Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 9:8 - ಕನ್ನಡ ಸತ್ಯವೇದವು C.L. Bible (BSI)

8 ಆತ ಪ್ರಾಮಾಣಿಕ ವ್ಯಕ್ತಿಯೆಂದು ಗುರುತಿಸಿದಿರಿ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ, ಗಿರ್ಗಾಷಿಯರ ನಾಡನು ಆತನ ಸಂತಾನದವರಿಗೆ ವಾಗ್ದಾನ ಮಾಡಿದಿರಿ. ಅಂತೆಯೇ ಸತ್ವ ಸ್ವರೂಪರಾದ ನೀವು ಅದನು ಈಡೇರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ - ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದೀ; ನೀನು ಧರ್ಮಸ್ವರೂಪನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಅವನು ನ್ಯಾಯವಂತನೂ ಪ್ರಾಮಾಣಿಕನೂ ಆಗಿದ್ದಾನೆಂದು ತಿಳಿದು ಅವನೊಂದಿಗೆ ಒಡಂಬಡಿಕೆ ಮಾಡಿಕೊಂಡೆ. ಹಿತ್ತಿಯರ, ಕಾನಾನ್ಯರ, ಅಮೋರಿಯರ, ಪೆರಿಜ್ಜೀಯರ, ಯೆಬೂಸಿಯರ ಮತ್ತು ಗಿರ್ಗಾಷಿಯರ ನಾಡನ್ನು ಅವನಿಗೂ ಅವನ ಸಂತತಿಯವರಿಗೂ ಕೊಡುವುದಾಗಿ ವಾಗ್ದಾನ ಮಾಡಿದೆ. ನೀನು ನಿನ್ನ ವಾಗ್ದಾನವನ್ನು ನೆರವೇರಿಸಿದೆ. ಯಾಕೆಂದರೆ ನೀನು ಒಳ್ಳೆಯವನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಅವನ ಹೃದಯವು ನಿಮ್ಮ ಮುಂದೆ ಪ್ರಾಮಾಣಿಕವಾದದ್ದೆಂದೂ ಗುರುತಿಸಿದಿರಿ. ಕಾನಾನ್ಯರೂ, ಹಿತ್ತಿಯರೂ, ಅಮೋರಿಯರೂ, ಪೆರಿಜೀಯರೂ, ಯೆಬೂಸಿಯರೂ, ಗಿರ್ಗಾಷಿಯರೂ ಇವರ ದೇಶವನ್ನು, ಅಬ್ರಾಮನ ಸಂತಾನಕ್ಕೆ ಕೊಡುವಂತೆ ಅವನ ಸಂಗಡ ಒಡಂಬಡಿಕೆಯನ್ನು ಮಾಡಿದಿರಿ. ನೀತಿವಂತರಾದ ನೀವು ನಿಮ್ಮ ವಾಗ್ದಾನವನ್ನು ಈಡೇರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 9:8
39 ತಿಳಿವುಗಳ ಹೋಲಿಕೆ  

ದೇವರ ವಾಗ್ದಾನ ಮತ್ತು ಶಪಥ ಇವೆರಡೂ ಅಚಲವಾದ ಆಧಾರಗಳು. ಇವುಗಳ ವಿಷಯವಾಗಿ ದೇವರು ನಮಗೆ ಮೋಸಮಾಡುವವರೇ ಅಲ್ಲ. ಇದರಿಂದಾಗಿ, ದೇವರ ಆಶ್ರಯಕ್ಕಾಗಿ ಧಾವಿಸಿಬಂದಿರುವ ನಾವು, ನಮ್ಮ ಮುಂದಿರಿಸಿರುವ ನಂಬಿಕೆ ನಿರೀಕ್ಷೆಯಲ್ಲಿ ಸ್ಥಿರವಾಗಿ ನಿಲ್ಲಲು ಬಲವಾದ ಪ್ರೋತ್ಸಾಹ ದೊರೆತಂತಾಯಿತು.


ಅಬ್ರಾಮನು ಸರ್ವೇಶ್ವರ ಸ್ವಾಮಿಯಲ್ಲಿ ವಿಶ್ವಾಸವಿಟ್ಟನು. ಅವರು ಅವನ ವಿಶ್ವಾಸವೇ ಸರಿಯಾದ ಸಂಬಂಧವೆಂದು ಪರಿಗಣಿಸಿದರು.


ಈಗ ನಾನು, ಭೂನಿವಾಸಿಗಳೆಲ್ಲರು ಹಿಡಿಯುವ ಹಾದಿಯನ್ನು ಹಿಡಿಯಬೆಕಾಗಿದೆ. ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ವಿಷಯದಲ್ಲಿ ನುಡಿದ ಆಶೀರ್ವಚನಗಳಲ್ಲಿ ಒಂದೂ ವ್ಯರ್ಥವಾಗಲಿಲ್ಲ. ಎಲ್ಲವೂ ತಪ್ಪದೆ ನೆರವೇರಿವೆ ಎಂಬುದು ನಿಮಗೆ ಮನದಟ್ಟಾಗಿರಲಿ.


ಅಲ್ಲಿ ಸರ್ವೇಶ್ವರ ಸ್ವಾಮಿ ಅಬ್ರಾಮನಿಗೆ ದರ್ಶನವಿತ್ತು - “ಈ ನಾಡನ್ನು ನಾನು ನಿನ್ನ ಸಂತಾನಕ್ಕೆ ಕೊಡುತ್ತೇನೆ” ಎಂದು ಹೇಳಿದರು. ತನಗೆ ದರ್ಶನಕೊಟ್ಟ ಸರ್ವೇಶ್ವರನಿಗೆ ಅಬ್ರಾಮನು ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.


ಪ್ರತಿಯಾಗಿ, ನಮ್ಮ ಪಾಪಗಳನ್ನು ಒಪ್ಪಿಕೊಂಡರೆ, ಆಗ ನಂಬಿಕಸ್ಥರೂ ನೀತಿವಂತರೂ ಆದ ದೇವರು ನಮ್ಮ ಪಾಪಗಳನ್ನು ಕ್ಷಮಿಸಿ ಎಲ್ಲಾ ಅನೀತಿ - ಅಧರ್ಮಗಳಿಂದ ನಮ್ಮನ್ನು ಶುದ್ಧೀಕರಿಸುತ್ತಾರೆ.


ವಿಶ್ವಾಸವಿದ್ದುದರಿಂದಲೇ ಅಬ್ರಹಾಮನು ತಾನು ಪರಿಶೋಧಿತನಾದಾಗ ಇಸಾಕನನ್ನು ಬಲಿಯಾಗಿ ಅರ್ಪಿಸಲು ಮುಂದೆ ಬಂದನು.


ಅನಂತರ ದೇವರು ಸೌಲನನ್ನು ತ್ಯಜಿಸಿ ದಾವೀದನನ್ನು ಅರಸನನ್ನಾಗಿ ನೇಮಿಸಿದರು. ಇವನ ಬಗ್ಗೆ ದೇವರು, “ಜೆಸ್ಸೆಯನ ಮಗ ದಾವೀದನು ನನಗೆ ಮೆಚ್ಚುಗೆಯಾದ ವ್ಯಕ್ತಿ; ಇವನು ನನ್ನ ಆಶೆ ಆಕಾಂಕ್ಷೆಗಳನ್ನೆಲ್ಲಾ ಪೂರೈಸುವನು,” ಎಂದು ತಮ್ಮ ಒಪ್ಪಿಗೆಯನ್ನು ಸೂಚಿಸಿದರು.


ಸರ್ವೇಶ್ವರ ಮೋಶೆಯ ಮುಖಾಂತರ ವಾಗ್ದಾನ ಮಾಡಿದ್ದ ಪ್ರದೇಶವನ್ನೆಲ್ಲಾ ಯೆಹೋಶುವ ಹಿಡಿದುಕೊಂಡನು, ಇಸ್ರಯೇಲ್ ಕುಲಭಾಗಗಳಿಗನುಸಾರ ಅದನ್ನು ಹಂಚಿಕೊಟ್ಟನು. ಯುದ್ಧ ನಿಂತಿತು. ದೇಶದಲ್ಲೆಲ್ಲಾ ಶಾಂತಿಸಮಾಧಾನ ನೆಲೆಸಿತು.


ಪೂರ್ವ ಪಶ್ಚಿಮಗಳಲ್ಲಿರುವ ಕಾನಾನ್ಯರು, ಅಮೋರಿಯರು, ಹಿತ್ತಿಯರು, ಪೆರಿಜ್ಜೀಯರು, ಮಲೆನಾಡಿನ ಪ್ರದೇಶದಲ್ಲಿದ್ದ ಯೆಬೂಸಿಯರು, ಹೆರ್ನೋನಿನ ಬುಡದಲ್ಲಿ ಮಿಚ್ಪಾನಾಡಿನಲ್ಲಿದ್ದ ಹಿವ್ವಿಯರು ಇವರಿಗೂ ಹೇಳಿಕಳಿಸಿದನು.


ಜೋರ್ಡನ್ ಹೊಳೆಯ ಆಚೆ ಬೆಟ್ಟದ ಪ್ರದೇಶ, ಕಣಿವೆ ಪ್ರದೇಶ, ಲೆಬನೋನಿನ ಎದುರಿಗಿರುವ ಮಹಾಸಾಗರದ ತೀರಪ್ರದೇಶ ಇವುಗಳಲ್ಲಿ ವಾಸವಾಗಿದ್ದ ಅಮೋರಿಯ, ಹಿತ್ತಿಯ, ಕಾನಾನ್, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ ರಾಜರು ನಡೆದ ಸಂಗತಿಯನ್ನು ಕೇಳಿದರು.


ಆ ಕಾಲದಲ್ಲಿ ಇರುವ ಮಹಾಯಾಜಕನಿಗೆ, ‘ಸರ್ವೇಶ್ವರ ನಮ್ಮ ಪಿತೃಗಳಿಗೆ ಪ್ರಮಾಣಮಾಡಿಕೊಟ್ಟ ನಾಡಿನಲ್ಲಿ ನಾನು ಸೇರಿದ್ದಾಯಿತೆಂದು ನಾವು ಸೇವೆಮಾಡುವ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಈಗ ಒಪ್ಪಿಕೊಳ್ಳುತ್ತೇನೆ’ ಎಂದು ಹೇಳಬೇಕು.


ನೀವು ಅವರ ನಾಡಿಗೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ನಿಮ್ಮ ಪುಣ್ಯವೇ ಆಗಲಿ, ನಿಮ್ಮ ಸುಸ್ವಭಾವವೇ ಆಗಲಿ, ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ಕಾರಣ ಹಾಗು ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪಿತೃಗಳಾದ ಅಬ್ರಹಾಮ್, ಇಸಾಕ್, ಯಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಕಾರಣ ಅವರನ್ನು ನಿಮ್ಮ ಬಳಿಯಿಂದ ಹೊರಡಿಸಿಬಿಡುತ್ತಾರೆ.


“ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ನಾಡಿಗೆ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ಸೇರಿಸಿ, ಸಂಖ್ಯೆಯಲ್ಲೂ ಶಕ್ತಿಯಲ್ಲೂ ನಿಮ್ಮನ್ನು ಮೀರುವ ಜನಾಂಗಗಳನ್ನು ಅಲ್ಲಿಂದ ನಿಮ್ಮ ಮುಂದೆಯೆ ಹೊರಡಿಸುವರು.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಆದಕಾರಣ ಅವರನ್ನು ಈಜಿಪ್ಟಿನವರ ಕೈಯಿಂದ ಬಿಡಿಸುವುದಕ್ಕು ಮತ್ತು ಆ ದೇಶದಿಂದ ಹೊರತಂದು ಹಾಲೂ ಜೇನೂ ಹರಿಯುವ ಸವಿಸ್ತಾರವಾದ ಒಳ್ಳೆಯ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಆಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ನಡೆಸಿಕೊಂಡು ಹೋಗುವುದಕ್ಕು ಇಳಿದು ಬಂದಿದ್ದೇನೆ.


ದೂತನು ಅವನಿಗೆ, "ಹುಡುಗನ ಮೇಲೆ ಕೈಯೆತ್ತಬೇಡ; ಅವನಿಗೆ ಯಾವ ಹಾನಿಯನ್ನೂ ಮಾಡಬೇಡ; ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಬಲಿಕೊಡಲು ಹಿಂತೆಗೆಯಲಿಲ್ಲ; ಎಂತಲೇ, ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂದು ಈಗ ನನಗೆ ಚೆನ್ನಾಗಿ ಗೊತ್ತಾಯಿತು,” ಎಂದು ಹೇಳಿದನು.


ಪ್ರಭು ಕೃಪಾಳು, ನ್ಯಾಯಪ್ರಿಯನು I ಕರುಣಾಮಯನು, ನಮ್ಮ ದೇವನು II


ದಕ್ಷಿಣ ಪ್ರಾಂತದಲ್ಲಿ ಅಮಾಲೇಕ್ಯರು, ಮಲೆನಾಡಿನಲ್ಲಿ ಹಿತ್ತಿಯರು ಯೆಬೂಸಿಯರು ಹಾಗು ಅಮೋರಿಯರು ಮತ್ತು ಸಮುದ್ರ ತೀರದಲ್ಲಿ ಹಾಗೂ ಜೋರ್ಡನ್ ನದಿಯ ಪರಿಸರದಲ್ಲಿ ಕಾನಾನ್ಯರು ವಾಸವಾಗಿದ್ದಾರೆ,” ಎಂದು ವರದಿ ಮಾಡಿದರು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ಅಬ್ರಹಾಮನೊಡನೆ ಮಾಡಿಕೊಂಡ ಒಡಂಬಡಿಕೆಯನು I ಇಸಾಕನಿಗೆ ಆಣೆಯಿಟ್ಟು ಆತನು ಹೇಳಿದುದನು II


ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


“ನರಪುತ್ರನೇ, ಇಸ್ರಯೇಲ್ ನಾಡಿನ ಹಾಳುಪ್ರದೇಶಗಳಲ್ಲಿ ವಾಸಿಸುವರು, ‘ಅಬ್ರಹಾಮನು ಒಂಟಿಗನಾಗಿದ್ದರೂ ಈ ನಾಡು ಅವನಿಗೆ ಸೊತ್ತಾಗಿ ಸಿಕ್ಕಿತು; ಅದು ಬಹುಜನರಾದ ನಮಗೆ ಸೊತ್ತಾಗಿ ಸಿಕ್ಕಿದ್ದು ಏನು ದೊಡ್ಡದು! ಎಂದುಕೊಳ್ಳುತ್ತಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು