Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:23 - ಕನ್ನಡ ಸತ್ಯವೇದವು C.L. Bible (BSI)

23 ದೇವರನ್ನು ಕಣ್ಣಾರೆ ಕಂಡೆವಲ್ಲಾ!” ಎಂದನು. ಆಕೆ ಅವನಿಗೆ, “ಸರ್ವೇಶ್ವರ ನಮ್ಮನ್ನು ಕೊಲ್ಲಬೇಕೆಂದಿದ್ದರೆ ಅವರು ನಮ್ಮ ಕೈಯಿಂದ ಬಲಿಯನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ. ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಹೇಳುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆದರೆ ಆಕೆಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ, ನೈವೇದ್ಯವನ್ನೂ ಸ್ವೀಕರಿಸುತ್ತಿರಲಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ, ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಕೆಯು ಅವನಿಗೆ - ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಯಜ್ಞವನ್ನೂ ನೈವೇದ್ಯವನ್ನೂ ಸ್ವೀಕರಿಸುತ್ತಿದ್ದಿಲ್ಲ; ಈಗ ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿದ್ದಿಲ್ಲ, ಹೇಳುತ್ತಿದ್ದಿಲ್ಲ ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಅವನ ಹೆಂಡತಿಯು ಅವನಿಗೆ, “ಯೆಹೋವನು ನಮ್ಮನ್ನು ಕೊಲ್ಲಬಯಸುವುದಿಲ್ಲ. ಯೆಹೋವನು ನಮ್ಮನ್ನು ಕೊಲ್ಲಬೇಕೆಂದಿದ್ದರೆ ಆತನು ನಮ್ಮ ಕೈಯಿಂದ ಸರ್ವಾಂಗಹೋಮವನ್ನೂ ಧಾನ್ಯಸಮರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಆತನು ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ; ಇದನ್ನೆಲ್ಲ ನಮಗೆ ಹೇಳುತ್ತಿರಲಿಲ್ಲ” ಅಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಹೆಂಡತಿ ಅವನಿಗೆ, “ಯೆಹೋವ ದೇವರು ನಮ್ಮನ್ನು ಕೊಲ್ಲಬೇಕೆಂದಿದ್ದರೆ, ಅವರು ನಮ್ಮ ಕೈಯಿಂದ ದಹನಬಲಿಯನ್ನೂ, ಅರ್ಪಣೆಯನ್ನೂ ಸ್ವೀಕರಿಸುತ್ತಿರಲಿಲ್ಲ; ಇವುಗಳನ್ನೆಲ್ಲಾ ನಮಗೆ ತೋರಿಸುತ್ತಿರಲಿಲ್ಲ. ಈಗ ಹೇಳಿದವುಗಳನ್ನು ನಮಗೆ ತಿಳಿಯಮಾಡುತ್ತಿರಲಿಲ್ಲ,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:23
12 ತಿಳಿವುಗಳ ಹೋಲಿಕೆ  

ಹೀಗಿರಲಾಗಿ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕೈಗೆ, ಕಣ್ಣು ಹೇಳಲಾಗದು. ಅಂತೆಯೇ, “ನಿನ್ನ ಅವಶ್ಯಕತೆ ನನಗಿಲ್ಲ,” ಎಂದು ಕಾಲುಗಳಿಗೆ ತಲೆ ಹೇಳಲಾಗದು.


ಪ್ರಭುವಿನ ಮೈತ್ರಿ, ಭಯಭಕುತಿಯುಳ್ಳವರಿಗೆ I ಅಂಥವರಿಗೆ ವ್ಯಕ್ತ, ಆತನ ಒಡಂಬಡಿಕೆ II


ನಾನಿನ್ನು ನಿಮ್ಮನ್ನು ದಾಸರೆಂದು ಕರೆಯುವುದಿಲ್ಲ. ಧಣಿಯ ಕೆಲಸಕಾರ್ಯಗಳು ದಾಸನಿಗೆ ತಿಳಿಯವು. ನಾನಾದರೋ ಪಿತನಿಂದ ಕೇಳಿಸಿಕೊಂಡದ್ದನ್ನೆಲ್ಲಾ ನಿಮಗೆ ತಿಳಿಸಿದ್ದೇನೆ. ಈ ಕಾರಣ ನಿಮ್ಮನ್ನು ಗೆಳೆಯರೆಂದು ಕರೆದಿದ್ದೇನೆ.


ನಾನು ನನ್ನ ಪಿತನಲ್ಲಿ ಇರುವೆನು; ನೀವು ನನ್ನಲ್ಲಿ ಇರುವಿರಿ ಮತ್ತು ನಾನು ನಿಮ್ಮಲ್ಲಿ ಇರುವೆನು. ಇದನ್ನು ಆ ದಿನದಂದು ನೀವು ಅರಿತುಕೊಳ್ಳುವಿರಿ.


ನಿನ್ನ ನೆರವು, ಸಾಂತ್ವನ, ನನಗಿದೆಯೆಂದು I ನೀಡೊಂದು ಪ್ರಭು, ಶುಭಸೂಚನೆಯನು I ಅದನೋಡಿ ಶತ್ರು ಪಡಲಿ ಲಜ್ಜೆಯನು II


ವಕ್ರಬುದ್ಧಿಯವನು ಸರ್ವೇಶ್ವರನಿಗೆ ಅಸಹ್ಯನು, ಸತ್ಯಸಂಧರು ಆತನಿಗೆ ಪ್ರೀತಿಪಾತ್ರರು.


ಆಗ ಯೇಸು, “ನನ್ನನ್ನು ಪ್ರೀತಿಸುವವನು ನನ್ನ ಮಾತನ್ನು ಕೈಗೊಂಡು ನಡೆಯುವನು. ಅವನನ್ನು ನನ್ನ ಪಿತನೂ ಪ್ರೀತಿಸುವರು ಮತ್ತು ನಾವಿಬ್ಬರೂ ಅವನ ಬಳಿ ಬಂದು ಅವನಲ್ಲಿ ನೆಲೆಸುವೆವು.


ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II


ಆ ಮಹಿಳೆ ಒಬ್ಬ ಮಗನನ್ನು ಹೆತ್ತು ಅವನಿಗೆ ‘ಸಂಸೋನ’ ಎಂದು ಹೆಸರಿಟ್ಟಳು. ಹುಡುಗ ಬೆಳೆದು ದೊಡ್ಡವನಾದ. ಸರ್ವೇಶ್ವರನ ಆಶೀರ್ವಾದ ಅವನ ಮೇಲಿತ್ತು.


ನೆರವೇರಿಸಲಿ ಆತ ನಿನ್ನಿಷ್ಟಾರ್ಥಗಳನು I ಪೂರೈಸಲಿ ಪ್ರಭು ನಿನ್ನಭೀಪ್ಸೆಗಳೆಲ್ಲವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು