Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:1 - ಕನ್ನಡ ಸತ್ಯವೇದವು C.L. Bible (BSI)

1 ಗಿಲ್ಯಾದ್ಯನಾದ ಯೆಪ್ತಾಹನು ಒಬ್ಬ ಮಹಾಪರಾಕ್ರಮಿ. ಈತ ಗಿಲ್ಯಾದನಿಗೆ ಒಬ್ಬ ಉಪಪತ್ನಿಯಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರಮಿಯಾಗಿದ್ದನು. ಅವನು ಗಿಲ್ಯಾದನಿಂದ ಒಬ್ಬ ವೇಶ್ಯೆಗೆ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಗಿಲ್ಯಾದ್ಯನಾದ ಯೆಪ್ತಾಹನು ಮಹಾಪರಾಕ್ರವಿುಯಾಗಿದ್ದನು. ಅವನು ಗಿಲ್ಯಾದನಿಗೆ ಒಬ್ಬ ಸೂಳೆಯಲ್ಲಿ ಹುಟ್ಟಿದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಫ್ತಾಹನು ಗಿಲ್ಯಾದ್ ಕುಲದವನಾಗಿದ್ದನು. ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಯೆಫ್ತಾಹನು ಒಬ್ಬ ವೇಶ್ಯೆಯ ಮಗನಾಗಿದ್ದನು. ಅವನ ತಂದೆಯ ಹೆಸರು ಗಿಲ್ಯಾದ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಗಿಲ್ಯಾದ್ಯನಾದ ಯೆಫ್ತಾಹನು ಬಲಿಷ್ಠನಾದ ಪರಾಕ್ರಮಶಾಲಿಯಾಗಿದ್ದನು. ಅವನು ಒಬ್ಬ ವೇಶ್ಯೆಯಲ್ಲಿ ಹುಟ್ಟಿದ ಗಿಲ್ಯಾದನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:1
6 ತಿಳಿವುಗಳ ಹೋಲಿಕೆ  

ಇನ್ನೂ ಹೇಳಬೇಕೆ? ಗಿಡಿಯೋನ್, ಬಾರಾಕ್, ಸಂಸೋನ್, ಯೆಪ್ತಾಹ, ದಾವೀದ, ಸಮುವೇಲ ಇವರನ್ನೂ ಇತರ ಪ್ರವಾದಿಗಳನ್ನೂ ಕುರಿತು ಹೇಳಬೇಕಾದರೆ ನನಗೆ ಸಮಯ ಸಾಲದು.


ಸಿರಿಯಾದ ರಾಜನಿಗೆ ನಾಮಾನ್ ಎಂಬೊಬ್ಬ ಸೇನಾಪತಿಯಿದ್ದನು. ಸರ್ವೇಶ್ವರಸ್ವಾಮಿ ಇವನ ಮುಂಖಾತರ ಸಿರಿಯಾದವರಿಗೆ ಜಯವನ್ನು ಅನುಗ್ರಹಿಸಿದ್ದರು. ಆದ್ದರಿಂದ ರಾಜನು ಇವನನ್ನು ಮಹಾಪುರುಷನೆಂದೂ ಸನ್ಮಾನ್ಯನೆಂದೂ ಗೌರವಿಸುತ್ತಿದ್ದನು. ಆದರೆ ಪರಾಕ್ರಮಶಾಲಿಯಾದ ಇವನು ಭೀಕರ ಚರ್ಮರೋಗದಿಂದ ನರಳುತ್ತಿದ್ದನು.


ಸರ್ವೇಶ್ವರನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಸರ್ವೇಶ್ವರ ನಿನ್ನೊಡನೆ ಇದ್ದಾರೆ” ಎಂದನು.


ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ಗಿಲ್ಯಾದನಿಗೆ ಹೆಂಡತಿಯಲ್ಲೂ ಮಕ್ಕಳು ಹುಟ್ಟಿದರು. ಇವರು ದೊಡ್ಡವರಾದ ಮೇಲೆ ಯೆಪ್ತಾಹನಿಗೆ, “ನೀನು ಪರಸ್ತ್ರೀಯಿಂದ ಹುಟ್ಟಿದವನು; ಆದುದರಿಂದ ನಿನಗೆ ನಮ್ಮ ತಂದೆಯ ಮನೆಯಲ್ಲಿ ಬಾಧ್ಯತೆ ಸಿಕ್ಕಲಾರದು,” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಆಗ ಸರ್ವೇಶ್ವರ ಯೆರುಬ್ಬಾಳ್, ಬಾರಾಕ್, ಯೆಫ್ತಾಹ, ಸಮುವೇಲ್ ಇವರನ್ನು ಕಳುಹಿಸಿ ನಿಮ್ಮನ್ನು ಎಲ್ಲಾ ಶತ್ರುಗಳ ಕೈಯಿಂದ ತಪ್ಪಿಸಿ ಸುರಕ್ಷಿತವಾಗಿ ವಾಸಿಸುವಂತೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು