Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 1:22 - ಕನ್ನಡ ಸತ್ಯವೇದವು C.L. Bible (BSI)

22 ಇವರ ಹಾಗೆಯೇ ಜೋಸೆಫನ ಕುಲದವರು ಹೊರಟು ಬೇತೇಲಿಗೆ ಬಂದರು. ಸರ್ವೇಶ್ವರಸ್ವಾಮಿ ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇವರ ಹಾಗೆಯೇ ಯೋಸೇಫನ ವಂಶದವರೂ ಹೊರಟು ಬೇತೇಲಿಗೆ ಬಂದರು. ಯೆಹೋವನು ಅವರ ಸಂಗಡ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 ಯೋಸೇಫನ ಕುಲದವರು ಲೂಜ್ ಎಂಬ ಬೇತೇಲ್ ನಗರದ ಮೇಲೆ ಧಾಳಿಮಾಡಲು ಹೋದರು. ಯೆಹೋವನು ಯೋಸೇಫನ ಕುಲದವರ ಸಂಗಡ ಇದ್ದನು. ಯೋಸೇಫನ ಕುಲದವರು ಬೇತೇಲ್ ನಗರಕ್ಕೆ ಕೆಲವು ಜನ ಗೂಢಚಾರರನ್ನು ಕಳುಹಿಸಿದರು. ಇವರು ಬೇತೇಲ್ ನಗರವನ್ನು ವಶಪಡಿಸಿಕೊಳ್ಳುವ ಮಾರ್ಗಗಳ ಬಗ್ಗೆ ಯೋಚಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 1:22
12 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಯೆಹೂದಕುಲದವರ ಸಂಗಡ ಇದ್ದುದರಿಂದ ಅವರು ಪರ್ವತ ಪ್ರದೇಶಗಳನ್ನೆಲ್ಲಾ ಸ್ವತಂತ್ರಿಸಿಕೊಂಡರು. ಆದರೆ ತಗ್ಗಿನ ಪ್ರದೇಶಗಳಲ್ಲಿ ವಾಸಿಸುವವರಿಗೆ ಕಬ್ಬಿಣ ರಥಗಳಿದ್ದುದರಿಂದ ಅವರನ್ನು ಹೊರಗಟ್ಟಲು ಆಗಲಿಲ್ಲ.


ಜೆಬುಲೋನನ ಕುಲದಿಂದ ಹನ್ನೆರಡು ಸಾವಿರ ಜೋಸೆಫನ ಕುಲದಿಂದ ಹನ್ನೆರಡು ಸಾವಿರ ಬೆನ್ಯಮೀನನ ಕುಲದಿಂದ ಹನ್ನೆರಡು ಸಾವಿರ.


ಮನಸ್ಸೆಯ ಸಂತಾನದವರು ಬೇತ್ಷಾನ್, ತಾನಾಕ್, ಮೆಗಿದ್ದೋ, ದೋರ್ ಎಂಬ ಪಟ್ಟಣಗಳನ್ನೂ ಅವುಗಳ ಸುತ್ತಮುತ್ತಲಿನ ಗ್ರಾಮಗಳನ್ನೂ ತಮ್ಮ ವಶದಲ್ಲಿಟ್ಟುಕೊಂಡಿದ್ದರು. ಯಕೋಬನ ಮಗ ಜೋಸೆಫನ ಸಂತತಿಯವರು ಈ ಎಲ್ಲಾ ಪ್ರದೇಶಗಳಲ್ಲಿ ವಾಸಿಸಿದರು.


ಸರ್ವೇಶ್ವರ ಇವನ ಸಂಗಡ ಇದ್ದುದರಿಂದ ಎಲ್ಲಿಗೆ ಹೋದರೂ ಕೃತಾರ್ಥನಾಗಿ ಬರುತ್ತಿದ್ದನು. ಇವನು ಅಸ್ಸೀರಿಯದ ಅರಸನಿಗೆ ವಿರುದ್ಧ ದಂಗೆಯೆದ್ದು ಸ್ವತಂತ್ರನಾದನು.


ಜೋಸೆಫ್ಯರರು ಮನಸ್ಸೆ ಮತ್ತು ಎಫ್ರಯಿಮ್ ಎಂಬ ಎರಡು ಕುಲಗಳಾಗಿ ಎಣಿಸಲ್ಪಟ್ಟಿದ್ದರು. ಲೇವಿಯರಿಗೆ, ತಂಗುವುದಕ್ಕೆ ಕೆಲವು ನಗರಗಳು ಹಾಗು ಅವರ ದನಕುರಿಗಳಿಗೆ ಅಲ್ಲಿನ ಕೆಲವು ಹುಲ್ಲುಗಾವಲುಗಳನ್ನು ಬಿಟ್ಟರೆ ಬೇರೇನೂ ಸಿಕ್ಕಲಿಲ್ಲ.


ಜೋಸೆಫನಿಂದ ಹುಟ್ಟಿದವರೊಳಗೆ: ಎಫ್ರಾಯೀಮ್ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 40,500:


ಜೀಸೆಫನ ವಂಶದವರಲ್ಲಿ - ಎಫ್ರಾಯಿಮ್ ಕುಲದಿಂದ ಅಮ್ಮೀಹೂದನ ಮಗ ಎಲೀಷಾಮಾ ಮನಸ್ಸೆ ಕುಲದಿಂದ ಪೆದಾಚೂರನ ಮಗನಾದ ಗಮ್ಲೀಯೇಲ್


ಆದರೂ ಯಕೋಬಕುಲದ ಸರ್ವ ಬಲಾಢ್ಯನ ಶಕ್ತಿಯಿಂದ ಇಸ್ರಯೇಲನ ಪೊರೆಬಂಡೆ - ಪರಿಪಾಲಕನ ನಾಮದಿಂದ ನಿಂತಿತು ಸ್ಥಿರವಾಗಿ ಅವನ ಬಿಲ್ಲು ಚುರುಕುಗೊಂಡಿತು ಅವನ ಕೈಗಳ ಬಲ್ಬು.


ಯೆಹೋಶುವ ಸುಮಾರು ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ನಗರದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕಾಗಿ ಇರಿಸಿದನು.


ಜೆರುಸಲೇಮಿನಲ್ಲಿದ್ದ ಯೆಬೂಸಿಯರನ್ನು ಹೊರಡಿಸಲು ಬೆನ್ಯಾಮೀನ್ಯರಿಂದ ಆಗದೆಹೋಯಿತು. ಅವರು ಇಂದಿನವರೆಗೂ, ಬೆನ್ಯಾಮೀನ್ಯರ ಸಂಗಡ ಜೆರುಸಲೇಮಿನಲ್ಲೇ ವಾಸವಾಗಿ ಇದ್ದಾರೆ.


ಅವರು ‘ಲೂಜ್’ ಎಂದು ಕರೆಯಲಾದ ಬೇತೇಲ್ ಊರನ್ನು ಸಂಚರಿಸಿ ನೋಡಲು ಗೂಢಚಾರರನ್ನು ಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು