Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:34 - ಕನ್ನಡ ಸತ್ಯವೇದವು C.L. Bible (BSI)

34 ನಮ್ಮ ಅರಸರು, ರಾಜ್ಯಪಾಲರು, ಯಾಜಕರು, ಹಿರಿಯರು ಅನುಸರಿಸಲಿಲ್ಲ, ನಿಮ್ಮಾಜ್ಞೆಯನು, ಧರ್ಮೋಪದೇಶವನು. ಲಕ್ಷಿಸಲಿಲ್ಲ ನೀವಿತ್ತ ಎಚ್ಚರಿಕೆಯ ಮಾತುಗಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ನಮ್ಮ ಅರಸರೂ, ಪ್ರಭುಗಳೂ, ಯಾಜಕರೂ, ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ. ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಗಮನಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ನಮ್ಮ ಅರಸರೂ ಪ್ರಭುಗಳೂ ಯಾಜಕರೂ ಹಿರಿಯರೂ ನಿನ್ನ ಧರ್ಮೋಪದೇಶವನ್ನು ಅನುಸರಿಸಲಿಲ್ಲ, ನಿನ್ನ ಆಜ್ಞೆಗಳಿಗೆ ಕಿವಿಗೊಡಲಿಲ್ಲ; ನೀನು ಎಚ್ಚರಿಸಿ ಹೇಳಿದ ಮಾತುಗಳನ್ನು ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ನಮ್ಮ ರಾಜರುಗಳು, ನಾಯಕರು, ಯಾಜಕರು ಮತ್ತು ನಮ್ಮ ಪೂರ್ವಿಕರು ನಿನ್ನ ಆಜ್ಞೆಯನ್ನು ಅನುಸರಿಸಲಿಲ್ಲ. ನಿನ್ನ ಎಚ್ಚರಿಕೆಯನ್ನು ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಮ್ಮ ಅರಸರೂ, ನಮ್ಮ ಪ್ರಧಾನರೂ, ನಮ್ಮ ಯಾಜಕರೂ, ನಮ್ಮ ಪಿತೃಗಳೂ ನಿಮ್ಮ ನಿಯಮವನ್ನು ಕೈಗೊಳ್ಳದೆ, ನಿಮ್ಮ ಆಜ್ಞೆಗಳನ್ನೂ, ನೀವು ಅವರಿಗೆ ಎಚ್ಚರಿಸಿದ ನಿಮ್ಮ ಎಚ್ಚರಿಕೆಗಳನ್ನೂ ಕೇಳದೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:34
13 ತಿಳಿವುಗಳ ಹೋಲಿಕೆ  

ಏಕೆಂದರೆ ಅವರು ನನ್ನ ಮಾತುಗಳನ್ನು ಕೇಳದೆಹೋದರು. ನನ್ನ ದಾಸರಾದ ಪ್ರವಾದಿಗಳನ್ನು ಪದೇಪದೇ ಅವರ ಬಳಿಗೆ ಕಳಿಸಿದರೂ ಕೇಳಲೊಲ್ಲದೆ ಹೋದರು. ಇದು ಸರ್ವೇಶ್ವರನಾದ ನನ್ನ ನುಡಿ.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ಸರ್ವೇಶ್ವರ ತಮ್ಮ ಪೂರ್ವಜರಿಗೆ ಕೊಟ್ಟ ವಿಧಿನಿಬಂಧನೆಗಳನ್ನೂ ತಮಗೆ ಹೇಳಿಸಿದ ಬುದ್ಧಿವಾಕ್ಯಗಳನ್ನೂ ತಿರಸ್ಕರಿಸಿ, ಮಿಥ್ಯಾದೇವತೆಗಳನ್ನು ಪೂಜಿಸಿ ನಿಸ್ಸಾರ್ಥಕರಾದರು. ಸುತ್ತಣ ಜನಾಂಗಗಳನ್ನು ಅನುಸರಿಸಬಾರದೆಂದು ಸರ್ವೇಶ್ವರ ಆಜ್ಞಾಪಿಸಿದ್ದರೂ ಕೇಳದೆ ಆ ಜನಾಂಗಗಳನ್ನೇ ಅನುಸರಿಸಿದರು.


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಅವರಿದ್ದರು ನೀವೇ ಅನುಗ್ರಹಿಸಿದ ಸ್ವರಾಜ್ಯದಲಿ ನಲಿದಾಡಿದರು ನೀವು ಕರುಣಿಸದ ಸಮೃದ್ಧಿಯಲಿ ವಾಸಿಸಿದರು ಸಾರವತ್ತಾದ ಸವಿಸ್ತಾರ ನಾಡಿನಲಿ. ಆದರೂ ಮಾಡಲಿಲ್ಲ ನಿಮ್ಮ ಸೇವೆ, ಬಿಡಲಿಲ್ಲ ತಮ್ಮ ದುರ್ನಡತೆ ನಮಗೊದಗಿರುವ ಗುಲಾಮಗಿರಿ, ಇದರ ಪರಿಣಾಮವಲ್ಲವೆ?


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ನಿಮ್ಮ ಪೂರ್ವಜರು ನಮ್ಮ ದೇವರಾದ ಸರ್ವೇಶ್ವರನಿಗೆ ದ್ರೋಹಮಾಡಿ ಅವರ ಚಿತ್ತಕ್ಕೆ ವಿರುದ್ಧ ನಡೆದು ಅವರನ್ನು ತೊರೆದುಬಿಟ್ಟರು; ಅವರ ನಿವಾಸ ಸ್ಥಳಕ್ಕೆ ಬೆನ್ನುಕೊಟ್ಟು ವಿಮುಖರಾದರು.


ಇಷ್ಟು ಉಪಕಾರವನ್ನು ಪಡೆದ ನಾವು ಬೇರೆ ಏನನ್ನು ತಾನೆ ಅರಿಕೆಮಾಡಿಕೊಳ್ಳೋಣ! ನಮ್ಮ ದೇವರೇ, ನಿಮ್ಮ ಆಜ್ಞೆಗಳನ್ನು ಉಲ್ಲಂಘಿಸಿದ್ದೇವೆ, ಅಕಟಾ!


ನಾನು ನನ್ನ ದಾಸರಾದ ಪ್ರವಾದಿಗಳನ್ನೆಲ್ಲಾ ಅವರ ಬಳಿಗೆ ತಡಮಾಡದೆ ಕಳುಹಿಸುತ್ತಾಬಂದೆ. ‘ಎಚ್ಚರಿಕೆ, ನಾನು ಹೇಸುವ ಈ ಅಸಹ್ಯಕಾರ್ಯಗಳನ್ನು ಮಾಡಬೇಡಿ’ ಎಂದು ಪ್ರಕಟಿಸುತ್ತಾ ಬಂದೆ.


ಅದು ನನ್ನ ನಿಯಮನಿಷ್ಠೆಗಳಿಗೆ ಒಳಪಡದೆ ಇತರ ಜನಾಂಗಗಳಿಗಿಂತಲೂ ಸುತ್ತಲಿನ ದೇಶಗಳಿಗಿಂತಲೂ ಹೆಚ್ಚು ಅಧರ್ಮವನ್ನು ನಡೆಸಿದೆ; ಅದರ ನಿವಾಸಿಗಳು ನನ್ನ ನಿಯಮವನ್ನು ಅನುಸರಿಸದೆ ನನ್ನ ವಿಧಿಗಳನ್ನು ನಿರಾಕರಿಸಿದ್ದಾರೆ.


ಅರಸರಿಗೆ, ಒಡೆಯರಿಗೆ, ಹಿರಿಯರಿಗೆ ಹಾಗು ಜನಸಾಮಾನ್ಯರಿಗೆ ನಿಮ್ಮ ದಾಸರಾದ ಪ್ರವಾದಿಗಳು ನಿಮ್ಮ ಹೆಸರಿನಲ್ಲಿ ನುಡಿದ ಮಾತುಗಳಿಗೆ ನಾವು ಕಿವಿಗೊಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು