Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:25 - ಕನ್ನಡ ಸತ್ಯವೇದವು C.L. Bible (BSI)

25 ವಶಮಾಡಿಕೊಂಡರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನು ಸಾರವತ್ತಾದ ಹೊಲಗಳನು, ಧಾನ್ಯ ತುಂಬಿದ ಮನೆಗಳನು, ತೋಡಿದ ಬಾವಿಗಳನು ದ್ರಾಕ್ಷೀತೋಟಗಳನು, ಎಣ್ಣೇಮರ ತೋಪುಗಳನು, ನಾನಾಫಲವೃಕ್ಷಗಳನು. ತಿಂದು ತೃಪ್ತರಾದರು, ಕೊಬ್ಬಿದರು, ನೀವಿತ್ತ ಸಮೃದ್ಧಿಯಲಿ ನಲಿದಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅವರು ಕೋಟೆ ಕೊತ್ತಲುಗಳುಳ್ಳ ಪಟ್ಟಣಗಳನ್ನೂ ಸಾರವುಳ್ಳ ಭೂವಿುಯನ್ನೂ ಸಮಸ್ತ ವಿಧವಾದ ಉತ್ತಮವಸ್ತುಗಳಿಂದ ತುಂಬಿದ ಮನೆಗಳನ್ನೂ ತೋಡಿದ ಬಾವಿಗಳನ್ನೂ ದ್ರಾಕ್ಷೇತೋಟ, ಎಣ್ಣೇಮರಗಳ ತೋಪು, ಎಷ್ಟೋ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು ತೃಪ್ತರಾಗಿ ಕೊಬ್ಬಿ ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಬಲಾಢ್ಯ ನಗರಗಳನ್ನು ಸ್ವಾಧೀನಪಡಿಸಿಕೊಂಡರು. ಉತ್ತಮವಾದ ಭೂಮಿಯನ್ನು ವಶಪಡಿಸಿಕೊಂಡರು. ಒಳ್ಳೆಯ ವಸ್ತುಗಳಿಂದ ತುಂಬಿದ್ದ ಮನೆಗಳನ್ನು ಅವರು ವಶಪಡಿಸಿಕೊಂಡರು. ಅಗೆದು ತಯಾರಾಗಿದ್ದ ಬಾವಿಗಳನ್ನು ಅವರಿಗೆ ನೀನು ಕೊಟ್ಟೆ, ದ್ರಾಕ್ಷಿತೋಟವನ್ನು, ಎಣ್ಣೆಮರಗಳ ತೋಪನ್ನು, ಬೇಕಾದಷ್ಟು ಹಣ್ಣಿನ ಮರಗಳನ್ನು ನೀನು ಅವರಿಗೆ ಕೊಟ್ಟೆ. ಅವರ ಹೊಟ್ಟೆ ತುಂಬಿ ಕೊಬ್ಬೇರುವಷ್ಟು ಅವರಿಗೆ ಕೊಟ್ಟೆ. ನೀನು ಕೊಟ್ಟ ಉತ್ತಮವಾದ ವಸ್ತುಗಳಲ್ಲಿ ಅವರು ಆನಂದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಅವರು ಕೋಟೆ ಪಟ್ಟಣಗಳನ್ನೂ, ರಸವತ್ತಾದ ಭೂಮಿಯನ್ನೂ ವಶಪಡಿಸಿಕೊಂಡರು. ಉತ್ತಮವಾದವುಗಳಿಂದ ತುಂಬಿದ ಮನೆಗಳನ್ನೂ, ಅಗಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಓಲಿವ್ ತೋಪುಗಳನ್ನೂ, ಸಮೃದ್ಧಿಯಾದ ಹಣ್ಣಿನ ಮರಗಳನ್ನೂ ಸ್ವಾಧೀನಮಾಡಿಕೊಂಡರು. ಹೀಗೆ ಅವರು ತಿಂದು ತೃಪ್ತಿಪಟ್ಟು, ಪುಷ್ಟಿಯಾಗಿ ನಿಮ್ಮ ಮಹಾ ಉಪಕಾರದಲ್ಲಿ ಆನಂದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:25
25 ತಿಳಿವುಗಳ ಹೋಲಿಕೆ  

“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


ಅವೆಲ್ಲವು ಎತ್ತರವಾದ ಪೌಳಿಗೋಡೆಗಳಿಂದ, ಕದಗಳಿಂದ ಹಾಗು ಅಗುಳಿಗಳಿಂದ ಸುಭದ್ರವಾದ ಪಟ್ಟಣಗಳಾಗಿದ್ದವು. ಅವುಗಳಲ್ಲದೆ ಅನೇಕ ಹಳ್ಳಿಪಳ್ಳಿಗಳು ಇದ್ದವು.


ತದನಂತರ ಇಸ್ರಯೇಲಿನವರು ತಮ್ಮ ದೇವರಾದ ಸರ್ವೇಶ್ವರನನ್ನು ಮತ್ತು ಅರಸ ದಾವೀದನನ್ನು ಆಶ್ರಯಿಸುವರು. ಅಂತಿಮ ದಿನಗಳಲ್ಲಿ ಅವರು ಭಯಭಕ್ತಿಯುಳ್ಳವರಾಗಿ ಸರ್ವೇಶ್ವರಸ್ವಾಮಿಯನ್ನೂ ಅವರ ಕೃಪಾಶ್ರಯವನ್ನೂ ಮರೆಹೋಗುವರು.


ನಾನು ಅವರಿಗೆ ‘ನಾಡುಗಳಲ್ಲೆಲ್ಲ ಶ್ರೀಮಂತವಾದ ನಾಡನ್ನು ನಿಮಗಾಗಿ ನೋಡಿದ್ದೇನೆ; ನಾನು ನಿಮ್ಮನ್ನು ಈಜಿಪ್ಟ್ ದೇಶದಿಂದ ಉದ್ಧರಿಸಿ ಹಾಲೂ ಜೇನೂ ಹರಿಯುವ ಆ ನಾಡಿಗೆ ಸೇರಿಸುವೆನು’ ಎಂದು ಪ್ರಮಾಣಮಾಡಿದೆ;


ಎಂಟನೆಯ ದಿವಸ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಯಿತು. ಅವರು ಅರಸನನ್ನು ವಂದಿಸಿ, ಸರ್ವೇಶ್ವರ ತಮ್ಮ ದಾಸ ದಾವೀದನಿಗೂ ತಮ್ಮ ಪ್ರಜೆಗಳಾದ ಇಸ್ರಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ಸ್ಮರಿಸಿ, ಆನಂದಚಿತ್ತರಾಗಿ ಹರ್ಷಿಸುತ್ತಾ, ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.


ಹತ್ತಿಸಿದವರನು ಎತ್ತರದ ಪ್ರದೇಶಗಳಿಗೆ ಇತ್ತನವರಿಗೆ ಅಲ್ಲಿಯೆ ಬೆಳೆದ ಪೈರುಫಸಲನೆ. ಗಿಟ್ಟಿತವರಿಗೆ ಗುಡ್ಡದ ಜೇನು, ಗಿರಿಯ ಎಣ್ಣೆಯು.


ಅಥವಾ ದೇವರ ಅಪಾರ ದಯೆಯನ್ನೂ ಶಾಂತಿಸಹನೆಯನ್ನೂ ಉಪೇಕ್ಷಿಸುತ್ತೀಯೋ? ನೀನು ದೇವರಿಗೆ ಅಭಿಮುಖನಾಗಬೇಕೆಂಬ ಉದ್ದೇಶದಿಂದಲೇ ಅವರು ನಿನ್ನ ಮೇಲೆ ಅಷ್ಟು ದಯೆದಾಕ್ಷಿಣ್ಯದಿಂದ ಇದ್ದಾರೆ ಎಂಬುದು ನಿನಗೆ ತಿಳಿಯದೋ?


ಅನ್ನ ಆಹಾರ ಯಥೇಚ್ಛವಾಗಿ ಸಿಕ್ಕಿದಾಗ ನಿನ್ನವರು ತಿಂದು ತೃಪ್ತರಾದರು; ಅಹಾಂಭಾವ ಅವರ ನೆತ್ತಿಗೇರಿತು. ಆಗ ಅವರು ನನ್ನನ್ನು ಮರೆತುಬಿಟ್ಟರು.


ಯಾಜಕರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸುವೆನು ನನ್ನ ಜನ ಸವಿಯುವರು ಯಥೇಚ್ಛವಾಗಿ ನನ್ನ ವರದಾನಗಳನ್ನು. ಇದು ಸರ್ವೇಶ್ವರನಾದ ನನ್ನ ನುಡಿ.”


ಅದೂ ಅಲ್ಲದೆ, ಆ ಜನರು: “ಕಣ್ಣಿನಿಂದ ಕಂಡು, ಕಿವಿಯಿಂದ ಕೇಳಿ, ಹೃದಯದಿಂದ ಗ್ರಹಿಸಿ, ನನಗೆ ಅಭಿಮುಖರಾಗಿ ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಅವರ ಹೃದಯವನ್ನು ಕೊಬ್ಬಿಸು, ಕಿವಿಗಳನ್ನು ಮಂದವಾಗಿಸು, ಕಣ್ಣುಗಳನ್ನು ಮಬ್ಬಾಗಿಸು,” ಎಂದು ನನಗೆ ಹೇಳಿದರು.


ಋತು ಶಿಶಿರಕೆ ಸುಗ್ಗಿಯ ಸೊಬಗಿನ ಮುಕುಟವ ಮುಡಿಸಿದ್ದೀ I ನೀ ನಡೆವ ಹಾದಿಯಲ್ಲೆಲ್ಲಾ ತುಳುಕುತಿದೆ ಸಮೃದ್ಧಿ II


ಎಲ್ಲವೂ ಇದ್ದರೆ “ಸರ್ವೇಶ್ವರನು ಯಾರು?” ಎಂದು ನಿನ್ನನ್ನೆ ನಾನು ತಿರಸ್ಕರಿಸೇನು. ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರಿಗೆ ಅಪಕೀರ್ತಿ ತಂದೇನು.


ಸ್ಮರಿಸುವೆನು ಸರ್ವೇಶ್ವರನ ಸ್ತುತ್ಯಕಾರ್ಯಗಳನು ಆತನ ಅಚಲಪ್ರೀತಿಯನು, ಕೃಪಾತಿಶಯಗಳನು. ಹೊಗಳುವೆನು ಆತನೆಮಗೆ ಅನುಗ್ರಹಿಸಿದ ಎಲ್ಲ ವರದಾನಗಳಿಗಾಗಿ ಇಸ್ರಯೇಲ್ ವಂಶಜರಿಗೆ ಮಾಡಿದ ಮಹೋಪಕಾರಗಳಿಗಾಗಿ.


ನೆಮ್ಮದಿಯ ಕಾಲದಲ್ಲಿ ಸಂಸ್ಥಾನದ ಫಲವತ್ತಾದ ಪ್ರದೇಶಗಳ ಮೇಲೆ ದಾಳಿಮಾಡುವನು. ತಂದೆತಾತಂದಿರು ಮಾಡದಂಥ ಕಾರ್ಯಗಳನ್ನು ಮಾಡುವನು. ಸೂರೆ-ಸುಲಿಗೆ-ಕೊಳ್ಳೆಹೊಡೆದವುಗಳನ್ನು ತನ್ನವರಿಗೆ ಚೆಲ್ಲಿಬಿಡುವನು. ಕೋಟೆಗಳನ್ನು ಹಿಡಿಯುವ ಕುತಂತ್ರಗಳನ್ನು ಕೊನೆಯವರೆಗೂ ಮುಂದುವರೆಸುವನು.


ಆಹಾರಕ್ಕಿತ್ತು, ಆಕಳಿನ ಮೊಸರೋಗರ ಆಡುಕುರಿಗಳ ಕ್ಷೀರ ಬಾಷಾನಿನ ಪುಷ್ಟಪಶು, ಹೋತ, ಕೊಬ್ಬಿದ ಕುರಿಟಗರಿನ ಮಾಂಸ, ಉತ್ತಮವಾದ ಗೋಧೂಮ; ಪಾನಕ್ಕಿತ್ತು ರಕ್ತಗೆಂಪಾದ ದ್ರಾಕ್ಷಾರಸ.


ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದೆ; ನನ್ನನ್ನು ತಿರಸ್ಕರಿಸಿ ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದೆ.


ಕೊಟ್ಟನವರಿಗೆ ಅನ್ಯರಾಷ್ಟ್ರಗಳ ನಾಡುಬೀಡನು I ಅವರ ಕೈವಶಮಾಡಿದನು ಅನ್ಯರ ಕಷ್ಟಾರ್ಜಿತವನು II


ನಾನು ನಿಮ್ಮನ್ನು ಫಲವತ್ತಾದ ನಾಡಿಗೆ ಕರೆತಂದೆ. ಅದರ ಫಲವನ್ನೂ ಸಾರವನ್ನೂ ಅನುಭವಿಸುವ ಹಾಗೆ ಮಾಡಿದೆ. ಆದರೆ ನೀವು ಒಳನುಗ್ಗಿ ಬಂದು ಆ ನನ್ನ ನಾಡನ್ನು ಹೊಲೆಮಾಡಿದಿರಿ; ಆ ನನ್ನ ಸೊತ್ತನ್ನು ಅಸಹ್ಯಪಡಿಸಿದಿರಿ.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು