Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 14:1 - ಕನ್ನಡ ಸತ್ಯವೇದವು C.L. Bible (BSI)

1 ಸಂಸೋನನು ತಿಮ್ನಾ ಊರಿಗೆ ಇಳಿದುಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ, ತಿರುಗಿ ತಂದೆತಾಯಿಗಳ ಬಳಿಗೆ ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಂಸೋನನು ಗಟ್ಟಾ ಇಳಿದು ತಿಮ್ನಾ ಊರಿಗೆ ಹೋಗಿ ಅಲ್ಲಿನ ಫಿಲಿಷ್ಟಿಯರ ಹೆಣ್ಣುಗಳಲ್ಲಿ ಒಬ್ಬಳನ್ನು ನೋಡಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಂಸೋನನು ತಿಮ್ನಾ ನಗರಕ್ಕೆ ಹೋದನು. ಅವನು ಅಲ್ಲಿ ಒಬ್ಬ ಫಿಲಿಷ್ಟಿಯರ ತರುಣಿಯನ್ನು ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಸಂಸೋನನು ತಿಮ್ನಾತಿಗೆ ಇಳಿದು, ಅಲ್ಲಿ ತಿರುಗಿ ಫಿಲಿಷ್ಟಿಯರ ಪುತ್ರಿಯರ ಒಬ್ಬ ಸ್ತ್ರೀಯನ್ನು ಕಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 14:1
12 ತಿಳಿವುಗಳ ಹೋಲಿಕೆ  

ಇತ್ಲಾ, ಏಲೋನ್, ತಿಮ್ಮಾ, ಎಕ್ರೋನ್, ಎಲ್ತೆಕೇ,


ಅಲ್ಲಿಂದ ಪಶ್ಚಿಮದಲ್ಲಿ ಇರುವ ಸೇಯಿರ್ ಬೆಟ್ಟದ ಕಡೆಗೆ ತಿರುಗಿಕೊಂಡು ಕೆಸಾಲೋನ್ ಎನಿಸಿಕೊಳ್ಳುವ ಯಾರೀಮ್ ಬೆಟ್ಟದ ಉತ್ತರಮಾರ್ಗವಾಗಿ ಇಳಿಯುತ್ತಾ ಬೇತ್ ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಬಂದು


ಲೋಕಸಂಬಂಧವಾದ ದೈಹಿಕ ದುರಿಚ್ಛೆ, ಕಣ್ಣಿನ ಕಾಮುಕತೆ, ಐಶ್ವರ್ಯದ ಅಹಂಭಾವ - ಇಂಥವು ಪಿತನಿಂದ ಬಂದುವಲ್ಲ, ಲೋಕದಿಂದಲೇ ಬಂದುವು.


ವ್ಯರ್ಥವಾದವುಗಳು ನಾಟದಿರಲಿ ಕಣ್ಗೆ I ಚೇತನ ನೀಡು ನಿನ್ನ ಮಾರ್ಗದಲಿ ನನಗೆ II


“ಕನ್ಯೆಯನು (ಕಾಮದೃಷ್ಟಿಯಿಂದ) ನೋಡೆನೆಂದು ಮಾಡಿಕೊಂಡಿರುವೆ ನನ್ನ ಕಣ್ಣುಗಳೊಡನೆ ಒಪ್ಪಂದವನು.


ಒಂದು ದಿನ ಸಂಜೆ ಹೊತ್ತಿನಲ್ಲಿ ದಾವೀದನು ಮಂಚದಿಂದೆದ್ದು ಅರಮನೆಯ ಮಾಳಿಗೆಯ ಮೇಲೆ ತಿರುಗಾಡುತ್ತಿದ್ದನು. ಆಗ ಅಲ್ಲಿಂದ ಬಹು ಸುಂದರಿಯಾದ ಒಬ್ಬ ಸ್ತ್ರೀ ಸ್ನಾನಮಾಡುವುದನ್ನು ಕಂಡನು.


ಈ ಮನುಷ್ಯಪುತ್ರಿಯರ ಚೆಲುವನ್ನು ಕಂಡು ದೇವಪುತ್ರರು ತಮಗೆ ಇಷ್ಟಬಂದವರನ್ನೆಲ್ಲ ಮದುವೆಯಾದರು.


ಇದಲ್ಲದೆ, ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್ ಕುಲದ ಪಾಳೆಯದಲ್ಲಿದ್ದಾಗ ಸರ್ವೇಶ್ವರನ ಆತ್ಮ ಅವನನ್ನು ಚೇತನಗೊಳಿಸತೊಡಗಿತು.


ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು.


ತರುವಾಯ ಸಂಸೋನನು ಗಾಜಾಕ್ಕೆ ಹೋದಾಗ ಅಲ್ಲಿ ಒಬ್ಬ ವೇಶ್ಯೆಯನ್ನು ಕಂಡು ಅವಳ ಬಳಿಗೆ ಹೋದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು