ನೆಹೆಮೀಯ 9:26 - ಕನ್ನಡ ಸತ್ಯವೇದವು C.L. Bible (BSI)26 ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವುದಕ್ಕೂ ನಿನ್ನ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದು ಹಾಕಿ ನಿನ್ನನ್ನು ಅಸಡ್ಡೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವರು ನಿನಗೆ ಎದುರುಬಿದ್ದು ನಿನ್ನ ಬೋಧನೆಯನ್ನು ತಾತ್ಸಾರ ಮಾಡಿದರು; ನಿನ್ನ ಪ್ರವಾದಿಗಳನ್ನು ಕೊಂದರು. ಆ ಪ್ರವಾದಿಗಳಾದರೋ ಜನರನ್ನು ಎಚ್ಚರಿಸಿದರು; ನಿನ್ನ ಬಳಿಗೆ ಹಿಂತಿರುಗುವಂತೆ ಜನರನ್ನು ಪ್ರೋತ್ಸಾಹಿಸಿದರು. ಆದರೆ ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಭಯಂಕರವಾದ ಕೃತ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಆದರೂ ಅವರು ನಿಮಗೆ ಅವಿಧೇಯರಾಗಿ ತಿರುಗಿಬಿದ್ದು, ನಿಮ್ಮ ನಿಯಮವನ್ನು ಉಲ್ಲಂಘಿಸಿ, ತಮ್ಮನ್ನು ಎಚ್ಚರಿಸುವುದಕ್ಕೂ, ನಿಮ್ಮ ಕಡೆಗೆ ತಿರುಗಿಸುವುದಕ್ಕೂ ಪ್ರಯತ್ನಿಸುತ್ತಿದ್ದ ನಿಮ್ಮ ಪ್ರವಾದಿಗಳನ್ನೇ ಕೊಂದುಹಾಕಿದರು. ಹೀಗೆ ನಿಮ್ಮನ್ನೇ ಬಹು ದೂಷಿಸಿ ಅಸಡ್ಡೆಮಾಡಿಬಿಟ್ಟರು. ಅಧ್ಯಾಯವನ್ನು ನೋಡಿ |