Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:4 - ಕನ್ನಡ ಸತ್ಯವೇದವು C.L. Bible (BSI)

4 ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧಪದಾರ್ಥವನ್ನೂ ಊಟಮಾಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:4
8 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ದ್ರಾಕ್ಷಾಫಲವನ್ನು ತಿನ್ನದಿರಲಿ; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರಲಿ; ನಿಷಿದ್ಧಾಹಾರವನ್ನು ಮುಟ್ಟದಿರಲಿ; ಹೀಗೆ ನಾನು ಆಜ್ಞಾಪಿಸಿದ್ದನ್ನೆಲ್ಲಾ ಕೈಗೊಳ್ಳಲಿ,” ಎಂದನು.


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ಇದರಿಂದ ಶುದ್ಧಾಶುದ್ಧಗಳನ್ನೂ, ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವುದಕ್ಕೆ ನಿಮ್ಮಿಂದಾಗುವುದು


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವುವುಗಳೆಲ್ಲಾ ನಿಮಗೆ ಅಶುದ್ಧವಾಗಿರುವುವು. ಅವುಗಳ ಹೆಣ ಯಾವನಿಗೆ ಸೋಂಕುವುದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಸರ್ವೇಶ್ವರನ ದೂತನು ಮಾನೋಹನಿಗೆ, “ನಾನು ಹೇಳಿದ್ದನ್ನೆಲ್ಲಾ ಈಕೆ ಜಾಗರೂಕತೆಯಿಂದ ಕೈಗೊಳ್ಳಲಿ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು