Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:21 - ಕನ್ನಡ ಸತ್ಯವೇದವು C.L. Bible (BSI)

21 ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೆರೂಸಲೇಮಿನಲ್ಲಿದ್ದ ಯೆಬೂಸಿಯರನ್ನು ಬೆನ್ಯಾಮೀನ್ಯರು ಹೊರಡಿಸಿಬಿಡಲಿಲ್ಲ. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೆರೂಸಲೇವಿುನಲ್ಲಿದ್ದ ಯೆಬೂಸಿಯರನ್ನು ಹೊರಡಿಸುವದು ಬೆನ್ಯಾಮೀನ್ಯರಿಂದ ಆಗದೆ ಹೋಯಿತು. ಅವರು ಇಂದಿನವರೆಗೂ ಬೆನ್ಯಾಮೀನ್ಯರ ಸಂಗಡ ಯೆರೂಸಲೇವಿುನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೆನ್ಯಾಮೀನನ ಕುಲದವರಿಗೆ ಯೆಬೂಸಿಯರನ್ನು ಜೆರುಸಲೇಮಿನಿಂದ ಹೊರದೂಡುವುದು ಸಾಧ್ಯವಾಗಲಿಲ್ಲ. ಅದಕ್ಕಾಗಿ ಇಂದಿನವರೆಗೂ ಅವರು ಬೆನ್ಯಾಮೀನರೊಡನೆ ಜೆರುಸಲೇಮಿನಲ್ಲಿಯೇ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:21
13 ತಿಳಿವುಗಳ ಹೋಲಿಕೆ  

ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಯೆಹೂದ ಕುಲದವರಿಂದ ಆಗದೆ ಹೋಯಿತು. ಆದುದರಿಂದ ಅವರು ಇಂದಿನವರೆಗೂ ಯೆಹೂದ ಕುಲದವರೊಡನೆ ಜೆರುಸಲೇಮಿನಲ್ಲೇ ವಾಸವಾಗಿದ್ದಾರೆ.


ಯೆಹೂದ ಕುಲದವರು ಜೆರುಸಲೇಮಿನೊಡನೆ ಯುದ್ಧಮಾಡಿದರು. ಆ ಜನರನ್ನು ಕತ್ತಿಗೆ ತುತ್ತಾಗಿಸಿ ಅವರ ಪಟ್ಟಣವನ್ನು ಸುಟ್ಟುಹಾಕಿದರು.


ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.


ಯೆಬೂಸಿಯ ಮೊದಲಾದ ಇತರ ಜನಾಂಗಗಳ ಸಂತಾನದವರೆಲ್ಲರನ್ನು ಬಿಟ್ಟೀ ಕೆಲಸಕ್ಕಾಗಿ ಇಟ್ಟಿದ್ದನು. ಇಂದಿನವರೆಗೂ ಅವರು ಬಿಟ್ಟೀ ಕೆಲಸದವರಾಗಿಯೇ ಇರುತ್ತಾರೆ.


ಆ ಕಾಲದಲ್ಲಿ ಜೆರುಸಲೇಮ್ ಪಟ್ಟಣವನ್ನು ‘ಯೆಬೂಸ’ ಎಂದು ಕರೆಯಲಾಗುತ್ತಿತ್ತು. ಅಲ್ಲಿಯ ಮೂಲನಿವಾಸಿಗಳಾದ ಯೆಬೂಸಿಯರು ಆ ಪ್ರದೇಶದಲ್ಲಿ ಇನ್ನೂ ವಾಸಿಸುತ್ತಿದ್ದರು. ಅರಸ ದಾವೀದನೂ ಎಲ್ಲಾ ಇಸ್ರಯೇಲರೂ ಜೆರುಸಲೇಮ್ ಪಟ್ಟಣಕ್ಕೆ ಮುತ್ತಿಗೆ ಹಾಕಿದರು.


ಅನುಸರಿಸಲಿಲ್ಲ ಅವರು ಪ್ರಭುವಿನಾಜ್ಞೆಯನು I ಆತ ಸಂಹರಿಸಲಿಲ್ಲ ಶೋಧಿಸಿದಾ ಜನರನು II


ಮನಸ್ಸೆಕುಲದವರು ಬೇತ್ ಷೆಯಾನ್, ತಾನಾಕ್, ದೋರ್, ಇಬ್ಲೆಯಾಮ್, ಮೆಗಿದ್ದೋ ಎಂಬ ಪಟ್ಟಣಗಳನ್ನೂ ಅವುಗಳ ಗ್ರಾಮಗಳನ್ನೂ ಸ್ವಾಧೀನಮಾಡಿಕೊಳ್ಳಲಿಲ್ಲ, ಆದುದರಿಂದ ಕಾನಾನ್ಯರು ಆ ಪ್ರಾಂತ್ಯಗಳಲ್ಲೇ ವಾಸಿಸುವುದಕ್ಕೆ ನಿರ್ಧರಿಸಿಕೊಂಡರು.


ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,


ಇವರು ಜೆರುಸಲೇಮಿನಲ್ಲಿ ನೆಲೆಸಿದ ಪುರಾತನ ಕುಟುಂಬಗಳ ಮುಖ್ಯಸ್ಥರೂ ಅವರ ಪ್ರಮುಖ ವಂಶಜರೂ ಆಗಿದ್ದಾರೆ.


ಅವರು ಇಂದಿನವರೆಗೂ ಬಿಟ್ಟೀಕೆಲಸದವರಾಗಿರುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು