Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:12 - ಕನ್ನಡ ಸತ್ಯವೇದವು C.L. Bible (BSI)

12 “ಹೌದು, ನಾನೇ,” ಎಂದನು. ಆಗ ಮಾನೋಹನು, “ನೀವು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗಾಗಿ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆಗ ಮಾನೋಹನು, “ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ಬೆಳೆಸಬೇಕು” ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವನು - ಹೌದು, ನಾನೇ ಅಂದನು. ಆಗ ಮಾನೋಹನು - ನೀನು ಹೇಳಿದ್ದು ನೆರವೇರಿದಾಗ ನಾವು ಆ ಮಗುವಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಮಾನೋಹನು, “ನೀನು ಹೇಳಿದ್ದು ನೆರವೇರುವುದೆಂದು ನಾನು ನಂಬುತ್ತೇನೆ. ಆ ಮಗುವಿಗೋಸ್ಕರ ನಾವು ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಮಾನೋಹನು, “ನೀನು ಹೇಳಿದ ಮಾತುಗಳು ನೆರವೇರುವಾಗ, ನಾವು ಆ ಕೂಸಿಗೋಸ್ಕರ ಮಾಡತಕ್ಕದ್ದೇನು? ಅವನನ್ನು ಹೇಗೆ ನಡಿಸತಕ್ಕದ್ದು?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:12
7 ತಿಳಿವುಗಳ ಹೋಲಿಕೆ  

ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ತಂದೆ ನನಗೆ ಹೀಗೆಂದು ಬೋಧನೆ ಮಾಡಿದ: “ನನ್ನ ಮಾತುಗಳು ಭದ್ರವಾಗಿರಲಿ ನಿನ್ನ ಮನದಲ್ಲಿ; ನನ್ನ ಆಜ್ಞೆಗಳನ್ನು ಕೈಗೊಂಡು ಬಾಳು ಸುಖದಲ್ಲಿ.


ಅವನು ತನ್ನ ಪುತ್ರಪೌತ್ರರಿಗೆ, ‘ನೀವು ನ್ಯಾಯನೀತಿಯನ್ನು ಪಾಲಿಸುತ್ತಾ ಸರ್ವೇಶ್ವರ ಸ್ವಾಮಿಯ ಮಾರ್ಗದಲ್ಲೇ ನಡೆಯಬೇಕು; ಹಾಗೆ ಮಾಡಿದರೆ ವಾಗ್ದಾನ ಮಾಡಿದುದನ್ನೆಲ್ಲ ಈಡೇರಿಸುವರು,’ ಎಂದು ಬೋಧಿಸಲೆಂದೇ ನಾನು ಅವನನ್ನು ಆರಿಸಿಕೊಂಡಿದ್ದೇನೆ".


ಅವನೆದ್ದು ಹೆಂಡತಿಯೊಡನೆ ಬಂದು ಆ ಪುರುಷನಿಗೆ, “ಮೊನ್ನೆ ಈಕೆಯೊಡನೆ ಮಾತಾಡಿದವರು ನೀವೋ,” ಎಂದು ಕೇಳಲು ಅವನು,


ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ;


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು