Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:17 - ಕನ್ನಡ ಸತ್ಯವೇದವು C.L. Bible (BSI)

17 ಮರೆತುಬಿಟ್ಟರು ನೀವೆಸಗಿದ ಮಹಾತ್ಕಾರ್ಯಗಳನು ಹಟಹಿಡಿದರು ತಮಗೊಬ್ಬ ನಾಯಕನ ನೇಮಿಸಿಕೊಳ್ಳಲು; ಈಜಿಪ್ಟಿಗೆ ತೆರಳಲಿದ್ದರು ಮರಳಿ ಗುಲಾಮರಾಗಲು. ನೀವಾದರೋ ಪಾಪಿಗಳನು ಕ್ಷಮಿಸುವವರು ದಯಾಪೂರಿತರು, ದೀರ್ಘಶಾಂತರು, ಕೃಪಾಳು ದೇವರು, ಅವರನು ಕೈಬಿಡದೆ ಕಾಪಾಡಿ ನಡೆಸಿದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಬೇಗನೆ ಮರೆತು, ನಿನ್ನ ಮಾತಿಗೆ ಕಿವಿಗೊಡದೆ ಹಠಹಿಡಿದು, ತಮಗೊಬ್ಬ ನಾಯಕನನ್ನು ನೇಮಿಸಿಕೊಂಡು, ಮೊದಲಿನಂತೆ ದಾಸರಾಗಿರುವುದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ಆದರೆ ನೀನಾದರೋ ಪಾಪಗಳನ್ನು ಕ್ಷಮಿಸುವವನೂ, ಕನಿಕರ ದಯೆಗಳುಳ್ಳವನೂ, ದೀರ್ಘಶಾಂತನೂ, ಕೃಪಾಳುವೂ ಆಗಿರುವ ದೇವರಾಗಿರುವುದರಿಂದ ನೀನು ಅವರ ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನು ಅವರ ಮಧ್ಯದಲ್ಲಿ ಮಾಡಿದ ಮಹತ್ಕಾರ್ಯಗಳನ್ನು ಅವರು ಮರೆತು ಮಾತುಕೇಳದೆ ಹಟಹಿಡಿದು ತಮಗೊಬ್ಬ ನಾಯಕನನ್ನು ನೇವಿುಸಿಕೊಂಡು ಮುಂಚಿನಂತೆ ದಾಸರಾಗಿರುವದಕ್ಕಾಗಿ ಐಗುಪ್ತಕ್ಕೆ ಹಿಂದಿರುಗಬೇಕೆಂದಿದ್ದರು. ನೀನಾದರೋ ಪಾಪಗಳನ್ನು ಕ್ಷವಿುಸುವವನೂ ಕನಿಕರದಯೆಗಳುಳ್ಳವನೂ ದೀರ್ಘಶಾಂತನೂ ಕೃಪಾಳುವೂ ಆಗಿರುವ ದೇವರು; ನೀನು ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿನ್ನ ಮಾತನ್ನು ಕೇಳಲು ನಿರಾಕರಿಸಿದರು. ಅವರಿಗಾಗಿ ಅದ್ಭುತಕಾರ್ಯಗಳನ್ನು ಮಾಡಿದ್ದನ್ನು ಅವರು ಮರೆತರು. ಅವರು ಹಠಮಾರಿಗಳಾಗಿದ್ದರಿಂದ ತಮ್ಮನ್ನು ಈಜಿಪ್ಟಿನ ಗುಲಾಮಗಿರಿಗೆ ಮತ್ತೆ ಕರೆದೊಯ್ಯಲು ಒಬ್ಬ ನಾಯಕನನ್ನು ನೇಮಿಸಲು ಅವರು ನಿರ್ಧರಿಸಿದರು. “ಆದರೆ ನೀನು ಕ್ಷಮಿಸುವ ದೇವರಾಗಿರುವೆ. ನೀನು ಕನಿಕರ ಉಳ್ಳವನಾಗಿರುವೆ. ನೀನು ತಾಳ್ಮೆಯುಳ್ಳವನೂ ಪ್ರೀತಿಸ್ವರೂಪನೂ ಆಗಿರುವೆ. ಆದ್ದರಿಂದ ನೀನು ಅವರನ್ನು ತೊರೆಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವರು ನಿಮ್ಮ ಸ್ವರವನ್ನು ಕೇಳದೆಯೂ, ನೀವು ಅವರ ನಡುವೆ ಮಾಡಿದ ಅದ್ಭುತಕಾರ್ಯಗಳನ್ನು ಜ್ಞಾಪಕಮಾಡದೆ ಹೋದರು. ಅವರು ತಮ್ಮ ಹೃದಯವನ್ನು ಕಠಿಣ ಮಾಡಿಕೊಂಡು, ನಿಮಗೆ ಎದುರುಬಿದ್ದು, ತಮ್ಮ ದಾಸತ್ವಕ್ಕೆ ತಿರುಗಿ ಹೋಗುವಹಾಗೆ ನಾಯಕನನ್ನು ನೇಮಿಸಿಕೊಂಡರು. ಆದರೆ ನೀವು ಮನ್ನಿಸುವ ದೇವರಾಗಿಯೂ, ಕೃಪಾಪೂರ್ಣರೂ, ಅನುಕಂಪವುಳ್ಳವರೂ, ದೀರ್ಘಶಾಂತರೂ, ಪ್ರೀತಿಯಲ್ಲಿ ಸಮೃದ್ಧರೂ ಆಗಿರುವುದರಿಂದ ಅವರನ್ನು ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:17
43 ತಿಳಿವುಗಳ ಹೋಲಿಕೆ  

ಪ್ರಭು, ನೀನು ದಯಾವಂತನು, ಕ್ಷಮಿಸುವವನು I ಮೊರೆಯಿಡುವವರಿಗೆ ನೀನು ಕೃಪಾಪೂರ್ಣನು II


ನಿಮ್ಮ ಉಡುಪುಗಳನ್ನು ಅಲ್ಲ, ಹೃದಯಗಳನ್ನು ಸೀಳಿರಿ: ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಕಡೆಗೆ ತಿರುಗಿಕೊಳ್ಳಿ; ಅವರು ದಯಾವಂತರು, ಕರುಣಾಮೂರ್ತಿ, ಸಹನಶೀಲ, ಪ್ರೀತಿಮಯ, ವಿಧಿಸಬೇಕಾಗಿದ್ದ ದಂಡನೆಗಾಗಿ ಮನನೊಂದುಕೊಳ್ಳುವಂಥವರು.


ಪ್ರಭು, ನೀ ದಯಾಳು, ದೇವಾ ನೀ ಕರುಣಾಮೂರ್ತಿ I ಸಹನಶೀಲನು, ಸತ್ಯಸ್ವರೂಪಿ, ಪ್ರೇಮಮೂರ್ತಿ II


ಏಕೆಂದರೆ ದೇವರೇ ಮೋಶೆಗೆ ಈ ರೀತಿ ಹೇಳಿದ್ದಾರೆ: “ಯಾರ ಮೇಲೆ ದಯೆತೋರಲು ನನಗೆ ಇಷ್ಟವಿದೆಯೋ ಅವರ ಮೇಲೆ ದಯೆತೋರುವೆನು ಯಾರ ಮೇಲೆ ಕನಿಕರತೋರಲು ನನಗೆ ಮನಸ್ಸಿದೆಯೋ ಅವರ ಮೇಲೆ ಕನಿಕರ ತೋರುವೆನು.”


ಆದರೂ ಕ್ಷಮಿಸಿದನವರನು ಆ ದಯಾಳು, ನಾಶಮಾಡದೆ I ಕೋಪವ ತಾಳಿಕೊಂಡನು ಹಲವು ವೇಳೆ, ಉದ್ರೇಕಗೊಳ್ಳದೆ II


ನನ್ನ ಪ್ರಜೆಗಳಾದ ಇಸ್ರಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು,” ಎಂದು ಹೇಳಿದರು.


ಗ್ರಹಿಸಲಿಲ್ಲಾ ಪಿತೃಗಳು ನಿನ್ನದ್ಭುತಗಳನು ಈಜಿಪ್ಟಿನಲಿ I ಸ್ಮರಿಸಲಿಲ್ಲವರು ನಿನ್ನಚಲ ಪ್ರೇಮಾತಿಶಯಗಳನು ಅಲ್ಲಿ I ಬದಲಿಗೆ ಮಹೋನ್ನತನನೆ ಪ್ರತಿಭಟಿಸಿದರು ಕೆಂಗಡಲಬಳಿ II


ಮರೆತುಬಿಟ್ಟರವರು ಆತನ ಮಹತ್ಕಾರ್ಯಗಳನು I ತಮ್ಮೆದುರಿನಲ್ಲೇ ಸಾಧಿಸಿದ ಅದ್ಭುತಗಳನು : II


ನಮ್ಮ ದೇವರಾದ ಸರ್ವೇಶ್ವರ ನಮ್ಮ ಪೂರ್ವಜರೊಂದಿಗೆ ಇದ್ದ ಹಾಗೆ ನಮ್ಮೊಂದಿಗೂ ಇರಲಿ! ಅವರು ನಮ್ಮನ್ನು ಕೈಬಿಡದಿರಲಿ, ತಳ್ಳದಿರಲಿ;


ಆದರೆ ಮರೆತರು ಬೇಗನೆ ಆತನ ಸತ್ಕಾರ್ಯಗಳನು I ಕಾಯದೆ ಹೋದರು ಆತನಾ ಸಂಕಲ್ಪ ಸಾದನೆಯನು II


ಪಾಪವನು ಕ್ಷಮಿಸುವವನು ನೀನು I ಎಂತಲೆ ಭಯಭಕ್ತಿಗೆ ಪಾತ್ರನು II


ಆದ್ದರಿಂದ ನಿಮ್ಮೊಡನೆ ಮಾತಾಡುವ ದೇವರ ಧ್ವನಿಯನ್ನು ಕಡೆಗಣಿಸಬೇಡಿ. ಭೂಮಿಯ ಮೇಲೆ ತಮಗೆ ಬುದ್ಧಿವಾದ ಹೇಳಿದವರನ್ನು ಕಡೆಗಣಿಸಿದವರು ದಂಡನೆಯಿಂದ ತಪ್ಪಿಸಿಕೊಳ್ಳಲಿಲ್ಲ. ಹೀಗಿರುವಲ್ಲಿ, ನಮಗೆ ಸ್ವರ್ಗಲೋಕದಿಂದ ಬುದ್ಧಿವಾದ ಹೇಳಿದಾತನನ್ನು ಕಡೆಗಣಿಸಿದರೆ ಹೇಗೆತಾನೆ ದಂಡನೆಯಿಂದ ತಪ್ಪಿಸಿಕೊಂಡೇವು?


“ಆದರೆ ನಮ್ಮ ಪಿತೃಗಳು ಅವನಿಗೆ ವಿಧೇಯರಾಗಲು ನಿರಾಕರಿಸಿದರು. ಅವನನ್ನು ತಿರಸ್ಕರಿಸಿ ಈಜಿಪ್ಟ್ ದೇಶಕ್ಕೆ ಹಿಂದಿರುಗಲು ಮನಸ್ಸು ಮಾಡಿದರು.


ನಾನು ನಿಮ್ಮನ್ನು ಕರೆದಾಗ ತಿರಸ್ಕರಿಸಿದಿರಿ. ನಾನು ನಿಮಗೆ ಕೈ ನೀಡಿದಾಗ ಗಮನಿಸದೆ ಹೋದಿರಿ.


ಅಷ್ಟುಮಾತ್ರವಲ್ಲ, ಹಾಲೂಜೇನೂ ಹರಿಯುವ ದೇಶಕ್ಕೆ ನಮ್ಮನ್ನು ಸೇರಿಸಲೇಯಿಲ್ಲ; ಹೊಲ ಹಾಗು ದ್ರಾಕ್ಷೆತೋಟಗಳನ್ನು ನಮ್ಮ ಸ್ವಾಧೀನಕ್ಕೆ ಕೊಟ್ಟೂ ಇಲ್ಲ. ಈ ಜನರ ಕಣ್ಣಿಗೆ ಮಣ್ಣುಹಾಕಬೇಕೆಂದಿರುವೆಯಾ? ನಾವು ಬರುವುದಿಲ್ಲ,” ಎಂದು ಹೇಳಿದರು.


ಆದರೆ ಮೋಶೆ ಅವರಿಗೆ, “ಸರ್ವೇಶ್ವರನ ಆಜ್ಞೆಯನ್ನು ಏಕೆ ಮೀರುತ್ತೀರಿ? ಇದು ಕೈಗೂಡುವುದಿಲ್ಲ.


ಮೋಶೆಗೆ ಸರ್ವೇಶ್ವರ, “ಇನ್ನೆಷ್ಟುಕಾಲ ಈ ಜನರು ನನ್ನನ್ನು ಅಲಕ್ಷ್ಯ ಮಾಡುವರು? ನಾನು ಮಾಡಿದ ಮಹತ್ಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಇನ್ನೆಷ್ಟು ಕಾಲ ನಂಬದೆ ಇರುವರು?


ಆದರೆ, ನೀವು ದಯಾಪೂರಿತರು, ಕರುಣಾಮಯ ದೇವರು! ನಿಮ್ಮ ಮಹಾಕೃಪಾನುಸಾರ, ಕೈಬಿಡಲಿಲ್ಲ, ನಾಶಮಾಡಲಿಲ್ಲ ಅವರನು.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ನಮ್ಮ ದೇವರಾದ ಸರ್ವೇಶ್ವರ, ನಮ್ಮನ್ನು ಕರುಣಿಸುವವರೂ ಕ್ಷಮಿಸುವವರೂ ಆಗಿದ್ದಾರೆ. ಆದರೆ ನಾವು ಅವರಿಗೆ ವಿರುದ್ಧ ತಿರುಗಿಬಿದ್ದೆವು.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು.


ಅವರು ಶತ್ರುಗಳ ದೇಶದಲ್ಲಿರುವಾಗಲೂ ನಾನು ಅವರನ್ನು ಬೇಡವೆನ್ನುವುದಿಲ್ಲ. ತಾತ್ಸಾರ ಮಾಡುವುದಿಲ್ಲ, ನಾನು ಅವರಿಗೆ ಮಾಡಿದ ವಾಗ್ದಾನವನ್ನು ಮೀರುವುದಿಲ್ಲ. ನಾನು ಅವರ ದೇವರಾದ ಸರ್ವೇಶ್ವರನಲ್ಲವೆ?


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ಇದಲ್ಲದೆ, ನೆಬೂಕದ್ನೆಚ್ಚರನಿಗೆ ಒಳಗಾಗುತ್ತೇನೆಂದು, ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿದ್ದರೂ, ಅವನಿಗೆ ವಿರುದ್ಧ ದಂಗೆ ಎದ್ದನು. ಇಸ್ರಯೇಲ್ ದೇವರಾದ ಸರ್ವೇಶ್ವರನಿಗೆ ಅಭಿಮುಖನಾಗಲೊಲ್ಲದೆ, ಹಟಹಿಡಿದು ಮನಸ್ಸನ್ನು ಕಠಿಣಮಾಡಿಕೊಂಡನು.


ನಾವು ಗುಲಾಮರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವಾಲಯವನ್ನು ಪುನಃ ಕಟ್ಟಿ ಭದ್ರಪಡಿಸುವುದಕ್ಕಾಗಿ, ನಮಗೆ ನವಜೀವನ ಪ್ರಾಪ್ತವಾಗುವಂತೆ ಹಾಗು ಜುದೇಯದಲ್ಲೂ ಜೆರುಸಲೇಮಿನಲ್ಲೂ ನಮಗೆ ಅಭಯಾಶ್ರಯ ಸಿಕ್ಕುವಂತೆ, ಪರ್ಷಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದೀರಿ.


ಪಾಲಿಸಲಿಲ್ಲ ಅವರು ದೇವರ ನಿಬಂಧನೆಯನು I ಅನುಸರಿಸಲಿಲ್ಲ ಆತನ ಧರ್ಮಶಾಸ್ತ್ರವನು II


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ. ನನ್ನ ಆಜ್ಞೆಗೆ ಮಣಿಯಲಿಲ್ಲ. ತಮ್ಮ ಪೂರ್ವಜರಿಗಿಂತಲೂ ಕೆಟ್ಟವರಾಗಿ ನಡೆದುಕೊಂಡರು.”


ನನ್ನ ಜನರಾದರೋ ನನ್ನನ್ನು ಮರೆತು ವ್ಯರ್ಥವಿಗ್ರಹಗಳಿಗೆ ಧೂಪಾರತಿ ಎತ್ತಿದ್ದುಂಟು. ಸನಾತನ ಸನ್ಮಾರ್ಗಗಳಲ್ಲಿ ಮುಗ್ಗರಿಸಿ ಸರಿಯಲ್ಲದ ಸೀಳುದಾರಿಯಲ್ಲಿ ಅಲೆದದ್ದುಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು