Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 11:40 - ಕನ್ನಡ ಸತ್ಯವೇದವು C.L. Bible (BSI)

40 ಇಸ್ರಯೇಲರ ಹೆಣ್ಣು ಮಕ್ಕಳು ಪ್ರತಿ ವರ್ಷ ನಾಲ್ಕುದಿವಸ ಗಿಲ್ಯಾದನಾದ ಯೆಪ್ತಾಹನ ಮಗಳ ಸ್ಮರಣೆಮಾಡುತ್ತಾರೆ. ಅವರಲ್ಲಿ ಇದೊಂದು ಪದ್ಧತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರ್ಷದಲ್ಲಿಯೂ ನಾಲ್ಕು ದಿನ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ಇಸ್ರಾಯೇಲ್ಯರ ಹೆಣ್ಣುಮಕ್ಕಳು ಪ್ರತಿವರುಷದಲ್ಲಿಯೂ ನಾಲ್ಕು ದಿವಸ ಗಿಲ್ಯಾದ್ಯನಾದ ಯೆಪ್ತಾಹನ ಮಗಳನ್ನು ವರ್ಣಿಸುತ್ತಾರೆ. ಇದು ಅವರಲ್ಲಿ ಒಂದು ಪದ್ಧತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಪ್ರತಿವರ್ಷ ಇಸ್ರೇಲಿನ ಹೆಂಗಸರು ಗಿಲ್ಯಾದಿನ ಯೆಫ್ತಾಹನ ಮಗಳನ್ನು ಸ್ಮರಿಸುತ್ತಾರೆ. ಇಸ್ರೇಲಿನ ಹೆಂಗಸರು ಯೆಫ್ತಾಹನ ಮಗಳಿಗಾಗಿ ಪ್ರತಿವರ್ಷ ನಾಲ್ಕು ದಿನ ಅಳುತ್ತಾರೆ. ಇದು ಇಸ್ರೇಲಿನಲ್ಲಿ ಒಂದು ಪದ್ಧತಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಹೀಗೆ ವರ್ಷಕ್ಕೆ ನಾಲ್ಕು ದಿವಸ ಇಸ್ರಾಯೇಲಿನ ಪುತ್ರಿಯರು ಹೋಗಿ, ಗಿಲ್ಯಾದ್ಯನಾದ ಯೆಫ್ತಾಹನ ಮಗಳಿಗಾಗಿ ಗೋಳಾಡುವುದು ಇಸ್ರಾಯೇಲಿನಲ್ಲಿ ಪದ್ಧತಿ ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 11:40
6 ತಿಳಿವುಗಳ ಹೋಲಿಕೆ  

ಸೊಲೊಮೋನನು ಸರ್ವೇಶ್ವರನ ಆಲಯದ ಮುಂದೆ ಸರ್ವೇಶ್ವರನಿಗಾಗಿ ತಾನು ಕಟ್ಟಿಸಿದ ಬಲಿಪೀಠದ ಮೇಲೆ ವರ್ಷಕ್ಕೆ ಮೂರು ಸಾರಿ ದಹನಬಲಿ ಹಾಗು ಶಾಂತಿಸಮಾಧಾನಬಲಿಗಳನ್ನು ಸಮರ್ಪಿಸಿ ಧೂಪಾರತಿ ಎತ್ತುತ್ತಿದ್ದನು. ಹೀಗೆ ಅವನು ಮಹಾದೇವಾಲಯವನ್ನು ಕಟ್ಟಿಸಿಮುಗಿಸಿದನು.


ಸೇದುವ ಬಾವಿಗಳ ಬಳಿ ಕುಳಿತು ಕೊಳ್ಳೆಹಂಚಿಕೊಳ್ಳುವವರ ಧ್ವನಿಯನಾಲಿಸು! ವರ್ಣಿಸುತಿಹರವರು ಸರ್ವೇಶ್ವರ ಸಾಧಿಸಿದ ನೀತಿಯನು, ತನ್ನ ಪ್ರಜೆ ಇಸ್ರಯೇಲ್ ಊರುಗಳಲ್ಲಾತನು ಸ್ಥಾಪಿಸಿದ ನ್ಯಾಯವನು.


ಎರಡು ತಿಂಗಳು ಕಳೆದ ನಂತರ ಆಕೆ ಮರಳಿ ತಂದೆಯ ಹತ್ತಿರ ಬಂದಳು. ಅವನು ತನ್ನ ಹರಕೆಯನ್ನು ತೀರಿಸಿದನು. ಆಕೆ ಕನ್ಯೆಯಾಗಿಯೇ ಸತ್ತಳು.


ಎಫ್ರಯಿಮ್ಯರು ಒಟ್ಟುಗೂಡಿ ಜೋರ್ಡನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋದರು. ಅವನಿಗೆ, “ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಏಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ,” ಎಂದರು.


ಯೆರೆಮೀಯನು ಯೋಷೀಯನನ್ನು ಕುರಿತು ಶೋಕಗೀತೆಯನ್ನು ರಚಿಸಿದನು. ಎಲ್ಲ ಗಾಯಕರೂ ಗಾಯಕಿಯರೂ ಅವನನ್ನು ಇಂದಿನವರೆಗು ತಮ್ಮ ಶೋಕಗೀತೆಗಳಲ್ಲಿ ವರ್ಣಿಸುತ್ತಿರುತ್ತಾರೆ. ಆ ಗೀತೆಗಳನ್ನು ಹಾಡುವುದು ಇಸ್ರಯೇಲರಲ್ಲಿ ಒಂದು ಪದ್ಧತಿಯಾಗಿದೆ. ಅವು ಶೋಕಗೀತೆ ಗ್ರಂಥದಲ್ಲಿ ಲಿಖಿತವಾಗಿವೆ.


ಅವುಗಳಿಗೆ ಸಂಬಂಧಪಟ್ಟ ಶಾಸನದ ಪ್ರಕಾರ, ನಿಯಮಿತ ಕಾಲದಲ್ಲಿ ಆಚರಿಸುವುದು ತಮ್ಮಲ್ಲಿಯೂ ತಮ್ಮ ಸಂತಾನದವರಲ್ಲಿಯೂ ತಮ್ಮೊಂದಿಗೆ ಸೇರಿಕೊಳ್ಳುವವರಲ್ಲಿಯೂ ಮೀರಕೂಡದ ಪದ್ಧತಿನಿಯಮಗಳಾಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು