Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:7 - ಕನ್ನಡ ಸತ್ಯವೇದವು C.L. Bible (BSI)

7 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಯೇಲರನ್ನು ಆರು ವರ್ಷ ಪಾಲಿಸಿದನಂತರ ಸತ್ತನು. ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರ್ಷ ಪಾಲಿಸಿದ ನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಒಂದು ಪಟ್ಟಣದಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಗಿಲ್ಯಾದ್ಯನಾದ ಯೆಪ್ತಾಹನು ಇಸ್ರಾಯೇಲ್ಯರನ್ನು ಆರು ವರುಷ ಪಾಲಿಸಿದನಂತರ ಸತ್ತನು; ಅವನ ಶವವನ್ನು ಗಿಲ್ಯಾದಿನ ಪಟ್ಟಣಗಳಲ್ಲೊಂದರಲ್ಲಿ ಸಮಾಧಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಫ್ತಾಹನು ಆರು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಆಮೇಲೆ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವರು ಅವನ ಶವವನ್ನು ಗಿಲ್ಯಾದಿನ ಪಟ್ಟಣದಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಯೆಫ್ತಾಹನು ಇಸ್ರಾಯೇಲರಿಗೆ ಆರು ವರ್ಷ ನ್ಯಾಯತೀರಿಸಿದನು. ಅನಂತರ ಗಿಲ್ಯಾದ್ಯನಾದ ಯೆಫ್ತಾಹನು ಮರಣಹೊಂದಿದನು. ಅವನ ಶವವನ್ನು ಗಿಲ್ಯಾದ್ ಪಟ್ಟಣಗಳ ಒಂದರಲ್ಲಿ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:7
3 ತಿಳಿವುಗಳ ಹೋಲಿಕೆ  

ಅವನು, “ಇಲ್ಲ” ಎಂದರೆ ಅವನಿಗೆ, “ನೀನು ‘ಷಿಬ್ಬೋಲೆತ್’ ಅನ್ನು” ಎಂದು ಹೇಳುತ್ತಿದ್ದರು. ಹಾಗೆ ಉಚ್ಚಸರಿಸಲಿಕ್ಕೆ ಬಾರದೆ ಅವನು “ಸಿಬ್ಬೋಲೆತ್” ಅನ್ನುತ್ತಿದ್ದನು. ಕೂಡಲೇ ಅವರು ಅವನನ್ನು ಹಿಡಿದು ಜೋರ್ಡನಿನ ಹಾಯಗಡಗಳ ಬಳಿಯಲ್ಲೇ ಕೊಂದುಹಾಕುತ್ತಿದ್ದರು. ಹೀಗೆ ಆ ಕಾಲದಲ್ಲಿ ಎಫ್ರಯಿಮರಲ್ಲಿ ನಾಲ್ವತ್ತೆರಡು ಸಾವಿರ ಜನರು ನಾಶವಾದರು.


ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.


ಗಿಲ್ಯಾದಿನ ಜನರು ಹಾಗು ಅಧಿಪತಿಗಳು, “ನಮ್ಮಲ್ಲಿ ಅಮ್ಮೋನಿಯರೊಡನೆ ಯುದ್ಧಕ್ಕೆ ಕೈಹಾಕಬಲ್ಲವನಾರು? ಅಂಥವನನ್ನು ಗಿಲ್ಯಾದಿನವರೆಲ್ಲರ ಮೇಲೆ ನಾಯಕನನ್ನಾಗಿ ಮಾಡಬಹುದಲ್ಲಾ,” ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು