Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 13:6 - ಕನ್ನಡ ಸತ್ಯವೇದವು C.L. Bible (BSI)

6 ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವರಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತರುವಾಯ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ - ಒಬ್ಬ ದೇವಪುರುಷನು ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದಂತಿದ್ದು ಭಯಂಕರನಾಗಿದ್ದನು. ನೀನು ಎಲ್ಲಿಂದ ಬಂದಿ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಆ ಸ್ತ್ರೀಯು ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷನು ನನ್ನಲ್ಲಿಗೆ ಬಂದನು. ಅವನು ದೇವರಿಂದ ಬಂದ ದೇವದೂತನಂತೆ ಕಂಡನು. ನನಗೆ ಭಯವಾಯಿತು. ನಾನು ಅವನಿಗೆ, ‘ನೀನು ಎಲ್ಲಿಂದ ಬಂದೆ?’ ಎಂದು ಕೇಳಲಿಲ್ಲ; ಅವನೂ ನನಗೆ ತನ್ನ ಹೆಸರನ್ನು ಹೇಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಆ ಸ್ತ್ರೀಯು ಬಂದು ತನ್ನ ಗಂಡನಿಗೆ, “ಒಬ್ಬ ದೇವರ ಮನುಷ್ಯ ನನ್ನ ಹತ್ತಿರ ಬಂದಿದ್ದನು. ಅವನ ರೂಪವು ದೇವದೂತನ ರೂಪದ ಹಾಗೆ ಮಹಾ ಭಯಂಕರವಾಗಿತ್ತು. ನಾನು ಅವನನ್ನು ಎಲ್ಲಿಂದ ಬಂದೆ ಎಂದು ಕೇಳಲಿಲ್ಲ; ಅವನು ತನ್ನ ಹೆಸರನ್ನು ನನಗೆ ತಿಳಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 13:6
29 ತಿಳಿವುಗಳ ಹೋಲಿಕೆ  

ಆಗ ಆ ಆಳು, “ಇಗೋ, ಈ ಪಟ್ಟಣದಲ್ಲಿ ಗೌರವಸ್ಥನಾದ ಒಬ್ಬ ದೈವಪುರುಷ ಇದ್ದಾನೆ. ಅವನು ನುಡಿಯುವುದೆಲ್ಲಾ ನೆರವೇರುತ್ತದೆ; ಅಲ್ಲಿಗೆ ಹೋಗೋಣ; ಒಂದು ವೇಳೆ ಅವನು ನಾವು ಹೋಗಬೇಕಾದ ಮಾರ್ಗವನ್ನು ತಿಳಿಸುವನು,” ಎಂದನು.


ದೇವಪುರುಷನದ ಮೋಶೆ ದೇಹವನ್ನು ಬಿಡುವುದಕ್ಕಿಂತ ಮುಂಚೆ ಇಸ್ರಯೇಲರನ್ನು ಕುರಿತು ಹೇಳಿದ ಆಶೀರ್ವಚನಗಳಿವು:


ನಾನು ಅವರನ್ನು ಕಂಡಾಗ, ಸತ್ತವನಂತಾದೆ. ಅವರ ಪಾದಗಳ ಮುಂದೆ ಬಿದ್ದೆ. ಅವರು ತಮ್ಮ ಬಲಗೈಯನ್ನು ನನ್ನ ಮೇಲಿಟ್ಟು, “ಭಯಪಡಬೇಡ, ನಾನೇ ಮೊದಲನೆಯವನೂ ಕಡೆಯವನೂ


ನ್ಯಾಯಸಭೆಯಲ್ಲಿ ಕುಳಿತಿದ್ದವರೆಲ್ಲರೂ ಅವನ ಮುಖವನ್ನೇ ದಿಟ್ಟಿಸಿ ನೋಡಿದರು. ಅದು ದೇವದೂತನ ಮುಖದಂತೆ ಕಂಗೊಳಿಸಿತು.


ಪ್ರಾರ್ಥನೆಮಾಡುವ ಸಮಯದಲ್ಲಿ ಯೇಸುವಿನ ಮುಖಚರ್ಯೆಯು ಮಾರ್ಪಟ್ಟಿತು. ಅವರ ಉಡುಪು ಬೆಳ್ಳಗೆ ಪ್ರಜ್ವಲಿಸಿತು.


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಆಗ ಅವನು ನನಗೆ, “ಅತಿಪ್ರಿಯ ದಾನಿಯೇಲನೇ, ನಾನು ನುಡಿಯುವ ಮಾತುಗಳನ್ನು ಗ್ರಹಿಸು. ಎದ್ದು ನಿಂತುಕೋ. ನಾನು ನಿನ್ನ ಬಳಿಗೆ ಕಳುಹಿಸಲ್ಪಟ್ಟವನು,” ಎಂದನು.


ಕಣ್ಣೆತ್ತಿ ನೋಡಲು, ನಾರುಬಟ್ಟೆಯನ್ನು ಹೊದ್ದುಕೊಂಡಿದ್ದ, ಊಫಜಿನ ಬಂಗಾರದ ಪಟ್ಟಿಯನ್ನು ಸೊಂಟಕ್ಕೆ ಬಿಗಿದುಕೊಂಡಿದ್ದ, ಒಬ್ಬ ವ್ಯಕ್ತಿ ನನಗೆ ಕಾಣಿಸಿದ.


ಅದರಂತೆ ಅವನು ನನ್ನ ಹತ್ತಿರಕ್ಕೆ ಬಂದನು. ನಾನು ಭಯಭ್ರಾಂತನಾಗಿ ಅಡ್ಡಬಿದ್ದೆ. ನನಗೆ ಅವನು, “ನರಪುತ್ರನೇ, ಇದು ಅಂತ್ಯಕಾಲದಲ್ಲಿ ನೆರವೇರುವ ಕನಸು ಎಂಬುದು ನಿನಗೆ ಮನದಟ್ಟಾಗಿರಲಿ;” ಎಂದು ಹೇಳಿದನು.


ಆ ಮಹಿಳೆ ತನ್ನ ಗಂಡನಿಗೆ, “ಯಾವಾಗಲೂ ಈ ದಾರಿಯಿಂದ ಹೋಗುತ್ತಾ ಬರುತ್ತಾ ಇರುವ ಆ ವ್ಯಕ್ತಿ ಒಬ್ಬ ಸಂತನು ಹಾಗು ದೈವಪುರುಷನು ಆಗಿರುತ್ತಾನೆಂದು ನನಗೆ ಗೊತ್ತಾಯಿತು.


ದೇವರ ಭಕ್ತನಾದ ನೀನು ಈ ಎಲ್ಲಾ ಕೇಡುಗಳಿಂದ ದೂರವಿರು. ದೇವರೊಡನೆ ಸತ್ಸಂಬಂಧ, ಭಕ್ತಿ, ವಿಶ್ವಾಸ, ಪ್ರೀತಿ, ಸ್ಥಿರಚಿತ್ತ, ಸಾತ್ವಿಕತೆ - ಇವೇ ಮೊದಲಾದ ಸದ್ಗುಣಗಳನ್ನು ಸಂಪಾದಿಸಲು ಪ್ರಯತ್ನಿಸು.


ಎಲೀಷನು ಆಕೆಗೆ, “ನೀನು ಬರುವ ವರ್ಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವೆ,” ಎಂದನು. ಅದಕ್ಕೆ ಆಕೆ, “ದೈವಪುರುಷರೇ, ಒಡೆಯರೇ, ಹೀಗೆ ಹೇಳಿ ನಿಮ್ಮ ದಾಸಿಯನ್ನು ವಂಚಿಸಬೇಡಿ,” ಎಂದು ನುಡಿದಳು.


ಆಗ ಆಕೆ, “ನೀವು ದೈವಪುರುಷರೆಂದೂ ನಿಮ್ಮ ಬಾಯಿಂದ ಬಂದ ಸರ್ವೇಶ್ವರನ ಮಾತು ಸತ್ಯವೆಂದೂ ಈಗ ನನಗೆ ಗೊತ್ತಾಯಿತು,” ಎಂದು ಹೇಳಿದಳು.


ಆಗ ಆಕೆ ಎಲೀಯನಿಗೆ, “ದೈವಪುರುಷನೇ, ನನ್ನ ವಿರುದ್ಧ ನಿನಗೇನಿದೆ? ನೀನು ನನ್ನ ಪಾಪವನ್ನು ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿಯೋ?” ಎಂದಳು.


ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ;


ಆಗ ಮಾನೋಹನು ಆತ ಸರ್ವೇಶ್ವರನ ದೂತನೆಂದು ತಿಳಿದು ತನ್ನ ಹೆಂಡತಿಗೆ, “ನಾವು ಸಾಯಬೇಕು.


ಮಾನೋಹನು ಇದನ್ನು ಕೇಳಿ ಸರ್ವೇಶ್ವರನಿಗೆ, “ಸ್ವಾಮೀ, ದಯವಿರಲಿ; ನೀವು ಕಳುಹಿಸಿದ ದೇವಪುರುಷ ಇನ್ನೊಂದು ಸಾರಿ ನಮ್ಮ ಬಳಿಗೆ ಬಂದು ಹುಟ್ಟಲಿರುವ ಮಗುವಿಗಾಗಿ ಮಾಡಬೇಕಾದುದ್ದನ್ನು ನಮಗೆ ಬೋಧಿಸಲಿ,” ಎಂದು ಬೇಡಿಕೊಳ್ಳಲು ದೇವರು ಅವನ ಮೊರೆಯನ್ನು ಕೇಳಿದರು.


ಯೆಹೋಶುವನು ಗಿಲ್ಗಾಲಿನಲ್ಲಿದ್ದಾಗ ಯೆಹೂದ ಕುಲದವರು ಅವನ ಬಳಿಗೆ ಬಂದರು. ಅವರಲ್ಲಿ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಯೆಹೋಶುವನಿಗೆ, “ಸರ್ವೇಶ್ವರ ಕಾದೇಶ್ ಬರ್ನೇಯದಲ್ಲಿ ನಮ್ಮಿಬ್ಬರ ವಿಷಯವಾಗಿ ದೇವರ ಭಕ್ತನಾದ ಮೋಶೆಗೆ ಹೇಳಿದ್ದು ನಿಮಗೆ ಚೆನ್ನಾಗಿ ಗೊತ್ತಿದೆ.


ಅದೂ ಅಲ್ಲದೆ, “ನಾನು ನಿನ್ನ ತಂದೆಯ ದೇವರು, ಅಬ್ರಹಾಮನ ದೇವರು, ಇಸಾಕನ ದೇವರು, ಯಕೋಬನ ದೇವರು,” ಎಂದರು. ಆಗ ಮೋಶೆ ದೇವರನ್ನು ದಿಟ್ಟಿಸಿ ನೋಡಲು ಭಯಪಟ್ಟು ಮುಖವನ್ನು ಮುಚ್ಚಿಕೊಂಡನು.


ಅಲ್ಲಿ ಮುಳ್ಳಿನ ಪೊದೆಯೊಂದರ ಒಳಗೆ ಉರಿಯುವ ಬೆಂಕಿಯಲ್ಲಿ ಸರ್ವೇಶ್ವರನ ದೂತನು ಅವನಿಗೆ ಕಾಣಿಸಿಕೊಂಡನು. ಮೋಶೆ ನೋಡಿದನು. ಆ ಮುಳ್ಳಿನ ಪೊದೆ ಉರಿಯುತ್ತಲೇ ಇತ್ತು; ಆದರೆ ಸುಟ್ಟುಹೋಗದೆ ಇತ್ತು.


ಯಕೋಬನು, “ನಿಮ್ಮ ಹೆಸರನ್ನು ದಯವಿಟ್ಟು ನನಗೆ ತಿಳಿಸಬೇಕು,” ಎಂದಾಗ ಆ ಪುರುಷ, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲೇ ಅವನನ್ನು ಆಶೀರ್ವದಿಸಿದನು.


ಅವನು ಕಣ್ಣೆತ್ತಿ ನೋಡಿದಾಗ ಯಾರೋ ಮೂರು ಮಂದಿ ಪುರುಷರು ಹತ್ತಿರದಲ್ಲೇ ನಿಂತಿದ್ದರು. ಅವರನ್ನು ಎದುರುಗೊಳ್ಳಲು ಅಬ್ರಹಾಮನು ಕೂಡಲೆ ಗುಡಾರದ ಬಾಗಿಲಿನಿಂದ ಓಡಿಬಂದು, ತಲೆಬಾಗಿ ನಮಸ್ಕರಿಸಿ,


ಆಮೇಲೆ ಸರ್ವೇಶ್ವರನ ದೂತನು ಬಂದು ಒಫ್ರದಲ್ಲಿದ್ದ ಓಕ್ ಮರದ ಅಡಿಯಲ್ಲಿ ಕುಳಿತುಕೊಂಡನು. ಅದು ಅಬೀಯೆಜೆರನ ಗೋತ್ರದವನಾದ ಯೋವಾಷನದಾಗಿತ್ತು. ಅವನ ಮಗ ಗಿದ್ಯೋನನು ಮಿದ್ಯಾನ್ಯರಿಗೆ ಗೊತ್ತಾಗದ ಹಾಗೆ ಅಲ್ಲಿ ದ್ರಾಕ್ಷಿಯ ಆಲೆಯ ಮರೆಯಲ್ಲಿ ಗೋದಿಯನ್ನು ಬಡಿಯುತ್ತಿದ್ದನು.


ಒಂದಾನೊಂದು ದಿನ ಸರ್ವೇಶ್ವರನ ದೂತ ಆಕೆಗೆ ಪ್ರತ್ಯಕ್ಷನಾಗಿ, “ಇಗೋ, ಬಂಜೆಯಾಗಿ ಮಕ್ಕಳಿಲ್ಲದಿರುವ ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ.


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ಆದುದರಿಂದ ಆಕೆ ಬೇಗನೆ ಗಂಡನ ಬಳಿಗೆ ಹೋಗಿ, “ಮೊನ್ನೆ ನನಗೆ ಪ್ರತ್ಯಕ್ಷನಾದ ಪುರುಷ ತಿರುಗಿ ಬಂದಿದ್ದಾನೆ,” ಎಂದು ತಿಳಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು