Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:4 - ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಗಿಲ್ಯಾದಿನವರೆಲ್ಲರನ್ನು ಕೂಡಿಸಿ, ಎಫ್ರಯಿಮರಿಗೆ ವಿರುದ್ಧ ಯುದ್ಧಕ್ಕೆ ನಿಂತನು. “ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆ ಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿಬಂದಿರಿ” ಎಂದು ಎಫ್ರಯಿಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಗಿಲ್ಯಾದಿನವರೆಲ್ಲರನ್ನೂ ಸೇರಿಸಿಕೊಂಡು ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಆಗ ಎಫ್ರಾಯೀಮ್ಯರು “ಗಿಲ್ಯಾದ್ಯರಾದ ನೀವು, ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿದ್ದೀರಿ” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಕೋಪಗೊಂಡು ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಗಿಲ್ಯಾದಿನವರೆಲ್ಲರನ್ನೂ ಕೂಡಿಸಿ ಎಫ್ರಾಯೀಮ್ಯರಿಗೆ ವಿರೋಧವಾಗಿ ಯುದ್ಧಕ್ಕೆ ನಿಂತನು. ಗಿಲ್ಯಾದ್ಯರಾದ ನೀವು ನಮ್ಮ ಮತ್ತು ಮನಸ್ಸೆಯವರ ಮಧ್ಯದಲ್ಲಿದ್ದು ಸ್ವಕುಲವನ್ನು ಬಿಟ್ಟು ಇಲ್ಲಿಗೆ ಓಡಿ ಬಂದಿರಿ ಎಂದು ಎಫ್ರಾಯೀಮ್ಯರು ಅಂದದರಿಂದ ಗಿಲ್ಯಾದ್ಯರು [ಕೋಪಗೊಂಡು] ಅವರನ್ನು ಪೂರ್ಣವಾಗಿ ಸೋಲಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆಗ ಯೆಫ್ತಾಹನು ಗಿಲ್ಯಾದಿನ ಜನರನ್ನು ಒಂದೆಡೆ ಸೇರಿಸಿದನು. ಅವರು ಎಫ್ರಾಯೀಮ್ಯರ ವಿರುದ್ಧ ಯುದ್ಧ ಮಾಡಿದರು. ಏಕೆಂದರೆ ಎಫ್ರಾಯೀಮ್ಯರು ಗಿಲ್ಯಾದ್ಯರನ್ನು ಅವಮಾನ ಮಾಡಿದ್ದರು. ಅವರು, “ಗಿಲ್ಯಾದಿನವರಾದ ನೀವು ಎಫ್ರಾಯೀಮ್ಯರಲ್ಲಿ ಬದುಕಿ ಉಳಿದವರೇ ಹೊರತು ಬೇರೆಯವರಲ್ಲ. ನಿಮಗೆ ನಿಮ್ಮ ಸ್ವಂತ ಪ್ರದೇಶವೂ ಇಲ್ಲ. ನಿಮ್ಮ ಒಂದು ಭಾಗವು ಎಫ್ರಾಯೀಮ್ ಕುಲಕ್ಕೆ ಸೇರಿದೆ; ಇನ್ನೊಂದು ಭಾಗವು ಮನಸ್ಸೆ ಕುಲಕ್ಕೆ ಸೇರಿದೆ” ಎಂದಿದ್ದರು. ಅವರು ಹೀಗೆ ಅಂದದ್ದರಿಂದ ಗಿಲ್ಯಾದಿನ ಜನರು ಎಫ್ರಾಯೀಮ್ ಜನರನ್ನು ಸೋಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಫ್ತಾಹನು ಗಿಲ್ಯಾದ್ ಜನರೆಲ್ಲರನ್ನು ಕೂಡಿಸಿ, ಎಫ್ರಾಯೀಮ್ಯರ ಸಂಗಡ ಯುದ್ಧಮಾಡಿದನು. ಏಕೆಂದರೆ, “ಎಫ್ರಾಯೀಮ್ಯರನ್ನು ಮನಸ್ಸೆಯವರ ಮಧ್ಯದಲ್ಲಿದ್ದ ಗಿಲ್ಯಾದ್ಯರಾದ ನೀವು ಸ್ವಕುಲವನ್ನು ಬಿಟ್ಟು ತಪ್ಪಿಸಿಕೊಂಡವರಾಗಿದ್ದೀರಿ,” ಎಂದು ಎಫ್ರಾಯೀಮ್ಯರು ಹೇಳಿದ್ದರಿಂದ ಗಿಲ್ಯಾದ್ಯರು ಎಫ್ರಾಯೀಮ್ಯರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:4
11 ತಿಳಿವುಗಳ ಹೋಲಿಕೆ  

ನಾಬಾಲನು ಅವರಿಗೆ, “ದಾವೀದನಾರು? ಜೆಸ್ಸೆಯನ ಮಗನಾರು? ಯಜಮಾನರನ್ನು ಬಿಟ್ಟು ಓಡಿಹೋದ ಗುಲಾಮರು ಈಗಿನ ಕಾಲದಲ್ಲಿ ಎಷ್ಟುಮಂದಿಯಿಲ್ಲ.


ಮೃದುವಾದ ಮಾತು ಸಿಟ್ಟನ್ನಾರಿಸುತ್ತದೆ; ಬಿರುಸಾದ ನುಡಿ ಸಿಟ್ಟನ್ನೇರಿಸುತ್ತದೆ.


ಮಾತಿನ ದೋಷದಿಂದ ಕೆಡುಕನು ಬೋನಿಗೆ ಬೀಳುವನು; ನೀತಿವಂತನು ಆಪತ್ತಿನಿಂದ ತಪ್ಪಿಸಿಕೊಳ್ಳುವನು.


ಎಫ್ರಯಿಮರು ಹೋದರು ಧನುರ್ಧಾರಿಗಳಾಗಿ I ಯುದ್ಧವೇಳೆಯಲಿ ಓಡೋಡಿದರು ಹಿಂದಿರುಗಿ II


“ನಮ್ಮ ದೇವರೇ ಆಲಿಸಿ: ಅವರು ನಮ್ಮನ್ನು ಎಷ್ಟು ಹೀಯಾಳಿಸುತ್ತಾರೆ! ಈ ನಿಂದೆಯನ್ನು ಅವರ ತಲೆಯ ಮೇಲೆಯೇ ಬರಮಾಡಿ. ಅವರು ದೇಶಭ್ರಷ್ಟರಾಗಿ ಸೂರೆಹೋಗುವಂತೆ ಮಾಡಿ.


ಅವರು ಅವನಿಗೆ, “ಹಾಗೆಯೇ ಮಾಡುತ್ತೇವೆ; ಉಭಯತ್ರರ ಮಾತುಗಳಿಗೆ ಸರ್ವೇಶ್ವರನೇ ಸಾಕ್ಷಿ,” ಎಂದು ಉತ್ತರಕೊಟ್ಟರು.


ನೀವು ಸಹಾಯ ಮಾಡುವುದಿಲ್ಲ ಎಂದು ತಿಳಿದು ಪ್ರಾಣವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆ; ಸರ್ವೇಶ್ವರ ಅವರನ್ನು ನನ್ನ ಕೈಗೆ ಒಪ್ಪಿಸಿದರು. ಹೀಗಿರಲು, ನೀವು ಈಗ ಬಂದು ನನ್ನೊಡನೆ ಕಲಹಮಾಡುವುದೇಕೆ?” ಎಂದು ಉತ್ತರಕೊಟ್ಟನು.


ಇದಲ್ಲದೆ, ಅವರು ತಪ್ಪಿಸಿಕೊಂಡು ಹೋಗದಂತೆ ಎಫ್ರಯಿಮಿಗೆ ಹೋಗುವ ಜೋರ್ಡನಿನ ಹಾಯಗಡಗಳನ್ನೆಲ್ಲಾ ಹಿಡಿದರು. ತಪ್ಪಿಸಿಕೊಂಡ ಎಫ್ರಯಿಮ್ಯರಲ್ಲಿ ಒಬ್ಬನು ಅಲ್ಲಿಗೆ ಬಂದು ನನ್ನನ್ನು ದಾಟಗೊಡಿರಿ ಎಂದು ಅವರನ್ನು ಕೇಳಿದಾಗ ಅವರು, “ನೀನು ಎಫ್ರಯಿಮನೋ?’ ಎಂದು ಕೇಳುತ್ತಿದ್ದರು.


ಗಿಲ್ಯಾದಿನ ಪ್ರವಾಸಿಗಳಲ್ಲಿ ತಿಷ್ಬೀಯನಾದ ಎಲೀಯ ಎಂಬವನು ಅಹಾಬನಿಗೆ, “ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಯೇಲ್ ದೇವರಾದ ಸರ್ವೇಶ್ವರನಾಣೆ, ನಾನು ಸೂಚಿಸಿದ ಹೊರತು, ಇಂದಿನಿಂದ ಕೆಲವು ವರ್ಷಗಳವರೆಗೆ ಮಳೆಯಾಗಲಿ, ಮಂಜಾಗಲಿ ಬೀಳುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು