Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:2 - ಕನ್ನಡ ಸತ್ಯವೇದವು C.L. Bible (BSI)

2 “ಯೆಹೂದ ಕುಲ ಹೋಗಲಿ; ಇಗೋ, ನಾಡನ್ನು ಅವರ ಕೈಗೆ ಒಪ್ಪಿಸಿದ್ದೇನೆ,” ಎಂದರು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನು ಅವರಿಗೆ “ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ಅವರಿಗೆ - ಯೆಹೂದ್ಯರು ಹೋಗಲಿ; ಇಗೋ, ದೇಶವನ್ನು ಅವರಿಗೆ ಒಪ್ಪಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಇಸ್ರೇಲರಿಗೆ, “ಯೆಹೂದ ಕುಲದವರು ಹೋಗಲಿ. ಅವರು ಈ ದೇಶವನ್ನು ವಶಪಡಿಸಿಕೊಳ್ಳುವಂತೆ ನಾನು ಮಾಡುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಯೆಹೋವ ದೇವರು, “ಯೆಹೂದ ಗೋತ್ರದವರು ಹೋಗಲಿ; ನಾನು ಆ ದೇಶವನ್ನು ಇವರ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:2
11 ತಿಳಿವುಗಳ ಹೋಲಿಕೆ  

ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ನಮ್ಮ ಪ್ರಭು ಹುಟ್ಟಿದ್ದು ಯೂದನ ಕುಲದಲ್ಲಿ ಎಂಬುದು ತಿಳಿದ ವಿಷಯ. ಮೋಶೆ ಯಾಜಕರನ್ನು ಕುರಿತು ಮಾತನಾಡಿದಾಗ ಈ ಕುಲದ ಬಗ್ಗೆ ಏನನ್ನೂ ಹೇಳಲಿಲ್ಲ.


ಮೊದಲನೆಯ ದಿನ ಕಾಣಿಕೆ ತಂದೊಪ್ಪಿಸಿದವನು ಯೆಹೂದ ಕುಲಾಧಿಪತಿ ಅಮ್ಮೀನಾದಾಬನ ಮಗ ನಹಶೋನ.


“ಸೂರ್ಯೋದಯವಾಗುವ ದಿಕ್ಕಿನಲ್ಲಿ ಯೆಹೂದ ಕುಲದ ದಂಡಿಗೆ ಸೇರಿದವರು ಸೈನ್ಯ ಸೈನ್ಯವಾಗಿ ತಮ್ಮ ಡೇರೆಗಳನ್ನು ಹಾಕಿಕೊಳ್ಳಬೇಕು. ಆ ಕುಲದವರಿಗೆ ನಾಯಕ ಅಮ್ಮಿನಾದಾಬನ ಮಗ ನಹಶೋನ.


ಆಗ ಯೆಹೂದಕುಲದವರು ತಮ್ಮ ಸೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡಲು ನೀವೂ ನಮ್ಮ ಸಂಗಡ ಸ್ವಂತಪ್ರಾಂತ್ಯಕ್ಕೆ ಬನ್ನಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಂತಪ್ರಾಂತ್ಯಕ್ಕೆ ಬರುತ್ತೇವೆ,” ಎಂದು ಹೇಳಿದರು.


ಇದಲ್ಲದೆ, ಅವರು ಯೆಹೋಶುವನಿಗೆ, “ಸರ್ವೇಶ್ವರಸ್ವಾಮಿ ನಿಜವಾಗಿ ಈ ನಾಡನ್ನೆಲ್ಲಾ ನಮಗೆ ಕೊಟ್ಟಿದ್ದಾರೆ. ಅದರ ನಿವಾಸಿಗಳೆಲ್ಲ ನಮ್ಮನ್ನು ಕಂಡು ನಡುಗುತ್ತ ಇದ್ದಾರೆ,” ಎಂದು ತಿಳಿಸಿದರು.


ಇಸ್ರಯೇಲರು ಬೇತೇಲಿಗೆ ಹೋಗಿ, ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು ಎಂದು ದೇವರಾದ ಸರ್ವೇಶ್ವರನನ್ನು ಕೇಳಲು ಅವರು, “ಮೊದಲು ಯೆಹೂದಕುಲದವರು ಹೋಗಲಿ,” ಎಂದು ಹೇಳಿದರು.


ಆರೋನನ ಮೊಮ್ಮಗನೂ ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕ ಸೇವೆಮಾಡುತ್ತಿದ್ದನು. ಇಂತಿರಲು ಇಸ್ರಯೇಲರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ ಬೇಡವೋ” ಎಂದು ಸರ್ವೇಶ್ವರನನ್ನು ಕೇಳಿದರು. ಸರ್ವೇಶ್ವರನು ಅವರಿಗೆ, “ಹೋಗಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು