Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:11 - ಕನ್ನಡ ಸತ್ಯವೇದವು C.L. Bible (BSI)

11 ಕಡಲನು ಸೀಳಿ, ಆ ಪಿತೃಗಳ ನಡೆಸಿದಿರಿ ಒಣನೆಲದಲೋ ಎಂಬಂತೆ ಅವರ ಬೆನ್ನಟ್ಟಿ ಬಂದವರನು ಜಲರಾಶಿಯ ತಳಮುಟ್ಟಿಸಿದಿರಿ ಕಲ್ಲಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಮ್ಮ ಪೂರ್ವಿಕರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದ್ದೀ. ಅವರನ್ನು ಹಿಂದಟ್ಟಿದವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕೆಂಪುಸಮುದ್ರವನ್ನು ಅವರ ಕಣ್ಣು ಮುಂದೆಯೇ ಇಬ್ಬಾಗ ಮಾಡಿದೆ. ಅವರು ಆ ಒಣನೆಲದಲ್ಲಿ ನಡೆದರು. ಈಜಿಪ್ಟಿನ ವೈರಿಗಳು ಅವರನ್ನು ಹಿಂಬಾಲಿಸುತ್ತಿದ್ದರು. ಆದರೆ ಆ ವೈರಿಗಳನ್ನು ನೀನು ಸಮುದ್ರದೊಳಗೆ ಬಿಸಾಡಿದೆ; ಅವರು ಗುಂಡುಕಲ್ಲಿನಂತೆ ಸಮುದ್ರದಲ್ಲಿ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನೀವು ಜನರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ, ಅವರು ಸಮುದ್ರದ ನಡುವೆ ಒಣಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನಂತೆ ಮಹಾ ಜಲರಾಶಿಗಳಲ್ಲಿ ಮುಳುಗಿಸಿಬಿಟ್ಟಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:11
16 ತಿಳಿವುಗಳ ಹೋಲಿಕೆ  

ದಾಟಿಸಿದನವರನು ಸಮುದ್ರವನೆ ಭೇದಿಸಿ I ಅದರತುಳ ನೀರನು ರಾಶಿಯಾಗಿ ನಿಲ್ಲಿಸಿ II


ವಿಶ್ವಾಸದಿಂದಲೇ ಇಸ್ರಯೇಲರು ಒಣನೆಲವನ್ನು ದಾಟುವಂತೆ, ಕೆಂಪು ಸಮುದ್ರವನ್ನು ದಾಟಿದರು. ಈಜಿಪ್ಟಿನವರು ಹಾಗೆಯೇ ದಾಟಲೆತ್ನಿಸಿದಾಗ ನೀರಿನ ಪಾಲಾದರು.


ಒಣನೆಲವಾಗಿ ಮಾರ್ಪಡಿಸಿದ ಕಡಲನು I ಕಾಲು ನಡೆಯಲೇ ದಾಟಿಸಿದ ನದಿಯನು I ಇದ ನಿಮಿತ್ತ ಪಡೆಯೋಣ ಆನಂದವನು II


ಆಗ ಒಬ್ಬ ಬಲಿಷ್ಠ ದೇವದೂತನು ಬೀಸುವ ಕಲ್ಲಿನಂತಿದ್ದ ಒಂದು ದೊಡ್ಡ ಕಲ್ಲನ್ನು ಎತ್ತಿ ಸಮುದ್ರಕ್ಕೆ ಎಸೆದು ಹೀಗೆಂದನು : “ಬಾಬಿಲೋನ್ ಮಹಾನಗರವನು ಈ ಪರಿಯಾಗಿ ಎತ್ತೆಸೆಯಲಾಗುವುದು ಅವಳಿದ್ದ ಎಡೆಯು ಯಾರಿಗೂ ಕಾಣಸಿಗದಂತಾಗುವುದು.”


ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.


ಸರ್ವೇಶ್ವರ ಸ್ವಾಮಿಯೇ ನಿಮ್ಮ ಪರವಾಗಿ ಯುದ್ಧಮಾಡುವರು. ನೀವು ನೆಮ್ಮದಿಯಿಂದಿರಿ,” ಎಂದು ಹೇಳಿದನು.


ಸರ್ವೇಶ್ವರ ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಈಜಿಪ್ಟಿನವರು ಬಹುಕಷ್ಟದಿಂದ ಅವುಗಳನ್ನು ಸಾಗಿಸಿಕೊಂಡು ಹೋದರು. ಆಗ ಈಜಿಪ್ಟಿನವರು, “ನಾವು ಇಸ್ರಯೇಲರ ಮುಂದೆ ಗೆಲ್ಲಲಾರೆವು. ಓಡಿಹೋಗೋಣ ಬನ್ನಿ; ಸರ್ವೇಶ್ವರನು ಅವರ ಪರವಾಗಿ, ನಮಗೆ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾನೆ,” ಎಂದುಕೊಂಡರು.


ಇಸ್ರಯೇಲರಾದರೋ, ಸಮುದ್ರದೊಳಗೆ ಒಣ ನೆಲದಲ್ಲೇ ನಡೆದುಹೋದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತ್ತು.


ಈಜಿಪ್ಟ್ ದೇಶದಲ್ಲಿ ಮಾಡಿದ ಮಹತ್ಕಾರ್ಯಗಳನ್ನೂ ಪವಾಡಗಳನ್ನೂ ಇಸ್ರಯೇಲರಲ್ಲೂ ಇತರ ಜನಾಂಗಗಳಲ್ಲೂ ಈ ದಿನದವರೆಗೂ ಮಾಡಿ ಹೆಸರುವಾಸಿಯಾದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು