Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:14 - ಕನ್ನಡ ಸತ್ಯವೇದವು C.L. Bible (BSI)

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಗೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಕೊಳ್ಳಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅವಳು ನಿಷಿದ್ಧವಾದ ಯಾವ ಆಹಾರವನ್ನೂ ತಿನ್ನಬಾರದು. ಹೀಗೆ ನಾನು ಅವಳಿಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಬೇಕು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದ್ರಾಕ್ಷಿ ಗಿಡದಲ್ಲಿ ಹುಟ್ಟುವ ಒಂದನ್ನೂ ತಿನ್ನದೆ, ದ್ರಾಕ್ಷಾರಸವನ್ನೂ, ಮದ್ಯವನ್ನೂ ಕುಡಿಯದೆ, ಅಶುಚಿಯಾದ ಒಂದನ್ನೂ ತಿನ್ನದೆ ಇದ್ದು, ನಾನು ಅವಳಿಗೆ ಆಜ್ಞಾಪಿಸಿದ್ದೆಲ್ಲಾ ಕೈಗೊಳ್ಳಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:14
10 ತಿಳಿವುಗಳ ಹೋಲಿಕೆ  

ತಾಯಿ ಸೇವಕರಿಗೆ, “ಆತ ಹೇಳಿದಂತೆ ಮಾಡಿ,” ಎಂದು ತಿಳಿಸಿದರು.


ನಾವು ನಿಮಗಿತ್ತ ಆಜ್ಞೆಗಳನ್ನು ಪಾಲಿಸಿಕೊಂಡು ಬರುತ್ತಿದ್ದೀರಿ; ಇನ್ನು ಮುಂದೆಯೂ ಪಾಲಿಸುತ್ತೀರಿ ಎಂದು ನಿಮ್ಮ ವಿಷಯವಾಗಿ ಪ್ರಭುವಿನಲ್ಲಿ ನಮಗೆ ಭರವಸೆಯಿದೆ.


ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ಅಂಥವನು ವ್ರತ ಕೈಗೊಂಡು ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಬಳ್ಳಿಯಿಂದ ಉತ್ಪನ್ನವಾದ ಹೀಚನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.


ಅದಕ್ಕೆ ಅವರು, “ನಾವು ದ್ರಾಕ್ಷಾರಸವನ್ನು ಕುಡಿಯುವುದಿಲ್ಲ. ನಮ್ಮ ಪೂರ್ವಜನಾದ ರೇಕಾಬನ ಮಗ ಯೋನಾದಾಬನು ನಮಗೆ, ‘ನೀವಾಗಲಿ ನಿಮ್ಮ ಸಂತಾನದವರಾಗಲಿ ಯುಗಯುಗಾಂತರಕ್ಕೂ ದ್ರಾಕ್ಷಾರಸವನ್ನು ಕುಡಿಯಲೇಬಾರದು.


“ನೀನು ಇಸ್ರಯೇಲರಿಗೆ ಆಜ್ಞಾಪಿಸಬೇಕಾದುದು ಇದು - ಯಾವ ಗಂಡಸೇ ಆಗಲಿ, ಹೆಂಗಸೇ ಆಗಲಿ ನಾಜೀರರ ವ್ರತವನ್ನು ಅಂದರೆ ಸರ್ವೇಶ್ವರನಿಗೆ ತನ್ನನ್ನೇ ಪ್ರತಿಷ್ಠಿಸಿಕೊಳ್ಳುವ ವಿಶೇಷ ವ್ರತವನ್ನು ಕೈಗೊಂಡಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು