Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:1 - ಕನ್ನಡ ಸತ್ಯವೇದವು C.L. Bible (BSI)

1 ಯೆಹೋಶುವನು ಮರಣಹೊಂದಿದ ಬಳಿಕ ಇಸ್ರಯೇಲರು ಕಾನಾನ್ಯರೊಡನೆ ಯುದ್ಧಮಾಡಲು ತಮ್ಮಲ್ಲಿ ಯಾವ ಕುಲ ಮುಂದಾಗಿ ಹೋಗಬೇಕೆಂದು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋಶುವನು ಮರಣಹೊಂದಿದ ನಂತರ ಇಸ್ರಾಯೇಲ್ಯರು - ಕಾನಾನ್ಯರೊಡನೆ ಯುದ್ಧಮಾಡುವದಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ಯೆಹೋವನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋಶುವನು ಮರಣಹೊಂದಿದ ನಂತರ ಇಸ್ರೇಲರು ಯೆಹೋವನಿಗೆ, “ನಮ್ಮಲ್ಲಿ ಯಾವ ಕುಲದವರು ಮೊದಲು ಹೋಗಿ ಕಾನಾನ್ಯರ ವಿರುದ್ಧ ಯುದ್ಧಮಾಡಬೇಕು?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋಶುವನು ಮರಣ ಹೊಂದಿದ ಬಳಿಕ ಇಸ್ರಾಯೇಲರು, “ಕಾನಾನ್ಯರೊಡನೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ಯೆಹೋವ ದೇವರನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:1
17 ತಿಳಿವುಗಳ ಹೋಲಿಕೆ  

ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ದೈವೇಚ್ಛೆಯನ್ನು ತಿಳಿದುಕೊಳ್ಳಲು ಅವನು ಮಹಾಯಾಜಕ ಎಲ್ಲಾಜಾರನ ಹತ್ತಿರ ಬರಬೇಕು. ಎಲ್ಲಾಜಾರನು ಸರ್ವೇಶ್ವರನ ಸನ್ನಿಧಿಯಲ್ಲಿ ‘ಊರಿಮ್’ ಎಂಬ ವಸ್ತುವಿನ ಮೂಲಕ ಅವನ ಪರವಾಗಿ ವಿಚಾರಿಸುವನು, ಯೆಹೋಶುವನು ಮತ್ತು ಇಸ್ರಾಯೇಲ್ ಸಮಾಜದವರೆಲ್ಲರು ಅವನ ಮಾತಿನಂತೆ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದು ಆಜ್ಞಾಪಿಸಿದರು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ದೈವನಿರ್ಣಯವನ್ನು ತಿಳಿಸುವ ಊರಿಮ್ ಹಾಗು ತುಮ್ಮೀಮ್ ಎಂಬ ದಾಳಗಳನ್ನು ಆ ಫಲಕದ ಚೀಲದಲ್ಲಿ ಇಡಬೇಕು. ಆರೋನನು ಸರ್ವೇಶ್ವರನಾದ ನನ್ನ ಸನ್ನಿಧಿಗೆ ಬರುವಾಗ ಅವು ಅವನ ಎದೆಯ ಮೇಲೆ ಇರುವುವು. ಇಸ್ರಯೇಲರು ಕೈಗೊಳ್ಳಬೇಕಾದ ದೈವನಿರ್ಣಯವನ್ನು ಆರೋನನು ಹೀಗೆ ತನ್ನ ಹೃದಯದ ಮೇಲೆ ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ಯಾವಾಗಲು ಧರಿಸಿಕೊಂಡಿರುವನು.


ಆದ್ದರಿಂದ ಯೆಹೋಶುವನು ಸಾಯುವ ಮೊದಲು ಹೊರಗಟ್ಟದೆ ಬಿಟ್ಟ ಜನಾಂಗಗಳಲ್ಲಿ ಒಂದನ್ನಾದರೂ ನಾನು ಹೊರಡಿಸುವುದಿಲ್ಲ.


ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ಸರ್ವೇಶ್ವರನ ದಾಸ ನೂನನ ಮಗ ಯೆಹೋಶುವನು ನೂರಹತ್ತು ವರ್ಷದವನಾಗಿ ಮರಣಹೊಂದಿದನು.


ಅವನನ್ನು ಅವನ ಸ್ವಾಸ್ತ್ಯಭೂಮಿಯಾದ ತಿಮ್ನತ್ ಹೆರೆಸ್ ಎಂಬಲ್ಲಿ ಸಮಾಧಿಮಾಡಿದರು. ಅದು ಎಫ್ರಯಿಮ್ ಪರ್ವತಪ್ರದೇಶದಲ್ಲಿರುವ ಗಾಷ್ ಬೆಟ್ಟದ ಉತ್ತರದಿಕ್ಕಿನಲ್ಲಿದೆ.


(ಇಸ್ರಯೇಲರು ಹೋಗಿ ಸರ್ವೇಶ್ವರನ ಮುಂದೆ ದುಃಖಿಸುತ್ತಾ, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಮಾಡಬೇಕೆ?” ಎಂದು ಕೇಳಲು ಅವರು, “ಹೋಗಿ ಯುದ್ಧಮಾಡಿ,” ಎಂದರು.


ಆ ಕಾಲದಲ್ಲಿ ಸರ್ವೇಶ್ಬರನ ಒಡಂಬಡಿಕೆಯ ಮಂಜೂಷವು ಆ ಊರೊಳಗೆ ಇತ್ತು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಮಾತ್ರವಲ್ಲ, “ಸರ್ವೇಶ್ವರನ ಸನ್ನಿಧಿಯಲ್ಲಿ ಈಗಲೆ ವಿಚಾರಿಸು,” ಎಂದು ಇಸ್ರಯೇಲರ ಅರಸನನ್ನು ಬೇಡಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು