Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:18 - ಕನ್ನಡ ಸತ್ಯವೇದವು C.L. Bible (BSI)

18 ಅನಂತರ ಅವರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ನದಿಯ ಆಚೆಯಲ್ಲಿ ಇಳಿದುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲು ಇಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್, ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್‍ ದೇಶದ ಪೂರ್ವದಿಕ್ಕಿಗೆ ಬಂದು, ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳಿದುಕೊಂಡರು. ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅನಂತರ ಅವರು ಅರಣ್ಯದಲ್ಲಿ ಪ್ರಯಾಣಮಾಡಿ ಎದೋಮ್ ಮೋವಾಬ್ ದೇಶಗಳನ್ನು ಸುತ್ತಿಕೊಂಡು ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು ಅದರ ಮೇರೆಯಾಗಿರುವ ಅರ್ನೋನ್ ಹೊಳೆಯ ಆಚೆಯಲ್ಲಿ ಇಳುಕೊಂಡರು; ಮೋವಾಬ್ಯರ ಮೇರೆಯೊಳಗೆ ಕಾಲಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ತರುವಾಯ ಇಸ್ರೇಲರು ಮರುಭೂಮಿಯಲ್ಲಿ ಪ್ರಯಾಣ ಮಾಡಿ ಎದೋಮ್ ಮತ್ತು ಮೋವಾಬ್ ದೇಶಗಳ ಮೇರೆಗಳನ್ನು ಸುತ್ತಿ ಬಂದರು. ಇಸ್ರೇಲರು ಮೋವಾಬ್ ದೇಶದ ಪೂರ್ವದಿಕ್ಕಿಗೆ ಪ್ರಯಾಣಮಾಡಿ ಅರ್ನೋನ್ ನದಿಯ ಆಚೆಯ ದಡದಲ್ಲಿ ಇಳಿದುಕೊಂಡರು. ಅವರು ಮೋವಾಬ್ ದೇಶದ ಮೇರೆಯನ್ನು ದಾಟಲಿಲ್ಲ. (ಅರ್ನೋನ್ ನದಿಯು ಮೋವಾಬ್ ದೇಶದ ಮೇರೆಯಾಗಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ಮರುಭೂಮಿಯಲ್ಲಿ ನಡೆದು, ಎದೋಮ್ ದೇಶವನ್ನೂ, ಮೋವಾಬ್ ದೇಶವನ್ನೂ ಸುತ್ತಿಕೊಂಡು ಹೋಗಿ, ಮೋವಾಬ್ ದೇಶದ ಪೂರ್ವದಿಕ್ಕಿಗೆ ಬಂದು, ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ, ಮೋವಾಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:18
8 ತಿಳಿವುಗಳ ಹೋಲಿಕೆ  

ಬಿಳಾಮನು ಬಂದ ಸಮಾಚಾರ ಬಾಲಾಕನಿಗೆ ಮುಟ್ಟಿತು. ಅವನು ಬಿಳಾಮನನ್ನು ಬರಮಾಡಿಕೊಳ್ಳಲು ತನ್ನ ನಾಡಗಡಿಯಾದ ಅರ್ನೋನ್ ಹೊಳೆಯ ತೀರದಲ್ಲಿರುವ ಮೋವಾಬ್ಯರ ಪಟ್ಟಣಕ್ಕೆ ಹೊರಟುಬಂದನು.


ಇಸ್ರಯೇಲ್ ಇಡೀ ಸಮಾಜದವರು ಕಾದೇಶಿನಿಂದ ಹೊರಟು ‘ಹೋರ್’ ಎಂಬ ಬೆಟ್ಟಕ್ಕೆ ಬಂದರು.


ಆಗ ಸರ್ವೇಶ್ವರ ನನಗೆ, ‘ನೀವು ಮೋವಾಬ್ಯರಿಗೆ ವೈರಿಗಳಾಗಿ ನಡೆದು ಅವರೊಡನೆ ಯುದ್ಧಮಾಡಬಾರದು. ಲೋಟನ ವಂಶದವರಾದ ಅವರಿಗೆ ನಾನು ಆರ್ ಎಂಬ ಪ್ರದೇಶವನ್ನು ಸ್ವದೇಶವಾಗುವುದಕ್ಕೆ ಕೊಟ್ಟಿರುವುದರಿಂದ ಅದರಲ್ಲಿ ನಿಮಗೆ ಸೊತ್ತನ್ನು ಕೊಡುವುದಿಲ್ಲ. ನೀವು ಎದ್ದು ಜೆರೆದ್ ಹಳ್ಳವನ್ನು ದಾಟಬೇಕು.’ ಎಂದು ಆಜ್ಞಾಪಿಸಿದರು.


‘ನೀವು ಈಗ ಮೋವಾಬ್ಯರ ಪ್ರಾಂತ್ಯವಾಗಿರುವ ಆರ್ ಎಂಬ ಪ್ರದೇಶವನ್ನು ದಾಟುವಿರಿ.


ಈಗ ನೀವು ಹೊರಟು ಅರ್ನೋನ್ ಹಳ್ಳವನ್ನು ದಾಟಿರಿ. ಅಮೋರಿಯನಾಗಿರುವ ಹೆಷ್ಬೋನಿನ ಅರಸ ಸೀಹೋನನು ನಿಮ್ಮಿಂದ ಸೋತುಹೋಗಿ ಅವನ ರಾಜ್ಯ ನಿಮಗೇ ವಶವಾಗಬೇಕೆಂದು ನಿಮಗೆ ಅನುಗ್ರಹಿಸಿದ್ದೇನೆ. ಅವನೊಡನೆ ಯುದ್ಧಮಾಡಿ ಆ ನಾಡನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಪ್ರಾರಂಭಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು