ತಾಳಲಾರದೆ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಬೂದಿಯನ್ನು ಸುರಿದುಕೊಂಡು ಸಾಯಂಕಾಲದವರೆಗೆ ಸರ್ವೇಶ್ವರನ ಮಂಜೂಷದ ಮುಂದೆ ಅಧೋಮುಖರಾಗಿ ಬಿದ್ದಿದ್ದರು.


ಅದೇ ದಿನ ಒಬ್ಬ ಬೆನ್ಯಾಮೀನ್ಯನು ರಣರಂಗದಿಂದ ತಪ್ಪಿಸಿಕೊಂಡು, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು,


ಎಂದೇ ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಆ ದಿನದಂದು ನಿಮಗೆ ಆಜ್ಞಾಪಿಸಿ : “ನೀವು ಅತ್ತು ಪ್ರಲಾಪಿಸಬೇಕು, ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು,” ಎಂದು ಹೇಳಿದರು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.


ಯೆಹೋಷಾಫಾಟನು ಇದನ್ನು ಕೇಳಿ ಭಯಪಟ್ಟು, ಸರ್ವೇಶ್ವರನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿದನು.


ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿನ ಅರಸನು ಜನರಿಗೆ ಅಪ್ಪಣೆಕೊಟ್ಟನು; ಅವರು ದಾವೀದ - ಸೊಲೊಮೋನರಿಗೂ ಪ್ರಜೆಗಳಾದ ಇಸ್ರಯೇಲರಿಗೂ ಸರ್ವೇಶ್ವರ ಮಾಡಿದ ಉಪಕಾರಗಳನ್ನು ನೆನಸಿಕೊಂಡು, ಆನಂದಭರಿತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ಹಿಂದಿರುಗಿದರು.


ಮೂರನೆಯ ದಿನ ಸೌಲನ ಪಾಳೆಯದಿಂದ ಒಬ್ಬ ವ್ಯಕ್ತಿ ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು. ಅವನು ಸಂತಾಪದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.


ಆಗ ಎಲ್ಲ ಜನರು ಬೇತೇಲಿಗೆ ಹೋಗಿ ಅಲ್ಲಿ ಸರ್ವೇಶ್ವರನ ಮುಂದೆ ಅಳುತ್ತಾ ಕುಳಿತು, ಸಾಯಂಕಾಲದವರೆಗೆ ಉಪವಾಸಮಾಡಿದರು. ಇದಲ್ಲದೆ ಅವರು ಸರ್ವೇಶ್ವರನಿಗೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಸಮರ್ಪಿಸಿದರು.


ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.


“ಏಳನೆಯ ತಿಂಗಳಿನ ಹದಿನೈದನೆಯ ದಿನ ಮೊದಲ್ಗೊಂಡು ಏಳು ದಿನದವರೆಗೆ ಪರ್ಣಕುಟೀರಗಳ ಜಾತ್ರೆಯನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು.


ನಾನು ನನ್ನ ಇಬ್ಬರು ಸಾಕ್ಷಿಗಳನ್ನು ಕಳುಹಿಸುವೆನು. ಅವರು ಗೋಣಿತಟ್ಟನ್ನು ಉಟ್ಟುಕೊಂಡು ಒಂದು ಸಾವಿರದ ಇನ್ನೂರ ಅರವತ್ತು ದಿನಗಳ ಕಾಲ ಪ್ರವಾದಿಸುವರು.”


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ಆಮೇಲೆ ಆ ಅಹವಾ ನದಿಯ ಬಳಿಯಲ್ಲಿ, ನಾವು ಉಪವಾಸದಿಂದಿದ್ದು ನಮ್ಮ ದೇವರ ಮುಂದೆ ನಮ್ಮನ್ನೇ ತಗ್ಗಿಸಿಕೊಂಡು, ನಮಗೂ ನಮ್ಮ ಮನೆಯವರಿಗೂ ನಮ್ಮ ಎಲ್ಲ ಆಸ್ತಿಗೂ ಪ್ರಯಾಣದಲ್ಲಿ ಶುಭವನ್ನು ಕೋರಬೇಕೆಂದು ಪ್ರಕಟಿಸಿದೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಈಗಲಾದರೂ ಮನಃಪೂರ್ವಕವಾಗಿ ನನ್ನ ಕಡೆಗೆ ತಿರುಗಿಕೊಳ್ಳಿ. ಉಪವಾಸ ಕೈಗೊಂಡು, ಅತ್ತು ಗೋಳಾಡಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು