ನ್ಯಾಯಸ್ಥಾಪಕರು 11:8 - ಕನ್ನಡ ಸತ್ಯವೇದವು C.L. Bible (BSI)8 ಅವರು, “ಆದುದರಿಂದಲೇ ಈಗ ಪುನಃ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೆ ಶಿರಸ್ಸಾಗಿರುವೆ,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಅವರು, “ಆದುದರಿಂದಲೇ ಈಗ ತಿರುಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವುದಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ನಾಯಕನಾಗಿರುವಿ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅವರು - ಆದದರಿಂದಲೇ ಈಗ ತಿರಿಗಿ ನಿನ್ನ ಬಳಿಗೆ ಬಂದಿದ್ದೇವೆ; ನಮ್ಮ ಸಂಗಡ ಬಂದು ಅಮ್ಮೋನಿಯರೊಡನೆ ಯುದ್ಧಮಾಡುವಿಯಾದರೆ ಗಿಲ್ಯಾದಿನವರಿಗೆಲ್ಲಾ ನೀನೇ ಶಿರಸ್ಸಾಗಿರುವಿ ಎಂದು ಹೇಳಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ಕಷ್ಟ ಬಂದಿರುವುದರಿಂದಲೇ ನಿನ್ನಲ್ಲಿಗೆ ಬಂದಿದ್ದೇವೆ. ದಯವಿಟ್ಟು ನಮ್ಮೊಡನೆ ಬಾ; ಅಮ್ಮೋನಿಯರ ವಿರುದ್ಧ ಯುದ್ಧ ಮಾಡು. ಗಿಲ್ಯಾದಿನಲ್ಲಿ ವಾಸಮಾಡುತ್ತಿರುವ ಜನರೆಲ್ಲರಿಗೂ ನೀನು ನಾಯಕನಾಗುವೆ” ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು. ಅಧ್ಯಾಯವನ್ನು ನೋಡಿ |