Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:15 - ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರು ಮರಳಿ ಸರ್ವೇಶ್ವರನಿಗೆ, “ಪಾಪ ಮಾಡಿದ್ದೇವೆ; ನಿಮಗೆ ಸರಿ ತೋರಿದಂತೆ ನಮಗೆ ಮಾಡಿ; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು,” ಎಂದು ಮೊರೆಯಿಟ್ಟರು. ಅನ್ಯದೇವತೆಗಳನ್ನು ಹೊರಗೆ ಹಾಕಿ ಸರ್ವೇಶ್ವರನನ್ನು ಪೂಜಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವರು ತಿರುಗಿ ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ; ನಿನಗೆ ಸರಿಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು” ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದು ಹಾಕಿ ಯೆಹೋವನನ್ನು ಸೇವಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ತಿರಿಗಿ ಯೆಹೋವನಿಗೆ - ನಾವು ಪಾಪ ಮಾಡಿದ್ದೇವೆ; ನಿನಗೆ ಸರಿ ಕಾಣುವ ಪ್ರಕಾರ ನಮಗೆ ಮಾಡು; ಆದರೆ ಈ ಸಾರಿ ಹೇಗೂ ನಮ್ಮನ್ನು ರಕ್ಷಿಸಬೇಕು ಎಂದು ಮೊರೆಯಿಟ್ಟು ಅನ್ಯದೇವತೆಗಳನ್ನು ತಮ್ಮಲ್ಲಿಂದ ತೆಗೆದುಹಾಕಿ ಯೆಹೋವನನ್ನು ಸೇವಿಸುವವರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಇಸ್ರೇಲರು ಯೆಹೋವನಿಗೆ, “ನಾವು ಪಾಪ ಮಾಡಿದ್ದೇವೆ. ನಿನಗೆ ಸರಿಯೆನಿಸಿದಂತೆ ಮಾಡು. ಆದರೆ ದಯವಿಟ್ಟು ಇಂದು ನಮ್ಮನ್ನು ರಕ್ಷಿಸು” ಎಂದು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರು ಯೆಹೋವ ದೇವರಿಗೆ, “ನಾವು ಪಾಪಮಾಡಿದೆವು. ನೀವು ನಿಮಗೆ ಒಳ್ಳೆಯದಾಗಿ ತೋರುವುದನ್ನೆಲ್ಲಾ ನಮಗೆ ಮಾಡಿರಿ. ಆದರೆ ಈ ಹೊತ್ತು ನಮ್ಮನ್ನು ರಕ್ಷಿಸಿರಿ,” ಎಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:15
16 ತಿಳಿವುಗಳ ಹೋಲಿಕೆ  

ಸಮುವೇಲನು ಮುಚ್ಚುಮರೆಯಿಲ್ಲದೆ ಎಲ್ಲವನ್ನೂ ತಿಳಿಸಿದನು. ಏಲಿ ಅದನ್ನು ಕೇಳಿ, “ಅವರೇ ಸರ್ವೇಶ್ವರ. ತಮಗೆ ಸರಿಕಂಡಂತೆ ಮಾಡಲಿ,” ಎಂದನು.


‘ನಿನ್ನಲ್ಲಿ ನನಗೆ ಇಷ್ಟವಿಲ್ಲ,’ ಎಂದು ತೋರಿದರೆ ತಮಗೆ ಸರಿಕಂಡಂತೆ ಮಾಡಲಿ. ಅವರ ಚಿತ್ತದಂತೆ ಆಗಲಿ,” ಎಂದನು.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು.


ಇಗೋ, ಈಗ ನಾವು ನಿಮ್ಮ ಕೈಯಲ್ಲಿ ಇದ್ದೇವೆ. ನಿಮಗೆ ಯಾವುದು ಒಳ್ಳೆಯದು, ನ್ಯಾಯವಾದುದು ಎಂದು ತೋರುತ್ತದೋ ಅದರಂತೆ ನಮಗೆ ಮಾಡಿ,” ಎಂದು ಉತ್ತರಕೊಟ್ಟರು.


ಹೀಗೆ ಮಾಡಿದ್ದೇ ಆದರೆ, ದೇವರು ಒಂದುವೇಳೆ ತಮ್ಮ ಮನಸ್ಸನ್ನು ಬದಲಾಯಿಸಿ, ತಮ್ಮ ಉಗ್ರಕೋಪವನ್ನು ತಡೆದಾರು, ನಾವು ನಾಶವಾಗದೆ ಉಳಿದೇವು.”


ಧೈರ್ಯದಿಂದಿರು, ನಮ್ಮ ಜನರಿಗಾಗಿ ಹಾಗು ನಮ್ಮ ದೇವರ ಪಟ್ಟಣಗಳಿಗಾಗಿ ನಮ್ಮ ಪೌರುಷವನ್ನು ತೋರಿಸೋಣ; ಸರ್ವೇಶ್ವರ ತಮಗೆ ಸರಿಕಾಣುವಂಥದ್ದನ್ನು ಮಾಡಲಿ,” ಎಂದು ಹೇಳಿ ಅವನನ್ನು ಅಮ್ಮೋನಿಯರಿಗೆ ವಿರೋಧವಾಗಿ ಕಳುಹಿಸಿದನು.


ನಿನ್ನ ಸನ್ನಿಧಿಯಿಂದ ನಾನಿನ್ನು ಬಹಿಷ್ಕೃತ ಕಾಣೆನೆಂದೂ ನಿನ್ನ ಪವಿತ್ರಾಲಯ ನಿರುತ. ಈ ಭಾಗ್ಯಗಳೆಲ್ಲ ಎನಗಿಲ್ಲವೆಂದು ಪರಿಪರಿಯಾಗಿ ಮರುಗುತಿರುವೆನಿಂದು.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಜನರ ಎಣಿಕೆ ಮಾಡಿಸಿದ ನಂತರ ದಾವೀದನನ್ನು ಮನಸ್ಸಾಕ್ಷಿ ಕಾಡತೊಡಗಿತು. ಆದುದರಿಂದ ಅವನು, “ಸರ್ವೇಶ್ವರಾ, ನಾನು ಬುದ್ಧಿಹೀನ ಕಾರ್ಯವನ್ನು ಮಾಡಿ ಪಾಪಿಯಾದೆ; ದಯವಿಟ್ಟು ನಿಮ್ಮ ದಾಸನ ಅಪರಾಧವನ್ನು ಕ್ಷಮಿಸಿ,” ಎಂದು ಪ್ರಾರ್ಥಿಸಿದನು.


ಆಗ ದಾವೀದನು ನಾತಾನನಿಗೆ, “ನಾನು ಸರ್ವೇಶ್ವರನಿಗೆ ವಿರುದ್ಧ ಪಾಪಮಾಡಿದ್ದೇನೆ,” ಎಂದು ಹೇಳಿದನು. ನಾತಾನನು ಅವನಿಗೆ, “ಸರ್ವೇಶ್ವರ ನಿನ್ನ ಪಾಪವನ್ನು ಕ್ಷಮಿಸಿದ್ದಾರೆ; ನೀನು ಸಾಯುವುದಿಲ್ಲ.


ಆಗ ಅವರು, “ನಾವು ಸರ್ವೇಶ್ವರನಾದ ನಿಮ್ಮನ್ನು ಬಿಟ್ಟು ಬಾಳ್, ಅಷ್ಟೋರೆತ್ ಎಂಬ ದೇವತೆಗಳನ್ನು ಪೂಜಿಸಿ ಪಾಪಮಾಡಿದ್ದೇವೆ. ಈಗ ಕೃಪೆಮಾಡಿ ನಮ್ಮನ್ನು ಶತ್ರುಗಳ ಕೈಯಿಂದ ಬಿಡಿಸಿರಿ; ನಾವು ಇನ್ನು ಮುಂದೆ ನಿಮ್ಮನ್ನೇ ಪೂಜಿಸಿ, ಸೇವೆಮಾಡುತ್ತೇವೆ,” ಎಂದು ಮೊರೆಯಿಟ್ಟರು.


ಅಂತೆಯೇ ಅವರು ಅಲ್ಲಿ ಕೂಡಿಬಂದು, ನೀರು ಸೇದಿ ಸರ್ವೇಶ್ವರನ ಮುಂದೆ ಹೊಯ್ದು, ಆ ದಿವಸ ಉಪವಾಸವಿದ್ದು, ದ್ರೋಹಿಗಳಾಗಿದ್ದೇವೆಂದು ಸರ್ವೇಶ್ವರನಿಗೆ ಅರಿಕೆಮಾಡಿದರು. ಸಮುವೇಲನು ಮಿಚ್ಪೆಯಲ್ಲಿ ಇಸ್ರಯೇಲರ ವ್ಯಾಜ್ಯಗಳನ್ನು ತೀರಿಸಿದನು.


ನಿನ್ನಾಶ್ರಯ ಕೋರಿದರು, ಸರ್ವೇಶ್ವರಾ, ಜನ ಇಕ್ಕಟ್ಟಿಗೆ ಸಿಕ್ಕಿದಾಗ ಪ್ರಾರ್ಥನೆ ಗೈದರವರು ನಿನ್ನ ಶಿಕ್ಷೆಗೆ ಗುರಿಯಾದಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು