Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:4 - ಕನ್ನಡ ಸತ್ಯವೇದವು C.L. Bible (BSI)

4 ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಟಲುಗಳ ಮೇಲೆ ನಿಂತು, ಸ್ವರವೆತ್ತಿ ತಮ್ಮ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೇಷೂವ, ಬಾನೀ ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬುವವರು ಲೇವಿಯರು ಮೆಟ್ಟಿಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ, ಕೆನಾನೀ ಎಂಬವರು ಲೇವಿಯರ ಮೆಟ್ಲುಗಳ ಮೇಲೆ ನಿಂತು ಮಹಾಶಬ್ದದಿಂದ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಮೇಲೆ ಲೇವಿಯರಾದ ಯೇಷೂವ, ಬಾನೀ, ಕದ್ಮೀಯೇಲ್, ಶೆಬನ್ಯ, ಬುನ್ನೀ, ಶೇರೇಬ್ಯ, ಬಾನೀ ಮತ್ತು ಕೆನಾನೀ ಎಂಬವರು ಮೆಟ್ಟಿಲ ಮೇಲೆ ನಿಂತುಕೊಂಡು ಗಟ್ಟಿಯಾದ ಸ್ವರದಲ್ಲಿ ತಮ್ಮ ದೇವರಾದ ಯೆಹೋವನಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಮೆಟ್ಟಿಲುಗಳ ಮೇಲೆ ಲೇವಿಯರಲ್ಲಿ ಯೇಷೂವ, ಬಾನೀ, ಕದ್ಮಿಯೇಲ್, ಶೆಬನ್ಯ, ಬುನ್ನಿ, ಶೇರೇಬ್ಯ, ಬಾನೀ, ಕೆನಾನಿ ಎಂಬವರು ನಿಂತು ಮಹಾಶಬ್ದದಿಂದ ತಮ್ಮ ದೇವರಾಗಿರುವ ಯೆಹೋವ ದೇವರಿಗೆ ಮೊರೆಯಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:4
13 ತಿಳಿವುಗಳ ಹೋಲಿಕೆ  

ಆಮೇಲೆ ಯೇಷೂವ, ಬಾನೀ, ಶೇರೇಬ್ಯ, ಯಾಮೀನ್, ಅಕ್ಕೂಬ್, ಶಬ್ಬೆತೈ, ಹೋದೀಯ, ಮಾಸೇಯ, ಕೆಲೀಟ, ಅಜರ್ಯ, ಯೋಜಾಬಾದ್, ಹಾನಾನ್, ಪೆಲಾಯ ಎಂಬ ಲೇವಿಯರು ಧರ್ಮಶಾಸ್ತ್ರವನ್ನು ಜನರು ಗ್ರಹಿಸುವಂತೆ ಮಾಡಿದರು.


ಲೇವಿಯರು - ಯೇಷೂವ, ಬೆನ್ನೂಯ್, ಕದ್ಮೀಯೇಲ್, ಶೇರೇಬ್ಯ, ಯೆಹೂದ್ಯ, ಮತ್ತನ್ಯ ಇವರು. ಮತ್ತನ್ಯನೂ ಅವನ ಸಹೋದರರೂ ಕೃತಜ್ಞತಾಭಜನ ನಾಯಕರು.


ಆಮೇಲೆ ಲೇವಿಯರಾದ ಯೇಷೂವ, ಕದ್ಮೀಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು, “ಏಳಿ, ನಮ್ಮ ದೇವರಾದ ಸರ್ವೇಶ್ವರನಿಗೆ ಯುಗಯುಗಕ್ಕೂ ಸ್ತುತಿಸ್ತೋತ್ರ ಎನ್ನಿ,” ಎಂದು ಹೇಳಿ ಹೀಗೆ ಪ್ರಾರ್ಥಿಸಿದರು: “ಸರ್ವೇಶ್ವರಾ, ಸ್ತುತಿಸ್ತೋತ್ರ ನಿಮ್ಮ ಮಹಿಮಾಮಯ ನಾಮಕೆ ಮಿಗಿಲಾದುದು ಆ ಶ್ರೀ ನಾಮ ಸರ್ವಸ್ತುತಿ ಕೀರ್ತನೆಗೆ.


ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ ಕೋರಹಿಯರೂ ಎದ್ದು, ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಮಹಾಸ್ವರದಿಂದ ಕೀರ್ತಿಸಿದರು.


ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು.


ಅನಂತರ ಗಟ್ಟಿಯಾದ ಧ್ವನಿಯಿಂದ, “ಲಾಸರನೇ, ಹೊರಗೆ ಬಾ,” ಎಂದು ಕೂಗಿದರು.


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ಅಂತರಾಳದಿಂದ ಪ್ರಭು, ಮೊರೆಯಿಡುತ್ತಿರುವೆ ನಿನಗೆ I


ಮೊರೆಯಿಡುವೆನು, ಕೂಗಿ ಮೊರೆಯಿಡುವೆನು I ಸ್ವಾಮಿ ದೇವನು ನನಗೆ ಕಿವಿಗೊಡುವನು II


ಸ್ವರವೆತ್ತಿ ಎನ್ನ ಪ್ರಭುವಿಗೆ ನಾ ಮೊರೆಯಿಡುವೆನು I ಸಿರಿಶಿಖರದಿಂದಾತನು ಸದುತ್ತರ ನೀಡುವನು II


ಇವನ ಆಚೆ ದುರಸ್ತಿಕಾರ್ಯವನ್ನು ಕೈಗೊಂಡವರು ಲೇವಿಯರು. ಅವರಲ್ಲಿ ಮೊದಲು ಬಾನಿಯ ಮಗನಾದ ರೆಹೂಮ್, ಇವನ ಸಮೀಪದಲ್ಲಿ ತನ್ನ ನಾಡಿನವರೊಡನೆ ಕಟ್ಟುತ್ತಿದ್ದ ಕೆಯೀಲದ ಅರೆನಾಡೊಡೆಯನಾದ ಹಷಬ್ಯ ಇವರು.


ಧರ್ಮೋಪದೇಶಕ ಎಜ್ರನು ಪಾರಾಯಣಕ್ಕಾಗಿ ಮಾಡಲಾಗಿದ್ದ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರು ಇದ್ದರು. ಎಡಗಡೆಯಲ್ಲಿ ಪೆದಾಯ, ಮೀಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರು ನಿಂತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು