Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:9 - ಕನ್ನಡ ಸತ್ಯವೇದವು C.L. Bible (BSI)

9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡುಮಕ್ಕಳಿಗಾಗಿ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ, ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು. ತನ್ನ ಹೆಣ್ಣುಮಕ್ಕಳನ್ನು ಬೇರೆಯವರಿಗೆ ಕೊಟ್ಟು, ಗಂಡುಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನಿಗೆ ಮೂವತ್ತು ಮಂದಿ ಗಂಡುಮಕ್ಕಳೂ ಮೂವತ್ತು ಮಂದಿ ಹೆಣ್ಣುಮಕ್ಕಳೂ ಇದ್ದರು; ತನ್ನ ಹೆಣ್ಣು ಮಕ್ಕಳನ್ನು ಬೇರೆಯವರಿಗೆ ಕೊಟ್ಟು ಗಂಡು ಮಕ್ಕಳಿಗೋಸ್ಕರ ಹೊರಗಿನ ಮೂವತ್ತು ಮಂದಿ ಕನ್ಯೆಯರನ್ನು ತಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಬ್ಜಾನನಿಗೆ ಮೂವತ್ತು ಗಂಡುಮಕ್ಕಳು ಮತ್ತು ಮೂವತ್ತು ಹೆಣ್ಣುಮಕ್ಕಳು ಇದ್ದರು. ಅವನು ತನ್ನ ಮೂವತ್ತು ಹೆಣ್ಣುಮಕ್ಕಳಿಗೆ ತನ್ನ ರಕ್ತಸಂಬಂಧಿ ಅಲ್ಲದವರೊಂದಿಗೆ ಮದುವೆಯಾಗಬೇಕೆಂದು ಹೇಳಿದನು. ಅವನು ತನ್ನ ಸಂಬಂಧಿಗಳಲ್ಲದ ಮೂವತ್ತು ಕನ್ಯೆಯರನ್ನು ಹುಡುಕಿ ತನ್ನ ಗಂಡುಮಕ್ಕಳಿಗೆ ಅವರನ್ನು ಮದುವೆಮಾಡಿಸಿದನು. ಇಬ್ಜಾನನು ಏಳು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನಿಗೆ ಮೂವತ್ತು ಮಂದಿ ಪುತ್ರರು, ಮೂವತ್ತು ಮಂದಿ ಪುತ್ರಿಯರು ಇದ್ದರು. ಪುತ್ರಿಯರನ್ನು ಹೊರಗೆ ಮದುವೆ ಮಾಡಿಕೊಟ್ಟನು; ಹೊರಗಿನಿಂದ ಮೂವತ್ತು ಮಂದಿ ಕನ್ಯೆಯರನ್ನು ತನ್ನ ಪುತ್ರರಿಗೆ ತೆಗೆದುಕೊಂಡನು. ಅವನು ಇಸ್ರಾಯೇಲಿಗೆ ಏಳು ವರ್ಷ ನ್ಯಾಯತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:9
6 ತಿಳಿವುಗಳ ಹೋಲಿಕೆ  

ಇವನಿಗೆ ನಾಲ್ವತ್ತು ಮಂದಿ ಮಕ್ಕಳೂ ಮೂವತ್ತು ಮಂದಿ ಮೊಮ್ಮಕ್ಕಳೂ ಇದ್ದರು. ಇವರೆಲ್ಲರಿಗೆ ಸವಾರಿ ಮಾಡುವುದಕ್ಕಾಗಿ ಎಪ್ಪತ್ತು ಹೇಸರಕತ್ತೆಗಳಿದ್ದವು. ಪಿರಾತೋನಿನವನೂ ಹಿಲ್ಲೇಲನ ಮಗನೂ ಆದ ಅಬ್ದೋನನು ಇಸ್ರಯೇಲರನ್ನು ಎಂಟು ವರ್ಷ ಪಾಲಿಸಿದ ನಂತರ ಮರಣಹೊಂದಿದನು.


ಇವನಿಗೆ ಮೂವತ್ತು ಮಂದಿ ಮಕ್ಕಳಿದ್ದರು. ಇವರಿಗೆ ಮೂವತ್ತು ಸವಾರಿ ಕತ್ತೆಗಳೂ ಗಿಲ್ಯಾದ್ ದೇಶದಲ್ಲಿ ಮೂವತ್ತು ಊರುಗಳೂ ಇದ್ದವು. ಅವುಗಳಿಗೆ ಇಂದಿನವರೆಗೂ ಯಾಯೀರನ ಗ್ರಾಮಗಳೆಂದು ಹೆಸರಿದೆ.


ಯೆಪ್ತಾಹನ ತರುವಾಯ ಬೆತ್ಲೆಹೇಮಿನವನಾದ ಇಬ್ಚಾನನು ಇಸ್ರಯೇಲರ ನ್ಯಾಯಸ್ಥಾಪಕನಾದ.


ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು.


ಪ್ರಭುವಿನಿಂದ ಬಂದ ಸೊತ್ತು - ಪುತ್ರಸಂತಾನ I ಕರುಳ ಕುಡಿಯು ಆತ ನೀಡುವ ಬಹುಮಾನ II


ಸಂಸಾರಿಗಳಾಗಿ ಗಂಡು ಹೆಣ್ಣು ಮಕ್ಕಳನ್ನು ಪಡೆಯಿರಿ. ನಿಮ್ಮ ಗಂಡುಮಕ್ಕಳಿಗೆ ಹೆಣ್ಣುಗಳನ್ನು ತೆಗೆದುಕೊಳ್ಳಿ. ನಿಮ್ಮ ಹೆಣ್ಣುಗಳನ್ನು ಗಂಡುಗಳಿಗೆ ಕೊಡಿ. ಅವರೂ ಗಂಡುಹೆಣ್ಣು ಮಕ್ಕಳನ್ನು ಪಡೆಯಲಿ. ನೀವು ಇರುವಲ್ಲಿಯೇ ವೃದ್ಧಿಯಾಗಿರಿ, ಕಡಿಮೆಯಾಗದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು