ನ್ಯಾಯಸ್ಥಾಪಕರು 10:18 - ಕನ್ನಡ ಸತ್ಯವೇದವು C.L. Bible (BSI)18 ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಗಿಲ್ಯಾದಿನ ಜನರೂ ಅಧಿಪತಿಗಳೂ, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನು ಯಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡುವೆವು” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಗಿಲ್ಯಾದಿನ ಜನರೂ ಅಧಿಪತಿಗಳೂ - ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕುವವನಾವನು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡೇವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುತ್ತಿದ್ದ ಜನನಾಯಕರು, “ಅಮ್ಮೋನಿಯರ ಮೇಲೆ ಧಾಳಿಮಾಡಲು ಯಾರು ನಮ್ಮ ಮುಂದಾಳಾಗುತ್ತಾರೋ ಆ ವ್ಯಕ್ತಿಯೇ ಗಿಲ್ಯಾದ್ ಕ್ಷೇತ್ರದಲ್ಲಿ ವಾಸಮಾಡುವ ಜನರೆಲ್ಲರಿಗೂ ನಾಯಕನಾಗುತ್ತಾನೆ” ಎಂದು ಸಾರಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಗಿಲ್ಯಾದಿನ ಜನರೂ, ಪ್ರಧಾನರೂ ಒಬ್ಬರಿಗೊಬ್ಬರು, “ಯಾವನು ಅಮ್ಮೋನಿಯರ ಮೇಲೆ ಯುದ್ಧಮಾಡಲಾರಂಭಿಸುವನೋ, ಅವನು ಗಿಲ್ಯಾದಿನ ನಿವಾಸಿಗಳಿಗೆಲ್ಲಾ ತಲೆಯಾಗಿರುವನು,” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿ |