ನ್ಯಾಯಸ್ಥಾಪಕರು 10:9 - ಕನ್ನಡ ಸತ್ಯವೇದವು C.L. Bible (BSI)9 ಇದಲ್ಲದೆ ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಯಿಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಯೇಲರು ಬಹಳ ಕಷ್ಟಕ್ಕೀಡಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ, ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲರಿಗೆ ಬಹಳ ಕಷ್ಟವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಅಮ್ಮೋನಿಯರು ಯೊರ್ದನ್ ಹೊಳೆಯನ್ನು ದಾಟಿ ಯೆಹೂದ ಬೆನ್ಯಾಮೀನ್ ಎಫ್ರಾಯೀಮ್ ಕುಲಗಳೊಡನೆ ಯುದ್ಧಮಾಡಿದ್ದರಿಂದ ಇಸ್ರಾಯೇಲ್ಯರಿಗೆ ಬಹಳ ಕಷ್ಟವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಮ್ಮೋನಿಯರು ಜೋರ್ಡನ್ ನದಿಯನ್ನು ದಾಟಿ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್ ಕುಲಗಳ ಜನರೊಡನೆ ಯುದ್ಧ ಮಾಡಿದರು. ಅಮ್ಮೋನಿಯರು, ಇಸ್ರೇಲರಿಗೆ ಅನೇಕ ಕಷ್ಟಗಳನ್ನು ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅಮ್ಮೋನನ ಮಕ್ಕಳು ಯೆಹೂದ ಹಾಗೂ ಬೆನ್ಯಾಮೀನರಿಗೆ ವಿರೋಧವಾಗಿಯೂ, ಎಫ್ರಾಯೀಮರ ಮನೆಗೆ ವಿರೋಧವಾಗಿಯೂ ಯುದ್ಧಮಾಡುವುದಕ್ಕೆ ಯೊರ್ದನನ್ನು ದಾಟಿ ಬಂದರು. ಹೀಗೆ ಇಸ್ರಾಯೇಲಿಗೆ ಬಹು ಸಂಕಟವಾಯಿತು. ಅಧ್ಯಾಯವನ್ನು ನೋಡಿ |
ಆಗ ಸಮುವೇಲನು ಸೌಲನನ್ನು, “ನೀನು ನನ್ನ ವಿಶ್ರಾಂತಿಯನ್ನು ಕೆಡಿಸಿದ್ದೇಕೆ? ನನ್ನನ್ನು ಇಲ್ಲಿಗೆ ಏಕೆ ಬರಮಾಡಿದೆ?” ಎಂದು ಕೇಳಿದನು. ಅದಕ್ಕೆ ಸೌಲನು, “ನಾನು ಬಲು ಇಕ್ಕಟ್ಟಿನಲ್ಲಿ ಇದ್ದೇನೆ; ಫಿಲಿಷ್ಟಿಯರು ನನಗೆ ವಿರೋಧವಾಗಿ ಯುದ್ಧಕ್ಕೆ ಬಂದಿದ್ದಾರೆ; ದೇವರು ನನ್ನನ್ನು ಕೈಬಿಟ್ಟು ದೂರಹೋಗಿದ್ದಾರೆ; ಅವರು ನನಗೆ ಪ್ರವಾದಿಗಳಿಂದಾಗಲಿ, ಕನಸುಗಳಿಂದಾಗಲಿ ಉತ್ತರಕೊಡಲೊಲ್ಲರು. ಆದುದರಿಂದ ನಾನು ಮಾಡಬೇಕಾದುದನ್ನು ನೀನು ತಿಳಿಸುವೆಯೆಂದು ನಿನ್ನನ್ನು ಇಲ್ಲಿಗೆ ಬರಮಾಡಿದೆನು,” ಎಂದನು.