ನ್ಯಾಯಸ್ಥಾಪಕರು 1:3 - ಕನ್ನಡ ಸತ್ಯವೇದವು C.L. Bible (BSI)3 ಆಗ ಯೆಹೂದಕುಲದವರು ತಮ್ಮ ಸೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡಲು ನೀವೂ ನಮ್ಮ ಸಂಗಡ ಸ್ವಂತಪ್ರಾಂತ್ಯಕ್ಕೆ ಬನ್ನಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಂತಪ್ರಾಂತ್ಯಕ್ಕೆ ಬರುತ್ತೇವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ಕಾನಾನ್ಯರೊಡನೆ ಯುದ್ಧಮಾಡುವುದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಧೀನದಲ್ಲಿರುವ ಭೂಮಿಗೆ ಬರುವೆವು” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ - ಕಾನಾನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ನೀವು ನಮ್ಮ ಸಂಗಡ ನಮ್ಮ ಸ್ವಾಸ್ತ್ಯಭೂವಿುಗೆ ಬನ್ನಿರಿ; ಅನಂತರ ನಾವೂ ನಿಮ್ಮ ಸಂಗಡ ನಿಮ್ಮ ಸ್ವಾಸ್ತ್ಯ ಭೂವಿುಗೆ ಬರುವೆವು ಎಂದು ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಯೆಹೂದ್ಯರು ತಮ್ಮ ಸಹೋದರರಾದ ಸಿಮೆಯೋನ್ಯರಿಂದ ಸಹಾಯವನ್ನು ಕೇಳಿದರು; ಯೆಹೂದ್ಯರು, “ಸಹೋದರರೇ, ಯೆಹೋವನು ನಮ್ಮಲ್ಲಿ ಪ್ರತಿಯೊಬ್ಬರಿಗೂ ಸ್ವಲ್ಪಸ್ವಲ್ಪ ಭೂಮಿಯನ್ನು ಕೊಡುವುದಾಗಿ ವಾಗ್ದಾನ ಮಾಡಿದ್ದಾನೆ. ನೀವು ಬಂದು ನಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ಸಹಾಯ ಮಾಡಿದರೆ, ನಿಮ್ಮ ಭೂಮಿಗಾಗಿ ಹೋರಾಡುವ ಯುದ್ಧದಲ್ಲಿ ನಾವು ನಿಮಗೆ ಸಹಾಯ ಮಾಡುತ್ತೇವೆ” ಎಂದು ಹೇಳಿದರು. ಸಿಮೆಯೋನ್ಯರು ತಮ್ಮ ಸಹೋದರರಾದ ಯೆಹೂದ್ಯರಿಗೆ ಯುದ್ಧದಲ್ಲಿ ಸಹಾಯ ಮಾಡಲು ಒಪ್ಪಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೂದ ಗೋತ್ರದವರು ತಮ್ಮ ಸಹೋದರರಾದ ಸಿಮೆಯೋನ್ಯರಿಗೆ, “ನೀವು ನಮ್ಮ ಸಂಗಡ ನಮ್ಮ ಪ್ರಾಂತಕ್ಕೆ ಬನ್ನಿರಿ, ಕಾನಾನ್ಯರ ಮೇಲೆ ಯುದ್ಧ ಮಾಡೋಣ. ಹಾಗೆಯೇ ನಾವು ನಿಮ್ಮ ಸಂಗಡ ನಿಮ್ಮ ಪ್ರಾಂತಕ್ಕೆ ಬರುತ್ತೇವೆ,” ಎಂದರು. ಹೀಗೆ ಸಿಮೆಯೋನ್ಯರು ಅವರ ಸಂಗಡ ಹೋದರು. ಅಧ್ಯಾಯವನ್ನು ನೋಡಿ |