ನ್ಯಾಯಸ್ಥಾಪಕರು 13:20 - ಕನ್ನಡ ಸತ್ಯವೇದವು C.L. Bible (BSI)20 ಅದೇನೆಂದರೆ ಬಲಿಪೀಠದಿಂದ ಆಕಾಶಕ್ಕೆ ಹೋಗುತ್ತಿದ್ದ ಅಗ್ನಿಜ್ವಾಲೆಯೊಳಗೆ ಅವನು ಮೇಲಕ್ಕೇರಿಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲಾಗಿ ಬಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏನೆಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲುಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಏನಂದರೆ ಅವನು ಯಜ್ಞವೇದಿಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿ ಜ್ವಾಲೆಯೊಳಗೆ ಮೇಲಕ್ಕೇರಿ ಹೋದನು. ಅವರು ಇದನ್ನು ನೋಡುತ್ತಲೆ ನೆಲದ ಮೇಲೆ ಬೋರಲ ಬಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಮಾನೋಹ ಮತ್ತು ಅವನ ಹೆಂಡತಿಯ ಕಣ್ಣೆದುರಿನಲ್ಲಿಯೇ ಯಜ್ಞವೇದಿಕೆಯಿಂದ ಆಕಾಶಕ್ಕೆ ಹೋಗುತ್ತಿರುವ ಅಗ್ನಿಜ್ವಾಲೆಯಲ್ಲಿ ಆ ಯೆಹೋವನ ದೂತನು ಆಕಾಶಕ್ಕೆ ಏರಿ ಹೋದನು. ಮಾನೋಹ ಮತ್ತು ಅವನ ಹೆಂಡತಿ ಅದನ್ನು ಕಂಡು ನೆಲದ ಮೇಲೆ ಅಡ್ಡಬಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಅಗ್ನಿ ಜ್ವಾಲೆಯು ಬಲಿಪೀಠದಿಂದ ಆಕಾಶಕ್ಕೆ ಸರಿಯಾಗಿ ಏಳುವಾಗ, ಯೆಹೋವ ದೇವರ ದೂತನು ಬಲಿಪೀಠದ ಜ್ವಾಲೆಯಲ್ಲಿ ಮೇಲಕ್ಕೆ ಹೋದನು. ಅದನ್ನು ಮಾನೋಹನೂ, ಅವನ ಹೆಂಡತಿಯೂ ಕಂಡು, ನೆಲದ ಮೇಲೆ ಬೋರಲು ಬಿದ್ದರು. ಅಧ್ಯಾಯವನ್ನು ನೋಡಿ |