Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:12 - ಕನ್ನಡ ಸತ್ಯವೇದವು C.L. Bible (BSI)

12 ಕಿರ್ಯತ್ ಸೇಫೆರನ್ನು ಹಿಡಿದುಕೊಳ್ಳುವವನಿಗೆ ತನ್ನ ಮಗಳು ‘ಅಕ್ಷಾ’ ಎಂಬಾಕೆಯನ್ನು ಕೊಟ್ಟು ಮದುವೆ ಮಾಡುವುದಾಗಿ ಕಾಲೇಬನು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಕಿರ್ಯತಸೇಫೆರ ಎಂಬ ಪಟ್ಟಣವನ್ನು ವಶಪಡಿಸಿಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಕಿರ್ಯತ್‍ಸೇಫೆರನ್ನು ಹಿಡಿದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಷಾ ಎಂಬಾಕೆಯನ್ನು ಮದುವೆಮಾಡಿಕೊಡುತ್ತೇನೆಂದು ಕಾಲೇಬನು ಹೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೂದ್ಯರು ಯುದ್ಧ ಆರಂಭಿಸುವ ಮುನ್ನ ಕಾಲೇಬನು ಜನರಿಗೆ, “ಕಿರ್ಯತ್‌ಸೇಫೆರನ್ನು ಗೆದ್ದುಕೊಳ್ಳಬೇಕೆಂದು ನನ್ನ ಇಚ್ಛೆ. ಆ ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವನಿಗೆ ನಾನು ನನ್ನ ಮಗಳಾದ ಅಕ್ಷಾಳನ್ನು ಮದುವೆ ಮಾಡಿಕೊಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕಾಲೇಬನು, “ಕಿರ್ಯತ್ ಸೇಫೆರ ಮೇಲೆ ದಾಳಿಮಾಡಿ ತೆಗೆದುಕೊಳ್ಳುವವನಿಗೆ ನನ್ನ ಮಗಳಾದ ಅಕ್ಸಾ ಎಂಬಾಕೆಯನ್ನು ಮದುವೆ ಮಾಡಿಕೊಡುತ್ತೇನೆ,” ಎಂದು ಹೇಳಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:12
8 ತಿಳಿವುಗಳ ಹೋಲಿಕೆ  

“ನೋಡಿದಿರೋ, ಇಸ್ರಯೇಲರಾದ ನಮ್ಮನ್ನು ತೃಣೀಕರಿಸಲು ಬಂದಿರುವ ಈ ವ್ಯಕ್ತಿಯನ್ನು? ಇವನನ್ನು ಕೊಲ್ಲುವವನಿಗೆ ಅರಸ ಅಪಾರ ದ್ರವ್ಯಕೊಡುವರು; ತಮ್ಮ ಮಗಳನ್ನೇ ಕೊಟ್ಟು ಮದುವೆಮಾಡುವರು; ಅಲ್ಲದೆ ಅಂಥವನ ಕುಟುಂಬಕ್ಕೆ ಎಲ್ಲಾ ತೆರಿಗೆ ಕಂದಾಯದಿಂದ ವಿನಾಯಿತಿ ದೊರಕುವುದು,” ಎಂದು ಮಾತಾಡಿಕೊಳ್ಳುತ್ತಿದ್ದರು.


ಅಂತೆಯೇ ಆ ಸೇವಕರು ದಾವೀದನಿಗೆ ತಿಳಿಯಪಡಿಸಿದರು. ಅದಕ್ಕೆ ದಾವೀದನು, “ಅರಸರ ಅಳಿಯನಾಗುವುದು ಅಷ್ಟು ಸಾಧಾರಣ ಸಂಗತಿ ಎಂದು ನೆನೆಸುತ್ತೀರೋ? ನಾನೊಬ್ಬ ಬಡವ, ದೀನದಲಿತ,” ಎಂದುಬಿಟ್ಟನು.


ಅನಂತರ ಅವನು ಹೊರಟು ಕಿರ್ಯತ್ ಸೇಫೆರ್ ಎನ್ನಿಸಿಕೊಳ್ಳುತ್ತಿದ್ದ ದೆಬೀರಿನ ನಿವಾಸಿಗಳೊಡನೆ ಯುದ್ಧಮಾಡಿದನು.


ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು.


ಅಂತೆಯೇ ಅವನ ತಮ್ಮನೂ ಕೆನಜನ ಮಗನೂ ಆದ ಒತ್ನೀಯೇಲನು ಅದನ್ನು ಹಿಡಿದುಕೊಂಡಾಗ ಕಾಲೇಬನು ತನ್ನ ಮಗಳು ಅಕ್ಷಾ ಎಂಬಾಕೆಯನ್ನು ಆತನಿಗೆ ಮದುವೆಮಾಡಿಕೊಟ್ಟನು.


ಕೋಟೆಯ ನಗರಕೆ ನನ್ನನು ಕರೆದೊಯ್ಯುವರಾರು? I ಎದೋಮ್ ಪ್ರಾಂತ್ಯಕೆ ನನ್ನ ಕೊಂಡೊಯ್ಯುವವರಾರು? II


ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು