Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:32 - ಕನ್ನಡ ಸತ್ಯವೇದವು C.L. Bible (BSI)

32 ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಮ್ಮ ದೇವರೇ, ಮಹೋನ್ನತನೂ, ಪರಾಕ್ರಮಿಯೂ, ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೂ ನಮ್ಮ ಅರಸರಿಗೂ, ಪ್ರಭುಗಳಿಗೂ, ಯಾಜಕರಿಗೂ, ಪ್ರವಾದಿಗಳಿಗೂ, ಪೂರ್ವಿಕರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದು ಎಣಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಮ್ಮ ದೇವರೇ, ಮಹೋನ್ನತನೂ ಪರಾಕ್ರವಿುಯೂ ಭಯಂಕರನೂ ಆಗಿರುವಾತನೇ, ಕೃಪಾವಾಗ್ದಾನಗಳನ್ನು ನೆರವೇರಿಸುವ ದೇವರೇ, ಅಶ್ಶೂರದ ರಾಜರ ಕಾಲದಿಂದ ಇಂದಿನವರೆಗೆ ನಮ್ಮ ಅರಸರಿಗೂ ಪ್ರಭುಗಳಿಗೂ ಯಾಜಕರಿಗೂ ಪ್ರವಾದಿಗಳಿಗೂ ಹಿರಿಯರಿಗೂ ನಿನ್ನ ಎಲ್ಲಾ ಪ್ರಜೆಗಳಿಗೂ ಪ್ರಾಪ್ತವಾದ ಕಷ್ಟವು ಅಲ್ಪವು ಎಂದೆಣಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನಮ್ಮ ದೇವರೇ, ನೀನು ಮಹಾ ದೇವರು, ಭಯಂಕರನೂ ಬಲಿಷ್ಠ ಸೈನಿಕನೂ ಆಗಿರುವ ದೇವರು! ನೀನು ದಯಾಪರನೂ ನಂಬಿಗಸ್ತನೂ ಆಗಿರುವಿ. ನಿನ್ನ ಒಡಂಬಡಿಕೆಯನ್ನು ನೆರವೇರಿಸುವ ದೇವರು. ನಾವು ತುಂಬಾ ಸಂಕಟಗಳನ್ನು ಅನುಭವಿಸಿದೆವು. ನಮ್ಮ ಸಂಕಟಗಳು ನಿನಗೆ ವಿಶೇಷವಾದವುಗಳಾಗಿವೆ. ನಮ್ಮ ಜನರಿಗೆಲ್ಲಾ ತೊಂದರೆಗಳುಂಟಾದವು. ನಮ್ಮ ನಾಯಕರಿಗೂ ರಾಜನಿಗೂ ನಮ್ಮ ಯಾಜಕರಿಗೂ ಪ್ರವಾದಿಗಳಿಗೂ ಅಶ್ಶೂರ್ಯದ ರಾಜನ ಸಮಯದಿಂದ ಈ ದಿವಸದ ತನಕ ಭಯಂಕರ ಕಷ್ಟಗಳು ಬಂದೊದಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:32
42 ತಿಳಿವುಗಳ ಹೋಲಿಕೆ  

ನನ್ನ ಪ್ರಾರ್ಥನೆಯಲ್ಲಿ, “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆಗಿರುವ ಪರಲೋಕದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ಕೃಪಾವಾಗ್ದಾನಗಳನ್ನು ನೆರವೇರಿಸುವವರೇ,


ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರೇ ದೇವರೆಂದು ತಿಳಿದುಕೊಳ್ಳಬೇಕು. ಅವರೇ ನಂಬಿಕಸ್ತರಾದ ದೇವರು; ತಮ್ಮನ್ನು ಪ್ರೀತಿಸಿ ತಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ತಾವು ಮಾಡಿದ ವಾಗ್ದಾನವನ್ನು ನೆರವೇರಿಸಿ, ತಮ್ಮ ಅಚಲಪ್ರೀತಿಯನ್ನು ಅವರ ಸಂತತಿಯವರಲ್ಲಿ ಸಾವಿರ ತಲೆಗಳವರೆಗೂ ತೋರಿಸುವರು.


ಸ್ವಾಮೀ, ನಿಮಗೆ ವಿರುದ್ಧ ಪಾಪಮಾಡಿದ್ದರಿಂದ ನಾವೂ ನಮ್ಮ ಅರಸರೂ ಒಡೆಯರೂ ಹಿರಿಯರೂ ನಾಚಿಕೆಗೆ ಗುರಿಯಾಗಿದ್ದೇವೆ.


ಪಾಪವನ್ನು ಅರಿಕೆಮಾಡಿ ನನ್ನ ದೇವರಾದ ಸರ್ವೇಶ್ವರನಿಗೆ ಹೀಗೆಂದು ಬಿನ್ನವಿಸಿದೆ: “ಹೇ ಸರ್ವೇಶ್ವರಾ, ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ದೇವರೇ, ನಿಮ್ಮನ್ನು ಪ್ರೀತಿಸಿ, ನಿಮ್ಮ ಆಜ್ಞೆಗಳನ್ನು ಅನುಸರಿಸುವವರಿಗೆ ನೀವು ಮಾಡಿದ ವಾಗ್ದಾನಗಳನ್ನು ಪ್ರೀತಿಯಿಂದ ನೆರವೇರಿಸುತ್ತೀರಿ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


“ನಿನ್ನ ಕಾರ್ಯಗಳೆನಿತೋ ಚೇತೋಹಾರಿ I ನಿನ್ನ ಪರಾಕ್ರಮಕೆ ಶತ್ರುಗಳು ಪರಾರಿ II


ಪರಾತ್ಪರನಾದ ಪ್ರಭುವು ಘನಗಂಭೀರನು I ಪ್ರಪಂಚಕ್ಕೆಲ್ಲ ರಾಜಾಧಿರಾಜನು II


ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


ಇವನ ಇಬ್ಬರು ಮಕ್ಕಳನ್ನು ಅವನ ಕಣ್ಣೆದುರಿಗೇ ವಧಿಸಿ, ಅವನಿಗೆ ಬೇಡಿಹಾಕಿ ಎರಡು ಕಣ್ಣುಗಳನ್ನೂ ಕಿತ್ತು ಬಾಬಿಲೋನಿಗೆ ತೆಗೆದುಕೊಂಡು ಹೋದರು.


ಅವನ ಕಾಲದಲ್ಲಿ ಈಜಿಪ್ಟಿನ ಅರಸ ಫರೋಹ ನೆಕೋ ಎಂಬವನು ಅಸ್ಸೀರಿಯದ ಅರಸನಿಗೆ ವಿರುದ್ಧ ಯುದ್ಧಮಾಡುವುದಕ್ಕಾಗಿ ಯೂಫ್ರಟಿಸ್ ನದಿಯ ಬಳಿಗೆ ಹೋದನು. ಅವನು ಅಲ್ಲಿಗೆ ಹೋಗುತ್ತಿರುವಾಗ ಯೋಷೀಯನು ಮೆಗಿದ್ದೋವಿನಲ್ಲಿ ಅವನನ್ನು ಎದುರುಗೊಂಡು, ಕೂಡಲೆ ಅವನಿಂದ ಹತನಾದನು.


ಅಸ್ಸೀರಿಯದ ಅರಸ ಶಲ್ಮನೆಸರನು ಇವನಿಗೆ ವಿರುದ್ಧ ದಂಡೆತ್ತಿ ಬಂದಾಗ ಇವನು ಇವನಿಗೆ ಅಧೀನನಾಗಿ ಕಪ್ಪಕೊಡುವವನಾದನು.


ಇಸ್ರಯೇಲರ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯಾ ದೇಶದ ಅರಸನಾದ ತಿಗ್ಲತ್ಪಿಲೆಸೆರನೆಂಬವನು ಬಂದು ಇಯ್ಯೋನ್, ಅಬೇಲ್ಬೇತ್ಮಾಕಾ, ಯಾನೋಹ, ಕೆದೆಷ್, ಹಾಚೋರ್ ಮೊದಲಾದ ನಫ್ತಾಲಿಯ ಊರುಗಳನ್ನೂ ಮತ್ತು ಗಿಲ್ಯಾದ್ ಹಾಗು ಗಲಿಲೇಯ ಪ್ರಾಂತ್ಯಗಳನ್ನೂ ಸ್ವಾಧೀನಪಡಿಸಿಕೊಂಡು, ಅವುಗಳ ನಿವಾಸಿಗಳನ್ನು ಅಸ್ಸೀರಿಯಾ ದೇಶಕ್ಕೆ ಸೆರೆಯಾಗಿ ತೆಗೆದುಕೊಂಡು ಹೋದನು.


ಅಸ್ಸೀರಿಯಾ ದೇಶದ ಅರಸನಾದ ಪೂಲನೆಂಬವನು ಇಸ್ರಯೇಲ್ ದೇಶಕ್ಕೆ ವಿರುದ್ಧ ದಾಳಿಯಿಟ್ಟಾಗ, ಮೆನಹೇಮನು ಅವನ ಮುಖಾಂತರ ತನ್ನ ಅರಸುತನವನ್ನು ದೃಢಪಡಿಸಿಕೊಳ್ಳುವುದಕ್ಕಾಗಿ, ಅವನಿಗೆ ಮೂವತ್ತನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟನು.


“ಇಸ್ರಯೇಲ್ ದೇವರಾದ ಸರ್ವೇಶ್ವರಾ, ಭೂಲೋಕದಲ್ಲೂ ಪರಲೋಕದಲ್ಲೂ ನಿಮಗೆ ಸಮಾನರಾದ ದೇವರಿಲ್ಲ; ಪೂರ್ಣಮನಸ್ಸಿನಿಂದ ನಿಮಗೆ ಪ್ರಾಮಾಣಿಕರಾಗಿ ನಡೆದುಕೊಳ್ಳುವಂಥ ಭಕ್ತರ ಬಗ್ಗೆ ನಿಮ್ಮ ಒಡಂಬಡಿಕೆಯನ್ನೂ ಕೃಪೆಯನ್ನೂ ನೆರವೇರಿಸುವವರು ನೀವು.


ನೀವು ಆ ಜನರಿಗೆ ಹೆದರಿಕೊಳ್ಳಬೇಡಿ.


ನಾನು ನಿಮಗೆ ವಿರುದ್ಧ ಕೋಪದಿಂದ ವರ್ತಿಸುವೆನು. ನಿಮ್ಮ ಪಾಪಗಳ ಕಾರಣ ಏಳ್ಮಡಿಯಾಗಿ ಶಿಕ್ಷಿಸುವೆನು.


ನಾನೇ ನಿಮಗೆ ವಿರೋಧವಾಗಿ ನಡೆಯುವೆನು. ನಿಮ್ಮ ಪಾಪಗಳ ಕಾರಣ ನಾನೇ ನಿಮ್ಮನ್ನು ಏಳರಷ್ಟು ದಂಡಿಸುವೆನು.


“ನೀವು ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ ನಿಮ್ಮ ಪಾಪದ ನಿಮಿತ್ತ ಇನ್ನೂ ಏಳುಪಟ್ಟು ಹೆಚ್ಚಾಗಿ ಬಾಧಿಸುವೆನು.


“ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.


ಸರ್ವೇಶ್ವರ ಸ್ವಾಮಿ ಇಸ್ರಯೇಲರ ಪರವಾಗಿ ಫರೋಹನಿಗೂ ಈಜಿಪ್ಟಿನವರಿಗೂ ಮಾಡಿದ್ದೆಲ್ಲವನ್ನೂ ಮತ್ತು ದಾರಿಯಲ್ಲಿ ತಮಗುಂಟಾದ ಎಲ್ಲ ಕಷ್ಟದುಃಖಗಳನ್ನು ಹಾಗು ಸರ್ವೇಶ್ವರ ಹೇಗೆ ಅವುಗಳಿಂದ ಕಾಪಾಡಿದರೆಂಬುದನ್ನು ಮೋಶೆ ತನ್ನ ಮಾವನಿಗೆ ವಿವರಿಸಿದನು.


ಅವರು ಜೆರುಬ್ಬಾಬೆಲನ ಬಳಿಗೂ ಗೋತ್ರಪ್ರಧಾನರ ಬಳಿಗೂ ಬಂದು, “ನಿಮ್ಮೊಡನೆ ಕಟ್ಟುವುದಕ್ಕೆ ನಮಗೂ ಅಪ್ಪಣೆಯಾಗಲಿ; ಏಕೆಂದರೆ ನಿಮ್ಮಂತೆ ನಾವೂ ನಿಮ್ಮ ದೇವರ ಭಕ್ತರು; ನಮ್ಮನ್ನು ಇಲ್ಲಿ ತಂದಿರಿಸಿದ ಅಸ್ಸೀರಿಯದ ಅರಸ ಏಸರ್ಹದ್ದೋನನ ಕಾಲದಿಂದ ನಾವು ಆ ದೇವರಿಗೇ ಬಲಿಯರ್ಪಣೆ ಮಾಡುತ್ತಾ ಬಂದಿದ್ದೇವೆ,” ಎಂದು ಹೇಳಿದರು.


ದೆಹಾಯರು, ಏಲಾಮ್ಯರು ಹಾಗು ಮಹಾ ಶ್ರೀಮತ್ ಆಸೆನಪ್ಪರನು ಕರೆದುತಂದು ಸಮಾರಿಯ ಪಟ್ಟಣದಲ್ಲಿ ಮತ್ತು ನದಿಯ ಈಚೆಗಿರುವ ಬೇರೆ ಊರುಗಳಲ್ಲಿ ಇರಿಸಿದ ಇತರ ಜನರು, ಬರೆಯುವುದು ಏನೆಂದರೆ:


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


“ಈ ವಿಧಿಗಳನ್ನು ನೀವು ಲಕ್ಷ್ಯವಿಟ್ಟು ಅನುಸರಿಸಿದರೆ, ಅದಕ್ಕೆ ಪ್ರತಿಯಾಗಿ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಿಗೆ ಪ್ರಮಾಣ ಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸುವರು, ನಿಮಗೆ ಕೃಪೆತೋರುವರು,


ನಿಮ್ಮನ್ನು ಅಚಲವಾಗಿ ಪ್ರೀತಿಸಿ, ಅಭಿವೃದ್ಧಿಗೊಳಿಸುವರು; ನಿಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಿಮ್ಮ ಸಂತಾನವನ್ನು, ವ್ಯವಸಾಯವನ್ನು, ದವಸಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಹಾಗು ದನಕುರಿಗಳ ಮಂದೆಯನ್ನು ವೃದ್ಧಿಗೊಳಿಸುವರು.


ಅದು ಹೋಶೇಯನ ಆಳ್ವಿಕೆಯ ಒಂಬತ್ತನೆಯ ವರ್ಷದಲ್ಲಿ ಅವನ ಸ್ವಾಧೀನವಾಯಿತು. ಅವನು ಎಲ್ಲಾ ಇಸ್ರಯೇಲರನ್ನು ಅಸ್ಸೀರಿಯ ದೇಶಕ್ಕೆ ಒಯ್ದು ಹಲಹು ಎಂಬ ಪ್ರಾಂತ್ಯದಲ್ಲಿ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತ್ಯದಲ್ಲಿ ಹಾಗು ಮೇದ್ಯರ ಪಟ್ಟಣಗಳಲ್ಲಿ ಇರಿಸಿದನು.


ಸರ್ವೇಶ್ವರ, ತಮ್ಮ ದಾಸರಾದ ಎಲ್ಲಾ ಪ್ರವಾದಿಗಳ ಮುಖಾಂತರ ಭವಿಷ್ಯ ನುಡಿದಂತೆ, ಅವರನ್ನು ತಮ್ಮ ಸನ್ನಿಧಿಯಿಂದ ತಳ್ಳಿಬಿಟ್ಟರು. ಅವರು ಸೆರೆಯವರಾಗಿ ತಮ್ಮ ನಾಡಿನಿಂದ ಅಸ್ಸೀರಿಯಾ ದೇಶಕ್ಕೆ ಒಯ್ಯಲ್ಪಟ್ಟು ಇಂದಿನವರೆಗೂ ಅಲ್ಲೇ ಇರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು